ಟಾಪ್10 ಬೌಲರ್‌ಗಳ ಪಟ್ಟಿಯಲ್ಲಿ ಭಾರತೀಯರಿಗಿಲ್ಲ ಸ್ಥಾನ

ಶ್ರೀಲಂಕಾ ವಿರುದ್ಧ ಪ್ರಸ್ತುತ ನಡೆಯುತ್ತಿರುವ ಟಿ20 ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ಆಸೀಸ್ ವೇಗದ ಬೌಲರ್ ಜೋಶ್ ಹೇಜಲ್‌ವುಡ್‌ ಐಸಿಸಿ T20 ರ‍್ಯಾಂಕಿಂಗ್‌ನಲ್ಲಿ ಎರಡನೇ ಸ್ಥಾನಕ್ಕೆ ಏರಿದ್ದಾರೆ. ಆದರೆ, ಟಾಪ್ 10 ಒಳಗೆ ಭಾರತದ ಯಾವುದೇ ಬೌಲರ್‌ಗಳು ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.

ಇನ್ನೂ ಎರಡನೇ ಸ್ಥಾನದಲ್ಲಿದ್ದ ಶ್ರೀಲಂಕಾದ ಲೆಗ್ ಸ್ಪಿನ್ನರ್ ವನಿಂದು ಹಸರಂಗ ಒಂದು ಹೆಜ್ಜೆ ಕೆಳಗಿಳಿದು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ, ವನಿಂದು ಹಸರಂಗ ಅವರು ಮೊದಲ ಎರಡು ಪಂದ್ಯಗಳಲ್ಲಿ ಐದು ವಿಕೆಟ್‌ಗಳನ್ನು ಪಡೆದಿದ್ದರು. ಆದರೆ ಅಂತಿಮ ಪಂದ್ಯವನ್ನು ಕಳೆದುಕೊಂಡಿದ್ದರಿಂದ ಅವರು ಟಿ20 ಬೌಲಿಂಗ್ ಶ್ರೇಯಾಂಕದಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.

ಐಸಿಸಿ ಇಂದು ನೂತನ ಪುರುಷರ ಟಿ20 ರ‍್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ದಕ್ಷಿಣ ಆಪ್ರಿಕಾದ ಸ್ಪಿನ್ ಬೌಲರ್ ತಬ್ರೇಜ್ ಶಮ್ಸಿ ಮೊದಲ ಸ್ಥಾನವನ್ನು ಪಡೆದಿದ್ದಾರೆ. ಜೋಶ್ ಹೇಜಲ್‌ವುಡ್ ಕೇವಲ ಒಂದು ಅಂಕಗಳಿಂದ ಹಿಂದುಳಿದಿದ್ದಾರೆ. ಇಂಗ್ಲೆಂಡ್‌ನ ಅಬ್ದುಲ್ ರಶೀದ್ 746 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಇನ್ನೂ ಟಿ20 ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಪಾಕಿಸ್ತಾನದ ಬಾಬರ್ ಅಜಂ 805 ಅಂಕಗಳನ್ನು ಪಡೆಯುವ ಮೂಲಕ ಮೊದಲ ಸ್ಥಾನದಲ್ಲಿದ್ದರೆ, 798 ಅಂಕಗಳೊಂದಿಗೆ ಮತ್ತೋರ್ವ ಪಾಕಿಸ್ತಾನಿ ಬ್ಯಾಟ್ಸ್‌ಮನ್ ಮೊಹಮ್ಮದ್ ರಿಜ್ವಾನ್ ಎರಡನೇ ಸ್ಥಾನ ಪಡೆದಿದ್ಧಾರೆ. ಈ ಪಟ್ಟಿಯಲ್ಲಿ 729 ಅಂಕಗಳೊಂದಿಗೆ ಭಾರತ ಕೆ.ಎಲ್. ರಾಹುಲ್ ನಾಲ್ಕನೇ ಮತ್ತು 657 ಅಂಕಗಳೊಂದಿಗೆ ವಿರಾಟ್ ಕೊಹ್ಲಿ 10ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಆಲ್‌ರೌಂಡರ್‌ಗಳ ಪಟ್ಟಿಯಲ್ಲೂ ಸಹ ಭಾರತದ ಯಾವುದೇ ಆಟಗಾರರು ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ

ಆದರೆ, ಈ ವಾರದಲ್ಲಿ ಭಾರತ- ವೆಸ್ಟ್ ಇಂಡೀಸ್ ಮತ್ತು ಪಾಕಿಸ್ತಾನ- ಆಸ್ಟ್ರೇಲಿಯಾ ಟಿ20 ಸರಣಿಗಳು ನಡೆಯಲಿದ್ದು, ರ‍್ಯಾಂಕಿಂಗ್‌ನಲ್ಲಿ ಮತ್ತಷ್ಟು ಬದಲಾವಣೆಯಾಗುವ ಸಾಧ್ಯತೆ ಇದೆ.

Related Posts

Leave a Reply

Your email address will not be published.

How Can We Help You?