ನಾಗರಕಟ್ಟೆ ದೇರಾಡಿ ಬ್ರಹ್ಮಮುಗೇರ ದೈವಸ್ಥಾನದ ಶಿಲಾನ್ಯಾಸ

ಮೂಡುಬಿದಿರೆ: ನಾಗರಕಟ್ಟೆ ದೇರಾಡಿ ಬ್ರಹ್ಮಮುಗೇರ ಶ್ರೀಮಹಾಂಕಾಳಿ ದೈವಸ್ಥಾನದ ಅಭಿವೃದ್ಧಿ ಕಾಮಗಾರಿಗೆ ಶಾಸಕರ ಪ್ರಯತ್ನದಿಂದ 7 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಂಡಿದ್ದು, ಶಾಸಕ ಉಮಾನಾಥ ಕೋಟ್ಯಾನ್ ಸೋಮವಾರ ಶಿಲಾನ್ಯಾಸ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಅಜೀರ್ಣಾವಸ್ಥೆಯಲ್ಲಿದ್ದ ದೈವಸ್ಥಾನದ ಅಭಿವೃದ್ಧಿಗೆ ಶಿಲಾನ್ಯಾಸ ಮಾಡಲಾಗಿದೆ. ಕ್ಷೇತ್ರದ ವ್ಯಾಪ್ತಿಯಲ್ಲಿರುವ ದೇವಸ್ಥಾನ, ದೈವಸ್ಥಾನಗಳ ಅಭಿವೃದ್ಧಿಗೆ ಪ್ರಯತ್ನಗಳನ್ನು ನಿರಂತರವಾಗಿ ಮಾಡುತ್ತಿದ್ದೇವೆ ಎಂದರು.

Nagarakatte Deradi Brahmamugera Temple

ಕುಂಗೂರು ಶ್ರೀನಿವಾಸ್ ಭಟ್ ಧಾರ್ಮಿಕ ಕಾರ್ಯಕ್ರಮ ನೆರವೇರಿಸಿದರು.

Nagarakatte Deradi Brahmamugera Temple

ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ, ಮಂಗಳೂರು ಎಪಿಎಂಸಿ ಅಧ್ಯಕ್ಷ ಕೃಷ್ಣರಾಜ ಹೆಗ್ಡೆ, ಪುರಸಭೆ ಸದಸ್ಯರಾದ ರಾಜೇಶ್ ನಾಯ್ಕ್, ರಾಜೇಶ್ ಮಲ್ಯ, ಅಜಯ್ ರೈ, ಬಿಜೆಪಿ ಮೂಡುಬಿದಿರೆ ಮಂಡಲ ಅಧ್ಯಕ್ಷ ಸುನೀಲ್ ಆಳ್ವ, ಪ್ರಧಾನ ಕಾರ್ಯದರ್ಶಿ ಕೇಶವ ಕರ್ಕೇರ, ಬಿಜೆಪಿ ನಗರ ಶಕ್ತಿ ಕೇಂದ್ರದ ಅಧ್ಯಕ್ಷ ಲಕ್ಷ?ಮಣ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ಸಾತ್ವಿಕ್ ಮಲ್ಯ, ಬರ್ಕೆ ಮನೆತನದ ಕೇಶವ, ಮುಗೇರ ಸಮುದಾಯದ ಪ್ರಮುಖರಾದ ಪ್ರಕಾಶ್, ಕರುಣಾಕರ್, ಭಾಸ್ಕರ್, ಗುತ್ತಿಗೆದಾರ ನವೀನ್ ಕರ್ಕೇರ, ನಿವೃತ್ತ ಪೆÇಲೀಸ್ ಅಧಿಕಾರಿ ರಾಜರಾಂ ನಾಗರಕಟ್ಟೆ, ಹರೀಶ್ ಎಂ.ಕೆ ಮತ್ತಿತರರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.

How Can We Help You?