ಸ್ವಾಮಿ ವಿವೇಕಾನಂದರ ಹಾದಿಯಲ್ಲಿ ನಡೆಯಲು ಕರೆ

ಸ್ವಾಮಿ ವಿವೇಕಾನಂದರ ತತ್ವ ಆದರ್ಶಗಳನ್ನು ಯುವಜನತೆ ಮೈಗೂಡಿಸಿಕೊಳ್ಳುವಂತೆ ಮಂಗಳೂರು ಮಹಾನಗರ ಪಾಲಿಕೆ ಸದಸ್ಯೆ ಶ್ರೀಮತಿ ಸಂಧ್ಯಾ ಎಂ ಆಚಾರ್ ಅವರು ಕರೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಹಾಗೂ ಮಂಗಳೂರಿನ ನೆಹರೂ ಯುವ ಕೇಂದ್ರದ ಜಂಟಿ ಆಶ್ರಯದಲ್ಲಿ ಮಂಗಳಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸ್ವಾಮಿ ವಿವೇಕಾನಂದರ 159ನೇ ಜನ್ಮ ದಿನಾಚರಣೆ ಹಾಗೂ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

swamivivekanada

ಪ್ರಸಿದ್ದ ಹಾಗೂ ಪ್ರಭಾವಶಾಲಿ ತತ್ವಜ್ಞಾನಿಗಳಾಗಿದ್ದ ಸ್ವಾಮಿ ವಿವೇಕಾನಂದರು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಕೋನ ಹೊಂದಿದ್ದರು, ಅವರ ಹಾದಿಯಲ್ಲಿ ಯುವ ಜನಾಂಗ ಸಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಹಿರಿಯ ಪತ್ರಕರ್ತ ಮಹೇಶ್ ಕನ್ನೇಶ್ವರ ಮಾತನಾಡಿ, ಸ್ವಾಮಿ ವಿವೇಕಾನಂದರ ಆದರ್ಶಗಳು ದೇಶದ ಅಭ್ಯುದಯವನ್ನು ಬಯಸಿದ್ದಂತವು, ಅವುಗಳನ್ನು ಪಾಲಿಸಿ ಯುವಜನತೆಯು ದೇಶದ ಏಳಿಗೆಗೆ ಶ್ರಮಿಸಬೇಕೆಂದರು.

swamivivekanada

ಇತ್ತೀಚೆಗೆ ಮಂಡ್ಯದಲ್ಲಿ ನಡೆದ 2021-22ನೇ ಸಾಲಿನ ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಪದಕ ವಿಜೇತರಾದ ಜಿಲ್ಲೆಯ ಅಭಿಷೇಕ್.ಎಂ.ಬಿ ಹಾಗೂ ಕುಮಾರಿ. ಪೃಥ್ವಿ.ಎಂ.ಆರ್ ಅವರನ್ನು ಸನ್ಮಾನಿಸಲಾಯಿತು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕ ಪ್ರದೀಪ್ ಡಿಸೋಜಾ, ಎನ್.ಎಸ್.ಎಸ್. ಸಂಯೋಜನಾಧಿಕಾರಿ ಡಾ. ನಾಗರತ್ನ , ನೆಹರೂ ಯುವ ಕೇಂದ್ರದ ಸಮನ್ವಯಾಧಿಕಾರಿ ರಘುವೀರ್ ಸೂಟರ್ ಪೇಟೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

ಪ್ರದೀಪ್ ಡಿಸೋಜ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಅಥ್ಲೆಟಿಕ್ಸ್ ಹಿರಿಯ ತರಬೇತುದಾರ ಡಾ. ವಸಂತ ಕುಮಾರ ನಿರೂಪಿಸಿದರು. ಶ್ರೀ ಶಂಕರ್ ಸುವರ್ಣ ವಂದಿಸಿದರು.

Related Posts

Leave a Reply

Your email address will not be published.

How Can We Help You?