ಕಾಂಗ್ರೆಸ್ ನಡೆಸುತ್ತಿರುವುದು ಮೇಕೆದಾಟು ಅಲ್ಲ ಕುರ್ಚಿಯ ಹೋರಾಟ : ಶಾಸಕ ಸಂಜೀವ ಮಠಂದೂರು ವ್ಯಂಗ್ಯ

ಪುತ್ತೂರು. ಕಾಂಗ್ರೇಸ್ ರಾಜ್ಯದ ಜನತೆಯ ಆರೊಗ್ಯದ ಮೇಲೆ ಚೆಲ್ಲಾಟವಾಡುತ್ತಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ. ಕಾಂಗ್ರೆಸ್ ಪಕ್ಷ ಮೇಕೆದಾಟು ವಿಚಾರದಲ್ಲಿ ನಡೆಸುತ್ತಿರುವ ಪಾದಯಾತ್ರೆ ಕುರಿತು ಪುತ್ತೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು  ಇದು ಸಿದ್ಧರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ನಡೆಯುತ್ತಿರುವ ಕುರ್ಚಿ ಹೋರಾಟವಾಗಿದ್ದು,ಮೇಕೆದಾಟಿಗೂ ಈ ಪಾದಯಾತ್ರೆಗೂ ಯಾವುದೇ ಸಂಬಂದವಿಲ್ಲ ಎಂದರು.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ದೃಷ್ಟಿಯಲ್ಲಿಟ್ಟುಕೊಂಡು ಚುನಾವಣೆ ಗೆಲ್ಲೋದು ಹೇಗೆ, ಗೆದ್ದಲ್ಲಿ ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ಉದ್ಧೇಶವನ್ನಿಟ್ಟುಕೊಂಡು ಈ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಸಿದ್ಧರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಹಿತಾಸಕ್ತಿಯೇ ಮುಖ್ಯವಾಗಿದ್ದು, ರಾಜ್ಯದ ಜನತೆಯ ಹಿತಾಸಕ್ತಿ ಕಿಂಚಿತ್ತೂ ಇಲ್ಲ ಎಂದ ಅವರು ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಸಮಯದಲ್ಲಿ ಕಾಂಗ್ರೇಸ್ ಪಾದಯಾತ್ರೆ ಮಾಡುವ ಮೂಲಕ ಕೊರೊನಾ ಹರಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ ಅವರು ಕಾಂಗ್ರೆಸ್ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಅವರು ಸರಕಾರವನ್ನು ಒತ್ತಾಯಿಸಿದ್ದಾರೆ.

Related Posts

Leave a Reply

Your email address will not be published. Required fields are marked *

How Can We Help You?