ಉದ್ಯಾವರ ರೈಲು ಹಳಿಯಲ್ಲಿ ವ್ಯಕ್ತಿಯ ಶವ ಪತ್ತೆ

ಉದ್ಯಾವರ ಬೊಳ್ಜೆ ಬ್ರಹ್ಮ ಬೈದರ್ಕಳ ಗರೋಡಿ ಸಮೀಪ ರೈಲು ಹಳಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವರ ಛಿದ್ರಗೊಂಡ ದೇಹ ಪತ್ತೆಯಾಗಿದೆ.

ಸುಮಾರು 55 ವಯಸ್ಸಿನ ಗಂಡಸಿನ ಶವ ಬಹಳಷ್ಟು ರುಂಡ ಮುಂಡ ಬೇರ್ಪಟ್ಟಿದ್ದಲ್ಲದೆ ನಾಲ್ಕಾರು ಹೊಳುಗಳಾಗಿದ್ದು ಸಂಶಯಕ್ಕೆ ಎಡೆ ಮಾಡಿಕೊಡುತ್ತಿದೆ.  ಸ್ಥಳಕ್ಕೆ ಭೇಟಿ ನೀಡಿದ ಕಾಪು ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಶವವನ್ನು ಉಡುಪಿ ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Posts

Leave a Reply

Your email address will not be published.

How Can We Help You?