ಪಂಜ : ಸಚಿವ ಎಸ್. ಅಂಗಾರರಿಂದ ವಿವಿಧ ಸವಲತ್ತು ವಿತರಣೆ ಕಾರ್ಯಕ್ರಮ

ಪಂಜ ಗ್ರಾಮ ಪಂಚಾಯತ್ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಮತ್ತು ವಿಶೇಷ ಚೇತನರಿಗೆ ಸವಲತ್ತು ವಿತರಣಾ ಕಾರ್ಯಕ್ರಮ ಗ್ರಾಮ ಪಂಚಾಯತ್ ನಲ್ಲಿ ಮಾ.22 ಮಂಗಳವಾರದಂದು ಜರುಗಿತು.

panja

ಪಂಜ ಪೇಟೆಯಲ್ಲಿ ಸಿಸಿ ಕ್ಯಾಮರಾ ಉದ್ಘಾಟನೆ ಬಳಿಕ ಸಚಿವ,ಶಾಸಕ ಎಸ್.ಅಂಗಾರ ರವರು ಗ್ರಾಮ ಪಂಚಾಯತ್ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮತ್ತು ಕಂದಾಯ ಇಲಾಖೆಯ ಹಕ್ಕುಪತ್ರ ವಿತರಣೆ ಮಾಡಿದರು.ಬಳಿಕ ಅವರು ಮಾತನಾಡಿ “ವಿಶೇಷವಾಗಿ ನಮ್ಮ ಸರಕಾರವು ಸರಕಾರದ ಸೌಲಭ್ಯವನ್ನು ಮನೆ ಬಾಗಿಲಿಗೆ ಮುಟ್ಟಿಸುವ ಕೆಲಸವನ್ನು ಮಾಡಿದೆ. ಸಮಾಜದಲ್ಲಿ ನೋವುಗಳಿಗೆ ಸ್ಪಂದಿಸುವ ಇಂಥಹ ಯೋಜನೆಗಳಿಗೆ ಹೆಚ್ಚು ಹೆಚ್ಚು ಮಹತ್ವ ನೀಡುತ್ತಿದೆ. ಇದಕ್ಕೆ ಅರ್ಹ ಫಲಾನುಭವಿಗಳ ಗುರುತಿಸಿ ಅವರಿಗೆ ತಲುಪಿಸುವ ಕೆಲಸವನ್ನು ಇಲ್ಲಿ ಗ್ರಾಮ ಪಂಚಾಯತ್ ಆಡಳಿತ ಮಂಡಳಿಯಿಂದ ಆಗಿದೆ “ಎಂದು ಅವರು ಹೇಳಿದರು.

ಗ್ರಾಮ ಪಂಚಾಯತ್ ಪೂರ್ವಾಧ್ಯಕ್ಷ ಡಾ.ರಾಮಯ್ಯ ಭಟ್ ದೀಪ ಬೆಳಗಿಸಿ ಉದ್ಘಾಟಿಸಿದರು. ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ದೇರಾಜೆ ಸಭಾಧ್ಯಕ್ಷತೆ ವಹಿಸಿದ್ದರು.ಸುಳ್ಯ ತಹಶೀಲ್ದಾರ್ ಅನಿತಲಕ್ಷ್ಮಿ, ಉಪತಹಶೀಲ್ದಾರ್ ಚಂದ್ರಕಾಂತ್ ಎಂ.ಆರ್., ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ನೇತ್ರಾವತಿ ಕಲ್ಲಾಜೆ, ಸದಸ್ಯರಾದ ಜಗದೀಶ್ ಪುರಿಯ, ಲಕ್ಷ್ಮಣ ಗೌಡ ಬೊಳ್ಳಾಜೆ, ನಾರಾಯಣ ಕೃಷ್ಣನಗರ, ಲಿಖಿತ್ ಪಲ್ಲೋಡಿ, ಚಂದ್ರಶೇಖರ ದೇರಾಜೆ, ಶ್ರೀಮತಿ ವೀಣಾ ಪಂಜ, ಶ್ರೀಮತಿ ವಿಜಯಲಕ್ಷ್ಮಿ ಜಳಕದಹೊಳೆ, ಪ್ರಮೀಳಾ ಸಂಪ, ಅಭಿವೃದ್ಧಿ ಅಧಿಕಾರಿ ಕೀರ್ತಿಪ್ರಸಾದ್, ಕಾರ್ಯದರ್ಶಿ ಕೆ. ಪದ್ಮಯ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶ್ರೀಮತಿ ಚಿತ್ರಕಲಾ ಬೊಳ್ಳಾಜೆ ಪ್ರಾರ್ಥಿಸಿದರು.
ಕೀರ್ತಿಪ್ರಸಾದ್ ಸ್ವಾಗತಿಸಿದರು. ಕೆ. ಪದ್ಮಯ್ಯ ಪ್ರಾಸ್ತಾವಿಕ ಭಾಷಣವನ್ನು ಮಾಡಿದರು.ಲಿಗೋಧರ ಆಚಾರ್ಯ ವಂದಿಸಿದರು.ಇದೇ ವೇಳೆ ವಿಶೇಷ ಅನುದಾನ ಒದಗಿಸುತ್ತಿರುವ ಸಚಿವ ಶಾಸಕ ಅಂಗಾರ ರವರನ್ನು ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಫಲಾನುಭವಿಗಳು, ಕಂದಾಯ ಇಲಾಖೆಯವರು, ಆರೋಗ್ಯ ಇಲಾಖೆಯವರು, ಊರವರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.

How Can We Help You?