ಉಪ್ಪಿನಂಗಡಿ: ಬೆದ್ರೋಡಿಯಲ್ಲಿ ಸಿಮೆಂಟ್ ಸಾಗಾಟದ ಲಾರಿ ಬೆಂಕಿಗಾಹುತಿ

ಉಪ್ಪಿನಂಗಡಿ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ಬೆದ್ರೋಡಿಯಲ್ಲಿ ಸಿಮೆಂಟ್ ಸಾಗಾಟದ ಲಾರಿಯೊಂದು ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟುಹೋಗಿದೆ.
ಬೆಂಗಳೂರಿನಿಂದ ಮಂಗಳೂರು ಕಡೆಗೆ ಸಿಮೆಂಟ್ ಹೊತ್ತು ಸಾಗುತ್ತಿದ್ದ ಲಾರಿಗೆ ಬೆದ್ರೋಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಸಿಮೆಂಟ್ ಸಾಗಾಟದ ಲಾರಿ ಇದಾಗಿದ್ದು ವಾಹನದೊಳಗಿನ ಎಲೆಕ್ಟ್ರಿಕ್ ಶಾರ್ಟ್ ಸರ್ಕ್ಯೂಟ್ ನಿಂದ ಈ ಆಕಸ್ಮಿಕ ಘಟನೆ ನಡೆದಿದೆ ಎನ್ನುತ್ತಾರೆ ಸ್ಥಳೀಯರು . ಹೊಗೆ ಕಂಡ ಕೂಡಲೇ ಚಾಲಕ ಲಾರಿ ನಿಲ್ಲಿಸಿದ್ದರಿಂದ ಯಾವುದೇ ಪ್ರಾಣಾಪಾಯವಾಗಿಲ್ಲ.ವಿಷಯ ತಿಳಿದ ಕೂಡಲೇ ಉಪ್ಪಿನಂಗಡಿ ಠಾಣಾಧಿಕಾರಿ ಓಮನ ನೇತೃತ್ವದ ಪೊಲೀಸರ ತಂಡ ಹಾಗೂ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದ್ದು ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.