ಸಂಪ್ಯ ಪೊಲೀಸ್ ಠಾಣಾ ಸಿಬ್ಬಂದಿ ಗಣೇಶ್ ಹೃದಯಾಘಾತದಿಂದ ನಿಧನ

ಪುತ್ತೂರು: ಸಂಪ್ಯ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಟ್ಲ ಅಡ್ಕಸ್ಥಳ ನಿವಾಸಿ ಗಣೇಶ್(೪೨) ರವರು ಹೃದಯಾಘಾತದಿಂದಾಗಿ ಮಾ.೯ ರಂದು ನಿಧನರಾದರು.
ಗಣೇಶ್ ರವರು ಸ್ವರ್ಗ ಚೆಕ್ಕ್ ಪೋಸ್ಟ್ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದು, ಮನೆಯಲ್ಲಿದ್ದ ವೇಳೆ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ. ಗಣೇಶ್ ಅವರು ಈ ಹಿಂದೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬಳಿಕ ಇಲ್ಲಿಂದ ಸಂಪ್ಯ ಠಾಣೆಗೆ ವರ್ಗಾವಣೆಗೊಂಡಿದ್ದರು.ಮೃತರು ಪತ್ನಿ, ಮಗ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ವಿಟ್ಲ ಠಾಣಾ ವೃತ್ತ ನಿರೀಕ್ಷಕರು, ಡಿವೈಎಸ್ ಪಿ ಹಾಗೂ ಪೊಲೀಸ್ ಸಿಬ್ಬಂದಿಗಳು ಗಣೇಶ್ ರವರ ನಿಧನಕ್ಕೆ ಸಂತಾಪ ಸೂಚಿಸಿದರು.