ಪ್ರವಾಸಕ್ಕೆ ಬಂದಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು : ಮಲ್ಪೆ ಸೈಂಟ್ ಮೇರಿಸ್ ಐಲ್ಯಾಂಡ್‍ನಲ್ಲಿ ನಡೆದ ದುರ್ಘಟನೆ

ಮಲ್ಪೆ ಸೈಂಟ್ ಮೇರಿಸ್ ಐಲ್ಯಾಂಡ್ ಗೆ ಪ್ರವಾಸ ಬಂದಿದ್ದ ಕೇರಳದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಗುರುವಾರ ನಡೆದಿದೆ.

ಅಲೆನ್ ರೇಜಿ, ಅಮಲ್ ಸಿ. ಅನಿಲ್, ಆಂಟೋನಿ ಶೆಣೈ ನೀರುಪಾಲಾದ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಈ ಪೈಕಿ ಇಬ್ಬರ ಮೃತದೇಹ ಪತ್ತೆಯಾಗಿವೆ. ಇನ್ನೋರ್ವ ವಿದ್ಯಾರ್ಥಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಕೇರಳದ ಕೊಟ್ಟಾಯಂನ ಮಂಗಳ ಇಂಜಿನಿಯರಿಂಗ್ ಕಾಲೇಜಿನ 42 ವಿದ್ಯಾರ್ಥಿಗಳು ಹಾಗೂ ಇಬ್ಬರು ಉಪನ್ಯಾಸಕರು ಮಲ್ಪೆ ಸೈಂಟ್ ಮೇರಿಸ್ ಐಲ್ಯಾಂಡ್ ಗೆ ಪ್ರವಾಸಕ್ಕೆ ಬಂದಿದ್ದರು.ಈ ವೇಳೆ ದ್ವೀಪ ಪ್ರದೇಶದ ಅಪಾಯಕಾರಿ ಸಮುದ್ರ ಭಾಗದಲ್ಲಿ ನೀರಿಗಿಳಿದ ವಿದ್ಯಾರ್ಥಿಗಳಲ್ಲಿ ಮೂವರು ನೀರುಪಾಲಾಗಿದ್ದಾರೆ ಎಂದು ತಿಳಿದುಬಂದಿದೆ.

Related Posts

Leave a Reply

Your email address will not be published.

How Can We Help You?