ವಿವಿಧ ಸಮುದಾಯಗಳ ಮುಖಂಡರೊಂದಿಗೆ : ಉಡುಪಿ ಬಿಜೆಪಿ ನೇತೃತ್ವದಲ್ಲಿ ನಡೆದ ಸಂವಾದ

ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆಯ ನೇತೃತ್ವದಲ್ಲಿ ಜಿಲ್ಲಾ ವ್ಯಾಪ್ತಿಯ ವಿವಿಧ ಸಮುದಾಯಗಳ ಮುಖಂಡರೊಂದಿಗೆ ಸಂವಾದ ಕಾರ್ಯಕ್ರಮ ಮಣಿಪಾಲದಲ್ಲಿ ನಡೆಯಿತು.

ಸಮಾಜ ಸುಧಾರಕ ಮಹಾತ್ಮ ಜ್ಯೋತಿರಾವ್ ಫುಲೆ ಜನ್ಮದಿನಾಚರಣೆಯನ್ನು ಪುಷ್ಪಾರ್ಚನೆ ಮಾಡುವುದರ ಮೂಲಕ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಖಾತೆಯ ಸಚಿವರಾಗಿರುವ ಕೋಟ ಶ್ರೀನಿವಾಸ ಪೂಜಾರಿ,ಇಂಧನದ ಸಚಿವರಾಗಿರುವ ಸುನಿಲ್ ಕುಮಾರ್, ಮೀನುಗಾರಿಕಾ ಸಚಿವರಾದ ಎಸ್ ಅಂಗಾರ, ಉಡುಪಿ ಶಾಸಕರಾದ ರಘುಪತಿ ಭಟ್,ಕಾಪು ಶಾಸಕರಾದ ಲಾಲಾಜಿ ಮೆಂಡನ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ನವೀನ್ ಕುತ್ಯಾರ್,ಸದಾನಂದ ಉಪ್ಪಿನಕುದ್ರು,ಮನೋಹರ ಕಲ್ಮಾಡಿ, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್,ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ ಸುರೇಂದ್ರ ಫಣಿಯೂರ್ ಉಪಸ್ಥಿತರಿದ್ದರು.

Related Posts

Leave a Reply

Your email address will not be published.

How Can We Help You?