ಮಾರ್ಚ್ 30ರಂದು ದ.ಕ. ಜಿಲ್ಲೆಗೆ ಮೊಹಮ್ಮದ್ ಹಾರಿಸ್ ನಲಪಾಡ್ ಭೇಟಿ

ಯುವ ಕಾಂಗ್ರೆಸ್‍ನ ರಾಜ್ಯಾಧ್ಯಕ್ಷರಾದ ಮೊಹಮ್ಮದ್ ಹಾರಿಸ್ ನಲಪಾಡ್ ರವರು ಮಾರ್ಚ್ 30ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿಲಿದ್ದಾರೆ ಎಂದು ಮಂಗಳೂರು ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸುನೀಲ್ ಪೂಜಾರಿ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು.ಮೊಹಮ್ಮದ್ ಹಾರಿಸ್ ನಲಪಾಡ್ ರವರು ರಾಜ್ಯಾಧ್ಯಕ್ಷರಾದ ಬಳಿಕ ಮೊದಲನೆ ಬಾರಿಗೆ ಜಿಲ್ಲೆಗೆ ಆಗಮಿಸಲಿರುವ ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಭವ್ಯವಾಗಿ ಸ್ವಾಗತಿಸಲಾಗುವುದು. ಮಧ್ಯಾಹ್ನ 12 ಗಂಟೆಗೆ ಮಂಗಳೂರು ನಗರದ ಸೈಂಟ್ ಸೆಬಾಸ್ಟಿಯನ್ ಹಾಲ್ ಬೆಂದೂರ್ ಮಂಗಳೂರು ಇಲ್ಲಿ ನಡೆಯುವ ಯುವ ಜಾಗೃತಿ ಸಮಾವೇಶ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು.

ಈ ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸುನೀಲ್ ಪೂಜಾರಿ, ನಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ರಾಕೇಶ್ ದೇವಾಡಿಗ, ಸುರತ್ಕಲ್ ಬ್ಲಾಕ್ ಯುವ ಕಾಂಗ್ರೆಸ್ ನ ಅಧ್ಯಕ್ಷರಾದ ಜೈಸನ್ ಸುರತ್ಕಲ್, ಗುರುಪುರ ಬ್ಲಾಕ್ ಯುವ ಕಾಂಗ್ರೆಸ್ ನ ಅಧ್ಯಕ್ಷರಾದ ಮೊಹಮ್ಮದ್ ಮುಫೀದ್ ರವರ ಪದಗ್ರಹಣ ಹಾಗೂ ಉಳಿದ ಎಲ್ಲಾ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಆದೇಶ ಪತ್ರ ನೀಡಲಾಗುವುದು.ಪತ್ರಿಕಾಗೋಷ್ಠಿಯಲ್ಲಿ ನಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ರಾಕೇಶ್ ದೇವಾಡಿಗ, ಸುರತ್ಕಲ್ ಬ್ಲಾಕ್ ಯುವ ಕಾಂಗ್ರೆಸ್ ನ ಅಧ್ಯಕ್ಷರಾದ ಜೈಸನ್ ಸುರತ್ಕಲ್, ಗುರುಪುರ ಬ್ಲಾಕ್ ಯುವ ಕಾಂಗ್ರೆಸ್ ನ ಅಧ್ಯಕ್ಷರಾದ ಮೊಹಮ್ಮದ್ ಮುಫೀದ್, ಶೇಖ್ ಕೈಫ್ ಉಪಸ್ಥಿತರಿದ್ದರು.

Related Posts

Leave a Reply

Your email address will not be published.

How Can We Help You?