ಜಾತಿ ಪ್ರಮಾಣ ಪತ್ರ ನೀಡುವುದನ್ನು ಮುಂದುವರಿಸುವಂತೆ ಆಗ್ರಹ : ಅರೆಬೆತ್ತಲೆ ಮೆರವಣಿಗೆ, ಉರುಳು ಸೇವೆ ಮೂಲಕ ಪ್ರತಿಭಟನೆ

ಭಟ್ಕಳ: ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವುದನ್ನು ಮುಂದುವರಿಸುವಂತೆ ಆಗ್ರಹಿಸಿ ಭಟ್ಕಳ ತಹಸೀಲ್ದಾರ್ ಕಚೇರಿಯ ಪಕ್ಕದಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಮೊಗೇರ ಸಮಾಜ ಅರೆಬೆತ್ತಲೆ ಮೆರವಣಿಗೆ, ಉರುಳು ಸೇವೆ ಮಾಡುವ ಮೂಲಕ ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸಿದರು. ಬೆಳಗ್ಗೆ ಭಟ್ಕಳದ ಆನಂದಾಶ್ರಮ ಕಾನ್ವೆಂಟ್ ಮೈದಾನದಲ್ಲಿ ಹೊರಟ ಅರೆಬೆತ್ತಲೆ ಮೆರವಣಿಗೆಯು ಶಂಶುದ್ಧೀನ್ ಸರ್ಕಲ್ ಮೂಲಕ ರಾಷ್ಟ್ರೀಯ ಹೆದ್ದಾರಿಯಾಗಿ ಧರಣಿ ಪ್ರದೇಶವನ್ನು ತಲುಪಿತು. ತಾಲೂಕು ಆಡಳಿತ ಸೌಧ ತಲುಪುತ್ತಲೇ ಹಲವು ಯುವಕರು ಉರುಳು ಸೇವೆ ಆರಂಭಿಸಿದರು.

ಸಮಾಜದ ಹಲವು ಮುಖಂಡರು ಪ್ರತಿಭಟನೆಯನ್ನು ತಡೆಯುವಷ್ಟರಲ್ಲಿಯೇ ಸೀತಾರಾಮ ಮೊಗೇರ ಎನ್ನುವವರು ತಾವು ಮೊದಲೇ ತಮ್ಮೊಂದಿಗೆ ತಂದಿದ್ದ ಸೀಮೆ ಎಣ್ಣೆಯನ್ನು ಮೈಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಪ್ರಯತ್ನಸಿದರು. ತಕ್ಷಣ ಅಲ್ಲಿದ್ದ ಇತರರು ಅವರನ್ನು ತಡೆದು ತಕ್ಷಣ ಬೆಂಕಿಪೆÇಟ್ಟಣವನ್ನು ಕಸಿದುಕೊಂಡರು. ಕೆಲಕಾಲ ತೀವ್ರ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು ಬಂದೋಬಸ್ತಿಗಾಗಿ ಬಂದಿದ್ದ ಪೆÇಲೀಸರೂ ಕೂಡಾ ಧಾವಿಸಿ ಅತನ ರಕ್ಷಣೆಗೆ ಮುಂದಾದರು. ಅಷ್ಟರಲ್ಲಾಗಲೇ ಸೀಮೆ ಎಣ್ಣೆ ಕಣ್ಣು, ಬಾಯಿಗೆ ಹೋಗಿ ಅಸ್ವಸ್ಥಗೊಂಡ ಅವರನ್ನು ತಕ್ಷಣ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಮೆರವಣಿಗೆಯಲ್ಲಿ ಬಂದ ಯುವಕರು, ಪುರುಷರು, ಮಹಿಳೆಯರು ಹಾಗೂ ಶಾಲಾ ವಿದ್ಯಾರ್ಥಿಗಳು ತಾಲೂಕು ಆಡಳಿತ ಸೌಧಕ್ಕೆ ಒಂದು ಪ್ರದಕ್ಷಿಣೆ ಬಂದು ನಂತರ ತಮ್ಮ ಧರಣಿ ಸ್ಥಳಕ್ಕೆ ತೆರಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮೊಗೇರ ಸಮಾಜದ ಅಧ್ಯಕ್ಷ ಅಣ್ಣಪ್ಪ ಮೊಗೇರ ನಾವು ಕಳೆದ 18 ದಿನಗಳಿಂದ ನೂರಾರು ಸಂಖ್ಯೆಯಲ್ಲಿ ಬಂದು ಪ್ರತಿಭಟನೆಯನ್ನು ನಡೆಸುತ್ತಿದ್ದರೂ ಸಹ ನಮ್ಮ ಬೇಡಿಕೆಗೆ ಸ್ಪಂದಿಸದ ಸರಕಾರದ ನಿಲುವು ಸರಿಯಲ್ಲ. ಪ್ರತಿ ದಿನವೂ ಕೂಡಾ ಪ್ರತಿಭಟನೆಯ ಕಾವು ಜಾಸ್ತಿಯಾಗುತ್ತಿದ್ದು ಸರಕಾರ ಕೂಡಲೇ ಕ್ರಮ ಕೈಗೊಂಡು ನಮ್ಮ ಸಮಾಜಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬೆಳಕೆ ಭಾಸ್ಕರ ಮೊಗೇರ ಅವರು ಸರಕಾರದ ನಿಲುವನ್ನು ತರಾಟೆಗೆ ತೆಗೆದುಕೊಂಡರು. ಅಧಿಕಾರಿಗಳಿಗೆ ಉಚ್ಚ ನ್ಯಾಯಾಲಯ, ಸರ್ವೋಚ್ಚ ನ್ಯಾಯಾಲಯದ ಆದೇಶವೂ ಕೂಡಾ ಗೌಣವಾಗಿದೆ. ಅಧಿಕಾರಿಗಳೇ ಹೇಳಿದ್ದನ್ನು ಥಸರಕಾರ ಮಾಡುತ್ತದೆ. ನಮ್ಮ ತಾಳ್ಮೆಗೂ ಒಂದು ಮಿತಿ ಇದ್ದು ಯಾವುದೇ ಮುಂದಿನ ಅನಾಹುತಕ್ಕೆ ಸರಕಾರವೇ ಹೊಣೆಯಾಗಬೇಕಾಗುತ್ತದೆ. ಇನ್ನು ಮುಂದಿನ ದಿನಗಳಲ್ಲಿ ನಮ್ಮ ಹೋರಾಟ ತೀವ್ರವಾಗುತ್ತಿದ್ದು ಅದಕ್ಕೆ ಸರಕಾರ ಅವಕಾಶ ಕೊಡಬಾರದು ಎನ್ನುವುದು ನಮ್ಮ ಕೋರಿಕೆಯಾಗಿದೆ. ತಕ್ಷಣ ನಮ್ಮ ಮನವಿಯನ್ನು ಪರಿಗಣಿಸಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ಸರಕಾರ ನೀಡಲು ಮುಂದಾಗಬೇಕು ಎಂದು ಅವರು ಆಗ್ರಹಿಸಿದರು.ಇಂದಿನ ಅರೆಬೆತ್ತಲೆ ಮೆರವಣಿಗೆಯಲ್ಲಿ ತಾಲೂಕಿನ ವಿವಿಧ ಭಾಗಗಳಿಂದ ಬಂದಿದ್ದ ನೂರಾರು ಯುವಕರು ಭಾಗವಹಿಸಿದ್ದರೆ, ಮೆರವಣಿಗೆಯಲ್ಲಿ ಬೈಲೂರು, ಕೊಪ್ಪದಮಕ್ಕಿ, ಮಂಕಿ ಭಾಗದ ಪುರುಷರು, ಮಹಿಳೆಯರು ಮತ್ತು ಮಕ್ಕಳು ಭಾಗವಹಿಸಿದ್ದರು.

Related Posts

Leave a Reply

Your email address will not be published.

How Can We Help You?