ಶೇಡಿಮನೆಯ ಹಳೆ ವಿದ್ಯಾರ್ಥಿಗಳಿಂದ ಮುನ್ನೂರಕ್ಕೂ ಹೆಚ್ಚು ಪುಸ್ತಕಗಳು ಗ್ರಂಥಾಲಯಕ್ಕೆ ಕೊಡುಗೆ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶೇಡಿಮನೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶೇಡಿಮನೆ ಅರಸಮ್ಮಕಾನು ಸ್ವಾಮಿ ವಿವೇಕಾನಂದ ಜಯಂತಿಯ ಸಲುವಾಗಿ ಶಾಲೆಯ ಹಳೆ ವಿದ್ಯಾರ್ಥಿಗಳು ಸುಮಾರು ಮುನ್ನೂರಕ್ಕೂ ಹೆಚ್ಚು ಪುಸ್ತಕಗಳನ್ನು ಶಾಲೆಯ ಗ್ರಂಥಾಲಯ ಕೊಡುಗೆಯಾಗಿ ನೀಡಿದರು.

old shedimane old student

ಯುವದಿನದ ಈ ಸಂಭ್ರಮದ ರೂವಾರಿ ಹಳೆ ವಿದ್ಯಾರ್ಥಿ ವೆಂಕಟರಮಣ ಪೂಜಾರಿ ಇವರ ನೇತೃತ್ವದಲ್ಲಿ ಪುಸ್ತಕಗಳನ್ನು ಶಾಲೆಯ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಲಾಯಿತು… ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ಶ್ರೀಯುತ ವಸಂತ ಪೂಜಾರಿ ಇವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಿದ್ದು, ಈ ಶುಭಸಂದರ್ಭದಲ್ಲಿ ಶಾಲೆಯ ನಿವೃತ್ತ ಶಿಕ್ಷಕರಾದ ಅಣ್ಣಯ್ಯ ಶೆಟ್ಟಿ, ಶಿವರಾಮಶೆಟ್ಟಿ ಹಾಗೂ ಅನಂತ ತಂತ್ರಿ, ವೃತ್ತ ಅರಣ್ಯಾಧಿಕಾರಿಗಳಾದ ರತ್ನಾಕರ ಶೆಟ್ಟಿ ಮತ್ತು ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಉದಯಕುಮಾರ್ ಶೆಟ್ಟಿ ಹಾಗೂ ಶಾಲಾ ಆರ್ಥಿಕ ಸಮಿತಿಯ ಅಧ್ಯಕ್ಷರಾದ ಸುಧಾಕರ್ ಶೆಟ್ಟಿ ಇವರ ಉಪಸ್ಥಿತಿಯೊಂದಿಗೆ ಜೊತೆಗೆ ಕೋವಿಡ್ ಮಾರ್ಗಸೂಚಿಯಂತೆ ಕಾರ್ಯಕ್ರಮ ಸರಳವಾಗಿ ನಡೆಸಿ ಕಾರ್ಯಕ್ರಮ ಯಶಸ್ವಿಯಾಯಿತು. ಈ ಶುಭಸಂದರ್ಭದಲ್ಲಿ ಹೆಮ್ಮೆಯ ಹಳೆ ವಿದ್ಯಾರ್ಥಿಗಳು,ಪೆÇೀಷಕವ್ರಂದ ಹಾಗೂ ಸ್ಥಳೀಯರು ಪಾಲ್ಗೊಂಡಿದ್ದರು.

Related Posts

Leave a Reply

Your email address will not be published.

How Can We Help You?