ಎಸ್ಡಿಎಂನಲ್ಲಿ ಬೇಸಿಕೆ ಶಿಬಿರ ಆರಂಭ

ನಗರದ ಅಶೋಕ ನಗರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಾಲೆಯಲ್ಲಿ ಬೇಸಿಕೆ ಶಿಬಿರಕ್ಕೆ ಶಾಲೆಯ ಪ್ರಾಂಶುಪಾಲೆ ಜೋಯ್ ಜೀವನ್ ರೈ ಚಾಲನೆ ನೀಡಿದರು.
ವಿದ್ಯಾರ್ಥಿಗಳ ಸಾಂಘಿಕ ಬೆಳವಣಿಗೆಯನ್ನು ಹಿತದೃಷ್ಟಿಯಲ್ಲಿಟ್ಟುಕೊಂಡು ಅವರ ಸರ್ವಾಂಗೀಣ ಪ್ರಗತಿಗಾಗಿ ಬೇಸಿಕೆ ಶಿಬಿರವನ್ನು ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹತ್ತು ದಿನಗಳ ವಿಶೇಷ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರದಲ್ಲಿ ನಾನಾ ಕ್ಷೇತ್ರದ ಸಂಪನ್ಮೂಲ ವ್ಯಕ್ತಿಗಳ ಮೂಲಕ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತದೆ ಎಂದು ಹೇಳಿದರು.
ಅಕಾಡೆಮಿಕ್ ಸಮನ್ವಯಕಾರರಾದ ಉಷಾ ಹೆಗ್ಡೆö, ಕರುಣಾ ಉಪಸ್ಥಿತರಿದ್ದರು. ಶಿಕ್ಷಕಿ ವಿನಯ ಶೆಟ್ಟಿ ಕರ್ಯಕ್ರಮ ನಿರೂಪಿಸಿದರು.