ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಿ : ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿಕೆ

ಪುತ್ತೂರು: ಕೊರೊನಾ ರೂಪಾಂತರಿ ತಳಿಗಳಿಂದಾಗಿ ದಿನನಿತ್ಯ ಜನಸಾಮಾನ್ಯರ ಬದುಕು ಸಂಕಷ್ಟಕ್ಕೆ ಒಳಗಾಗುತ್ತಿದ್ದು, ಆರ್ಥಿಕ ಸ್ಥಿತಿಗತಿಗಳು ಕುಸಿಯುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರವು ಹಲವಾರು ಯೋಜನೆಗಳ ಮೂಲಕ ಸೌಲಭ್ಯಗಳನ್ನು ನೀಡುತ್ತಿದೆ. ಸರ್ಕಾರಿ ಯೋಜನೆಗಳನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳಬೇಕು ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು.

ಅವರು ಪುತ್ತೂರು ಪುರಭವನದಲ್ಲಿ ನಗರಸಭೆಯ ವತಿಯಿಂದ ಪ್ರಧಾನ ಮಂತ್ರಿ ಅವಾಝ್ ಯೋಜನೆಯಡಿ ಪ.ಜಾತಿ ಮತ್ತು ಪಂಗಡದ ಬಡವರಿಗಾಗಿ  ಶೇ. 24.10 ನಿಧಿ, ಇತರ ಜಾತಿಯ ಬಡಜನರಿಗಾಗಿ ಶೇ. 7.25 ನಿಧಿ, ವಿಕಲಚೇತನರಿಗಾಗಿ ಶೇ. 5ರ ನಿಧಿಯಲ್ಲಿ  `ವಿವಿಧ ಸವಲತ್ತು ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಂಜೂರಾತಿ ಪತ್ರ ನೀಡಿ ಮಾತನಾಡಿದರು. 

sanjeevamatandoor

 ಪುತ್ತೂರು ನಗರಸಭೆಯ ವತಿಯಿಂದ ನೀಡಲಾದ ವಿವಿದ ಸವಲತ್ತು ವಿತರಣಾ ಕಾರ್ಯಕ್ರಮ ಉದ್ಘಾಟಿಸಿ, ಮಂಜೂರಾತಿ ಪತ್ರ ನೀಡಿ ಮಾತನಾಡಿದರು.

ವೇದಿಕೆಯಲ್ಲಿ ನಗರಸಭಾ ಅಧ್ಯಕ್ಷ ಕೆ. ಜೀವಂಧರ್ ಜೈನ್ ನಗರಸಭಾ ಪೌರಾಯುಕ್ತ ಮಧು ಎಸ್ ಮನೋಹರ್, ನಗರಸಭಾ ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ ಬನ್ನೂರು ಉಪಸ್ಥಿತರಿದ್ದರು.

Related Posts

Leave a Reply

Your email address will not be published. Required fields are marked *

How Can We Help You?