ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣ : ಪಾರದರ್ಶಕವಾದ ತನಿಖೆ ನಡೆಸುತ್ತೇವೆ : ಸಿಎಂ ಬಸವರಾಜ್ ಬೊಮ್ಮಾಯಿ

ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ಡೆತ್ ನೋಟ್ ಬರೆದಿದ್ದ ಸಂತೋಷ್ ಪಾಟೀಲ್ ಅವರು ಉಡುಪಿಯ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಸಮೀಪದ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಬೆಳಕಿಗೆ ಬಂದಿದೆ. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಶೇ. 40ರಷ್ಟು ಕಮಿಷನ್ ಆರೋಪ ಮಾಡಿ ಸುದ್ದಿಯಾಗಿದ್ದ ಮತ್ತು ಬಿಜೆಪಿ ಕಾರ್ಯಕರ್ತರೂ ಆಗಿರುವ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಟ್ಸ್ಆಪ್ನಲ್ಲಿ ಸಂದೇಶ ಕಳುಹಿಸಿ ನಾಪತ್ತೆಯಾಗಿದ್ದರು. ಘಟನಾ ಸ್ಥಳಕ್ಕೆ ಎಸ್ಪಿ ವಿಷ್ಣುವರ್ದನ್ ಸಹಿತ ಅಧಿಕಾರಿಗಳು ತೆರಳಿದ್ದು, ತನಿಖೆ ನಡೆಸುತ್ತಿದ್ದಾರೆ.