ಮುಸ್ಲಿಂ ಹೆಣ್ಣು ಮಕ್ಕಳಿಗೆ ಬೆಂಬಲ ಸೂಚಿಸಿದ ಜೆಎನ್‌ಯುನ 200 ಮಹಿಳಾ ವಿದ್ಯಾರ್ಥಿಗಳು

ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಸುಮಾರು 200 ಮಹಿಳಾ ವಿದ್ಯಾರ್ಥಿಗಳು ಕರ್ನಾಟಕದ ಮುಸ್ಲಿಂ ವಿದ್ಯಾರ್ಥಿಗಳಿಗೆ ತಮ್ಮ ಬೆಂಬಲ ನೀಡಿ, ಮಹಿಳೆಯರು ಧರಿಸುವ ಹಿಜಾಬ್ ನಿಷೇಧಿಸುವುದು ಪುರುಷ ಪ್ರಧಾನ ಪ್ರವೃತ್ತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.

“ಮುಸ್ಲಿಂ ಮಹಿಳೆಯರಿಗೆ ಹಿಜಾಬ್ ತೊರೆಯುವಂತೆ ಒತ್ತಾಯಿಸುವುದು ಧಾರ್ಮಿಕ ಸ್ವಾತಂತ್ರ್ಯವಾದ ಭಾರತೀಯ ಸಂವಿಧಾನದ 25ನೇ ವಿಧಿಯ ಉಲ್ಲಂಘನೆ ಮತ್ತು ತರಗತಿಯೊಳಗೆ ಪ್ರವೇಶಿಸುವುದನ್ನು ತಡೆಯುವುದು ಹಾಗೂ ನಿಷೇಧಿಸುವುದು 21 (ಎ)ನೇ ವಿಧಿ ಮತ್ತು 15 ನೇ ವಿಧಿ ಉಲ್ಲಂಘನೆ. ಶಿಕ್ಷಣದ ಹಕ್ಕು, ಧರ್ಮ, ಜನಾಂಗ, ಜಾತಿ, ಲಿಂಗ ಅಥವಾ ಜನ್ಮಸ್ಥಳದ ಆಧಾರದ ಮೇಲೆ ತಾರತಮ್ಯವನ್ನು 15 ನೇ ವಿಧಿ ಅಡಿಯಲ್ಲಿ ನಿಷೇಧಿಸಲಾಗಿದೆ” ಎಂದು ಬೆಂಬಲ ಸೂಚಿಸಿದ ವಿದ್ಯಾರ್ಥಿಗಳು ಹೇಳಿದ್ದಾರೆ.

“ಎಲ್ಲಾ ಮಹಿಳೆಯರಿಗೂ ತಮ್ಮ ಧರ್ಮ ಆಚರಿಸುವ ಹಕ್ಕು ಮತ್ತು ಅವರ ಶಿಕ್ಷಣದ ಹಕ್ಕಿನ ಜೊತೆಗೆ ಹಿಜಾಬ್ ಧರಿಸುವ ಅಥವಾ ಧರಿಸದಿರುವ ಅವರ ಆಯ್ಕೆಯನ್ನು ಎತ್ತಿಹಿಡಿಯುತ್ತೇವೆ.

ಹಿಜಾಬ್ ದರಿಸುವುದನ್ನು ನಿಷೇದಿಸುವುದು ಅವರ ಆಯ್ಕೆಯ ಸ್ವತಂತ್ರ್ಯದ ಮೇಲಿನ ದಬ್ಬಾಳಿಕೆ. ಹಿಜಾಬ್ ಧರಿಸಿವುದು, ದರಿಸದಿರುವ ಆಯ್ಕೆಯು ಅವರ ವ್ಯಯಕ್ತಿಕ ವಿಷಯ. ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಪ್ರತಿಭಟಿಸುವ ಪ್ರಯತ್ನ, ದೊಡ್ಡ ಪಿತೂರಿಯ ಭಾಗವಾಗಿದೆ. ಜೆಎನ್‌ಯುನ ಮಹಿಳಾ ವಿದ್ಯಾರ್ಥಿನಿಯರು, ಈ ಧೈರ್ಯಶಾಲಿ ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳಿಗೆ ನಮ್ಮ ಒಗ್ಗಟ್ಟು ಮತ್ತು ಬೆಂಬಲವನ್ನು ನೀಡುತ್ತೇವೆ” ಎಂದು ಬೆಂಬಲದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕಳೆದ ಕೆಲವು ದಿನಗಳಿಂದ ಕರ್ನಾಟಕದಲ್ಲಿ ವಿಶ್ವವಿದ್ಯಾಲಯದ ಪೂರ್ವ ಕಾಲೇಜುಗಳಲ್ಲಿ ಹಿಜಾಬ್‌ನಿಂದಾಗಿ ವಿದ್ಯಾರ್ಥಿಗಳಿಗೆ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶ ನಿರಾಕರಿಸಿದ್ದಕ್ಕಾಗಿ ರಾಜ್ಯದಲ್ಲಿ ಪ್ರತಿಭಟನೆಗಳು ಭುಗಿಲೆದ್ದವು. ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳು ತರಗತಿ ಕೊಠಡಿಗಳಲ್ಲಿ ಸ್ಕಾರ್ಫ್ ಧರಿಸುವುದನ್ನು ವಿರೋಧಿಸಿ ಪ್ರತಿಭಟನೆಗಳು ಕರ್ನಾಟಕದ ವಿವಿಧ ಭಾಗಗಳಲ್ಲಿ ತೀವ್ರಗೊಂಡಿವೆ ಮತ್ತು ಕೆಲವೆಡೆ ಹಿಂಸಾಚಾರಕ್ಕೆ ತಿರುಗಿದ್ದು, ಕರ್ನಾಟಕ ಸರ್ಕಾರವು ಮಂಗಳವಾರ ರಾಜ್ಯದ ಎಲ್ಲಾ ಪ್ರೌಢಶಾಲೆಗಳು ಮತ್ತು ಕಾಲೇಜುಗಳಿಗೆ ಮೂರು ದಿನಗಳ ಕಾಲ ರಜೆ ಘೋಷಿಸಿದೆ.

Related Posts

Leave a Reply

Your email address will not be published.

How Can We Help You?