ಮಂಗಳೂರು ವಿವಿ ವಿದ್ಯಾರ್ಥಿ ಸಂಘ ಉದ್ಘಾಟನೆ : ಕಲ್ಲಡ್ಕ ಪ್ರಭಾಕರ್ ಭಟ್ಗೆ ಆಹ್ವಾನ ವಿರೋಧಿಸಿ ಪ್ರತಿಭಟನೆ

ಮಂಗಳೂರು ವಿವಿ ವಿದ್ಯಾರ್ಥಿ ಪರಿಷತ್ ಉದ್ಘಾಟನೆಗೆ ಅತಿಥಿಯಾಗಿ ಕಲ್ಕಡ್ಕ ಭಟ್ ಅತಿಥಿ ಆಹ್ವಾನಿಸಿರುವುದನ್ಬು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿರೋಧಿಸಿ ಮಂಗಳೂರು ವಿವಿ ಮುಖ್ಯ ದ್ವಾರದಲ್ಲಿ ಪ್ರತಿಭಟನೆ ನಡೆಸಿ ಪ್ರಭಾಕರ ಭಟ್ ಗೋ ಬ್ಯಾಕ್ ಎಂದು ಘೋಷಣೆ ಕೂಗಿದರು.

ಪ್ರತಿಭಟನೆಯ ಹಿನ್ನಲೆಯಲ್ಲಿ ಪೆÇೀಲೀಸ್ ಭದ್ರತೆ ಹಾಕಿದ್ದು ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ವಿವಿ ಪ್ರವೇಶ ದ್ವಾರದಲ್ಲೇ ತಡೆದು ನಿಲ್ಲಿಸಿದರು. ಈ ಸಂದರ್ಭದಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಮಾತನಾಡಿದ್ವೇಷ ಭಾಷಣವನ್ನು ನಿರಂತರವಾಗಿ ಮಾಡುತ್ತಿರುವ ಕಲ್ಲಡ್ಕ ಪ್ರಭಾಕರ ಭಟ್ ಆಹ್ವಾನ ಖಂಡನೀಯ ವಿದ್ಯಾಕೇಂದ್ರವನ್ನು ವಿವಿ ಅಧಿಕಾರಿಗಳು ಸಂಘದ ಕೇಂದ್ರವನ್ನಾಗಿ ಮಾಡಲು ಹೊರಟಿದ್ದಾರೆ. ವಿದ್ಯೆ ನೀಡಬೇಕಾದ ಕೇಂದ್ರದಲ್ಲಿ ಕೋಮು ಸಾಮರಸ್ಯ ಕದಡುವ ಕಾರ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಪ್ರತಿಭಟನೆಯ ನಡುವೆಯೂ ಮಂಗಳೂರು ವಿವಿಯ ಕ್ರೀಡಾಂಗಣದಲ್ಲಿ ಏರ್ಪಡಿಸಲಾದ ವಿದ್ಯಾರ್ಥಿ ಪರಿಷತ್ ಉದ್ಘಾಟನೆ ನಡೆಯಿತು.ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರ ನೆಲೆಯಲ್ಲಿ ಕಲ್ಕಡ್ಕ ಭಟ್ ಭಾಗವಹಿಸಿ ವಿವಿ ವಿದ್ಯಾರ್ಥಿ ಪರಿಷತ್ ಉದ್ಘಾಟನೆ ನಡೆಸಿದರು. ಮಂಗಳೂರು ವಿವಿ ಕುಲಪತಿ ಪೆÇ್ರ.ಸುಬ್ರಹ್ಮಣ್ಯ ಯಡಪಡಿತ್ತಾಯ ಸೇರಿದಂತೆ ಗಣ್ಯ ಅತಿಥಿಗಳು ಭಾಗವಹಿಸಿದರು.