ಪಂಚರಾಜ್ಯ ಚುನಾವಣೆ: ಯುಪಿ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ; ಆದಿತ್ಯನಾಥ್ ಗೋರಖ್‌ಪುರದಿಂದ ಸ್ಪರ್ಧೆ

ಗೋವಾ, ಮಣಿಪುರ, ಪಂಜಾಬ್, ಉತ್ತರಾಖಂಡ ಮತ್ತು ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗಳು ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ನಡೆಯಲಿವೆ. ಚುನಾವಣೆಗೆ ಸಂಬಂಧಿಸಿದಮತೆ ಇಂದಿನ ಪ್ರಮುಖ ಬೆಳವಣಿಗೆಗಳ ಮಾಹಿತಿ ಇಲ್ಲಿದೆ:

1 – ಉತ್ತರ ಪ್ರದೇಶ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗಿದೆ. ಮುಖ್ಯಮಂತ್ರಿ ಆದಿತ್ಯನಾಥ್ ಅವರು ಗೋರಖ್‌ಪುರದಿಂದ ಸ್ಪರ್ಧಿಸಲಿದ್ದಾರೆ. ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಪ್ರಯಾಗರಾಜ್ ಜಿಲ್ಲೆಯ ಸಿರತು ನಗರದಿಂದ ಸ್ಪರ್ಧಿಸಲಿದ್ದಾರೆ. ಚುನಾವಣೆಯ ಎರಡನೇ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.


2 – ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯನ್ನು ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ತಳ್ಳಿಹಾಕಿದ್ದಾರೆ. ಯಾದವ್ ಅವರು “ಬಹುಜನ ಸಮಾಜ” ಅಥವಾ ದಲಿತ ಸಮುದಾಯದ ಸದಸ್ಯರನ್ನು ಅವಮಾನಿಸಿದ್ದಾರೆ ಎಂದು ಆಜಾದ್ ಆರೋಪಿಸಿದ್ದಾರೆ.


3 – ಉತ್ತರ ಪ್ರದೇಶ ಚುನಾವಣೆಗೆ 53 ಅಭ್ಯರ್ಥಿಗಳಿರುವ ಮೊಲದ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ. ಇನ್ನೆರಡು ದಿನದಲ್ಲಿ ಉಳಿದ ಐವರು ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.


4 – ಏತನ್ಮಧ್ಯೆ, ಚಾರ್ತಾವಾಲ್ ನಗರದಿಂದ ತಮಗೆ ಟಿಕೆಟ್ ನೀಡುವುದಾಗಿ ಭರವಸೆ ನೀಡಿ ಬಿಎಸ್ಪಿ ಪಕ್ಷದ ಹಿರಿಯ ಕಾರ್ಯಕರ್ತರು 67 ಲಕ್ಷ ರೂಪಾಯಿ ವಂಚಿಸಿದ್ದಾರೆ ಎಂದು ಆರೋಪಿಸಿ ಬಿಎಸ್ಪಿ ನಾಯಕ ಅರ್ಷದ್ ರಾಣಾ ಅವರು ಪೊಲೀಸ್ ದೂರು ದಾಖಲಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.


5 – ಉತ್ತರ ಪ್ರದೇಶದ ಮಹಿಳಾ ಸಂಘಟನೆ ಗುಲಾಬಿ ಗ್ಯಾಂಗ್‌ನ ಸಂಸ್ಥಾಪಕಿ ಸಂಪತ್ ಪಾಲ್ ದೇವಿ ಅವರು ವಿಧಾನಸಭೆ ಚುನಾವಣೆಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸಲಿರುವ 125 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಗುರುವಾರ ಬಿಡುಗಡೆ ಮಾಡಿದೆ.


6 – ಪಂಜಾಬ್ ಅಸೆಂಬ್ಲಿಯ 117 ಸ್ಥಾನಗಳಲ್ಲಿ ಸ್ಪರ್ಧಿಸಿರುವ ಆಮ್ ಆದ್ಮಿ ಪಕ್ಷ ಕೇವಲ 12 ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ ಎಂದು ವರದಿಯಾಗಿದೆ. ಪಕ್ಷವು ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಮಾಸಿಕ 1,000 ರೂ. ಪ್ರೋತ್ಸಾಹ ಧನ ನೀಡುವುದಾಗಿ ಪಕ್ಷವು ಭರವಸೆ ನೀಡಿದೆ. ಆದರೆ, ಮಹಿಳೆಯರಿಗೆ ಚುನಾವಣೆಯಲ್ಲಿ ಹೆಚ್ಚಿನ ಆದ್ಯತೆ ನೀಡಿಲ್ಲ ಎಂಬುದು ಆಶ್ಚರ್ಯಕರವಾಗಿದೆ.

7 – ಪಂಜಾಬ್ ಸಚಿವ ಜೋಗಿಂದರ್ ಮಾನ್ ಅವರು ಕಾಂಗ್ರೆಸ್ ತೊರೆದು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಎಸ್‌ಸಿ ವಿದ್ಯಾರ್ಥಿವೇತನ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಪಕ್ಷವು ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಮತ್ತು ಫಗ್ವಾರ ಅವರಿಗೆ ಜಿಲ್ಲಾ ಸ್ಥಾನಮಾನ ನೀಡದಿರುವ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿರುವ ಮಾನ್ ಅವರು ಪಕ್ಷ ತೊರೆದಿದ್ದಾರೆ ಎಂದು ವರದಿಯಾಗಿದೆ.

Related Posts

Leave a Reply

Your email address will not be published.

How Can We Help You?