ಗುಂಡ್ಯದಲ್ಲಿ ಜೋಡಿಯೊಂದು ಪತ್ತೆ ವಿಚಾರ ,ಪುತ್ತೂರು ಶಾಸಕರ ಬಗ್ಗೆ ಅಪಪ್ರಚಾರ ಸರಿಯಲ್ಲ : ಬಿಜೆಪಿ ಮುಖಂಡ ಸಾಜ ರಾಧಾಕೃಷ್ಣ ಆಳ್ವ ಸ್ಪಷ್ಟನೆ

ನಿನ್ನೆ ಗುಂಡ್ಯದಲ್ಲಿ ಅನ್ಯಧರ್ಮದ ಜೋಡಿಯೊಂದು ಪತ್ತೆಯಾಗಿದ್ದು, ಈ ಘಟನೆಗೆ ಸಂಬಂಧಿಸಿ ಆರೋಪಿಗಳಲ್ಲದವರನ್ನು ಬಂಧಿಸಬಾರದು ಎಂದು ಶಾಸಕರು ಉನ್ನತ ಮಟ್ಟದ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ಶಾಸಕರ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಸಾಜ ರಾಧಾಕೃಷ್ಣ ಆಳ್ವ ಹೇಳಿದರು.
ಅವರು ಪುತ್ತೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಸ್ಪಷ್ಟನೆ ನೀಡಿದರು. ಪುತ್ತೂರಿನ ಕ್ಷೇತ್ರದ ಶಾಸಕರು ಯಾವುದೇ ಕ್ಷೇತ್ರದ ಕಾರ್ಯಕರ್ತನಿಗೆ ತೊಂದರೆ ಆದಾಗ ಅವರಿಗೆ ಸಹಾಯ ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ. ಶಾಸಕರು ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಆದರೆ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುತ್ತಿರುವುದು ಸರಿಯಲ್ಲ ಎಂದು ಹೇಳಿದರು.