ಡಿವೈಡರ್ ಏರಿ ಬೈಕ್ಗೆ ಗುದ್ದಿದ ಕಾರು

ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್ ಕಾರು ಮೂರು ದಾರಿದೀಪಕ್ಕೆ ಬಡಿದು ರಸ್ತೆ ವಿಭಜಕ ದಾಟಿ ಎದುರಿನಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ದೇರಳಕಟ್ಟೆ ಜಂಕ್ಷನ್ ನಲ್ಲಿ ಬುಧವಾರ ತಡರಾತ್ರಿ ವೇಳೆ ಸಂಭವಿಸಿದೆ.
ಕಾರು ಚಾಲಕ ಸೊಫೈಲ್ ಹಾಗೂ ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಣಾಜೆ ಕಡೆಯಿಂದ ಉಳ್ಳಾಲ ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ರಸ್ತೆ ಮಧ್ಯ ಅಳವಡಿಸಲಾದ ಮೂರು ದಾರಿದೀಪದ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಮೂರು ಕಂಬಗಳು ಕೆಳಗುರುಳಿ ಹಾನಿಯಾಗಿದೆ. ಬಳಿಕ ವಿಭಜಕ ಏರಿ ವಿರುದ್ಧ ಧಿಕ್ಕಿಗೆ ಚಲಿಸಿದ ಪರಿಣಾಮ ಎದುರಿನಿಂದ ಬರುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದಿದೆ. ಘಟನೆಗೆ ಕಾರು ಚಾಲಕನ ಅತಿವೇಗದ ಚಾಲನೆಯೇ ಕಾರಣವೆಂದು ಸ್ಥಳೀಯರು ಆರೋಪಿಸಿದ್ದಾರೆ. ನಾಗುರಿ ಸಂಚಾರಿ ಠಾಣಾ ಪೆÇಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.