ಕೊರಗಜ್ಜನ ವೇಷಧರಿಸಿ ಅವಹೇಳನ ವಿಚಾರ : ಸಾಮೂಹಿಕ ಪ್ರಾರ್ಥನೆ

ಪುತ್ತೂರು: ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಅಗರಿಯಲ್ಲಿ ಮುಸ್ಲಿಂ ಸಮುದಾಯದ ವರನೊಬ್ಬನು ಸ್ವಾಮಿ ಕೊರಗಜ್ಜನ ವೇಷಧರಿಸಿ ಅಪಮಾನ ಮಾಡಿದ ಘಟನೆಯ ವಿರುದ್ಧ ಮಂಗಳವಾರ ಕಾಸರಗೋಡು, ದ.ಕ. ಮತ್ತು ಉಡುಪಿ ಜಿಲ್ಲೆಗಳ 1 ಸಾವಿರ ಶ್ರದ್ಧಾ ಕೇಂದ್ರಗಳಲ್ಲಿ ಹಿಂದೂಗಳಿಂದ ಸಾಮೂಹಿಕ ಪ್ರಾರ್ಥನೆ ನಡೆಯಲಿದೆ ಎಂದು ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಹೇಳಿದರು.

ಅವರು ಸೋಮವಾರ ಪುತ್ತೂರು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಾಮೂಹಿಕ ಪ್ರಾರ್ಥನೆಗೆ ಹೋರಾಟ ನಿಲ್ಲುವುದಿಲ್ಲ. ಪೊಲೀಸರು ಈ ಪ್ರಕರಣದಲ್ಲಿ ಭಾಗಿಯಾದ ಮಂಜೇಶ್ವರ ಕಡೆಯ ಎಲ್ಲಾ ಆರೋಪಿಗಳನ್ನು ಬಂಧಿಸುವವರೆಗೆ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ಸಂಘಟನೆಗಳು ವಿರಮಿಸುವುದಿಲ್ಲ. ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ವಿಟ್ಲ ಪರಿಸರದಲ್ಲಿ ಉಗ್ರ ಹೋರಾಟವನ್ನು ನಡೆಸಲಾಗುವುದು. ಇಲ್ಲಿ ಆಗುವ ಅನಾಹುತಗಳಿಗೆ ಪೆÇಲೀಸರೇ ಕಾರಣ ಹೊರತು ಹಿಂದೂ ಸಂಘಟನೆಯ ಕಾರ್ಯಕರ್ತರಲ್ಲ ಎಂದು ಮುರಳೀಕೃಷ್ಣ ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಬಜರಂಗದಳ ಪುತ್ತೂರು ಜಿಲ್ಲಾ ಸಂಯೋಜಕ ಭರತ್ ಕುಮ್ಡೇಲ್, ವಿಟ್ಲ ಪ್ರಖಂಡ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಪದ್ಮನಾಭ ಕಟ್ಟೆ, ಪುತ್ತೂರು ಜಿಲ್ಲಾ ವಿಶ್ವ ಹಿಂದೂ ಪರಿಷತ್ ಪ್ರಚಾರ ಪ್ರಸಾರ ಪ್ರಮುಖ್ ಶ್ರೀಧರ ತೆಂಕಿಲ ಉಪಸ್ಥಿತರಿದ್ದರು.

Related Posts

Leave a Reply

Your email address will not be published. Required fields are marked *

How Can We Help You?