ಶ್ರೀನಿವಾಸ ವಿವಿ ಮತ್ತು ಶ್ರೀನಿವಾಸ ಸಮೂಹ ಶೈಕ್ಷಣಿಕ ಸಂಸ್ಥೆಗಳ ವಿದ್ಯಾರ್ಥಿಗಳ ಶಿಕ್ಷಕರ ಪ್ರತಿಭಾ ಕಾರ್ಯಕ್ರಮ

ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯ ಮತ್ತು ಶ್ರೀನಿವಾಸ ಸಮೂಹ ಶೈಕ್ಷಣಿಕ ಸಂಸ್ಥೆಗಳ ವಿದ್ಯಾರ್ಥಿಗಳ ಪ್ರತಿಭಾ ಸ್ಪರ್ಧಾ ಕಾರ್ಯಕ್ರಮವು ಮುಕ್ಕದಲ್ಲಿರುವ ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯ ಅವರಣದಲ್ಲಿ ಸೋಮವಾರದಂದು ಹಾಗೂ ಶಿಕ್ಷಕರ ಪ್ರತಿಭಾ ಕಾರ್ಯಕ್ರಮವು ಜರುಗಿತು.

ಮಂಗಳೂರಿನ ಎ. ಶಾಮರಾವ್ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಶ್ರೀನಿವಾಸ್ ವಿಶ್ವವಿದ್ಯಾಲಯದ ಸನ್ಮಾನ್ಯ ಕುಲಾಧಿಪತಿಗಳಾದ ಡಾ. ಸಿಎ ಎ ರಾಘವೇಂದ್ರ ರಾವ್ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು ಹಾಗೂ ದೀಪವನ್ನು ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮಂಗಳೂರಿನ ಎ. ಶಾಮರಾವ್ ಪ್ರತಿಷ್ಠಾನದ ಉಪಾಧ್ಯಕ್ಷರು ಹಾಗೂ ಶ್ರೀನಿವಾಸ್ ವಿಶ್ವವಿದ್ಯಾಲಯದ ಸನ್ಮಾನ್ಯ ಸಹ ಕುಲಾಧಿಪತಿಗಳಾದ ಡಾ. ಎ ಶ್ರೀನಿವಾಸ್ ರಾವ್ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.

ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಂಡ್ ರಿಸರ್ಚ್ ಸೆಂಟರಿನ ಮುಖ್ಯಸ್ಥರಾದ ಡಾ. ಉದಯಕುಮಾರ್ ರವರು ಸ್ವಾಗತ ಭಾಷಣವನ್ನು ಮಾಡಿದರು.

ಶ್ರೀನಿವಾಸ್ ವಿಶ್ವವಿದ್ಯಾಲಯದ ವಿಶ್ವಸ್ತ ಮಂಡಳಿಯ ಸದಸ್ಯರು ಹಾಗೂ ಎ. ಶಾಮರಾವ್ ಪ್ರತಿಷ್ಠಾನದ ಕಾರ್ಯದರ್ಶಿಗಳಾದ ಪ್ರೊ. ಶ್ರೀಮತಿ ಎ ಮಿತ್ರಾ ಎಸ್ ರಾವ್ ರವರು ವಿದ್ಯಾರ್ಥಿಗಳ, ಶಿಕ್ಷಕರ ಹಾಗೂ ಸಿಬ್ಬಂದಿಗಳ ಕಲಾ ಪ್ರತಿಭೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು.

ಶ್ರೀನಿವಾಸ್ ವಿಶ್ವವಿದ್ಯಾಲಯದ ವಿಶ್ವಸ್ತ ಮಂಡಳಿಯ ಸದಸ್ಯರು ಹಾಗೂ ಶ್ರೀನಿವಾಸ ಸಮೂಹ ಶೈಕ್ಷಣಿಕ ಸಂಸ್ಥೆಗಳ ನಿರ್ದೇಶಕರಾದ ಶ್ರೀಮತಿ ಎ. ವಿಜಯಲಕ್ಷ್ಮಿ ಆರ್ ರಾವ್ ರವರು ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಶುಭವನ್ನು ಕೋರಿದರು.

ಮಂಗಳೂರಿನ ಎ ಶಾಮರಾವ್ ಪ್ರತಿಷ್ಠಾನದ ಉಪಾಧ್ಯಕ್ಷರು ಹಾಗೂ ಶ್ರೀನಿವಾಸ್ ವಿಶ್ವವಿದ್ಯಾಲಯದ ಸನ್ಮಾನ್ಯ ಸಹ ಕುಲಾಧಿಪತಿಗಳಾದ ಡಾ. ಎ ಶ್ರೀನಿವಾಸ್ ರಾವ್ ರವರು ಮಾತನಾಡಿ, ವಿದ್ಯಾರ್ಥಿಗಳ ಕಲಾ ಸಾಮರ್ಥ್ಯವನ್ನು ಕೊಂಡಾಡಿದರು. ಶ್ರೀನಿವಾಸ್ ವಿಶ್ವವಿದ್ಯಾಲಯದಲ್ಲಿ ದೇಶದ ಹಲವಾರು ರಾಜ್ಯಗಳ ವಿದ್ಯಾರ್ಥಿಗಳು ಶೈಕ್ಷಣಿಕ  ಅಭ್ಯಾಸವನ್ನು ಮಾಡುತ್ತಿದ್ದು, ರಾಷ್ಟ್ರೀಯ ಭಾವೈಕ್ಯತೆ ಹಾಗೂ ಏಕತೆಯ ಚಿತ್ರಣವು ಈ ಪ್ರತಿಭಾ ಕಾರ್ಯಕ್ರಮದಲ್ಲಿ ಅನಾವರಣಗೊಂಡಿದೆ. ಇಂತಹ ಪ್ರತಿಭಾ ಕಾರ್ಯಕ್ರಮದಲ್ಲಿ ಭಾಗವಹಿಸುವುದರ ಮೂಲಕ ವಿದ್ಯಾರ್ಥಿಗಳ ಹಾಗೂ ಸಿಬ್ಬಂದಿಗಳ ಸಮಗ್ರ ವ್ಯಕ್ತಿತ್ವ ವಿಕಸನ ಹಾಗೂ ಕಲಾ ಪೋಷಣೆಯು ಸಾಧ್ಯ ಎಂದು ಹೇಳಿದರು.

ಅಧ್ಯಕ್ಷೀಯ ಭಾಷಣವನ್ನು ಮಾಡಿದ ಶ್ರೀನಿವಾಸ್ ವಿಶ್ವವಿದ್ಯಾಲಯದ ಸನ್ಮಾನ್ಯ ಕುಲಾಧಿಪತಿಗಳಾದ ಡಾ. ಸಿಎ ಎ ರಾಘವೇಂದ್ರ ರಾವ್ ರವರು ಮಾತನಾಡಿ, ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಪ್ರತಿಭಾ ಕಾರ್ಯಕ್ರಮದ ಯಶಸ್ಸು ಮತ್ತು ವಿದ್ಯಾರ್ಥಿಗಳ ಹಾಗೂ ಸಿಬ್ಬಂದಿಗಳ ಕಲಾ ಆಸಕ್ತಿಯನ್ನು ಗಮನಿಸಿದರೆ ಮುಂದಿನ ವರ್ಷದಲ್ಲಿ ಈ ಕಾರ್ಯಕ್ರಮವನ್ನು ಮೂರು ದಿನಗಳಿಗೆ ವಿಸ್ತರಿಸಲಾಗುವುದು ಎಂದು ಹೇಳಿದರು. ಶ್ರೀನಿವಾಸ್ ವಿಶ್ವವಿದ್ಯಾಲಯವು ಭಾರತೀಯ ನೃತ್ಯ ಪರಂಪರೆ ಹಾಗೂ ಕಲೆಗೆ ವಿಶೇಷ ಪ್ರೋತ್ಸಾಹವನ್ನು ನೀಡುತ್ತಿದೆ. ಶ್ರೀನಿವಾಸ್ ವಿಶ್ವವಿದ್ಯಾಲಯದಲ್ಲಿ ಭರತನಾಟ್ಯ ನೃತ್ಯ ತರಬೇತಿಯನ್ನು ಪ್ರಾರಂಭಿಸಿದ್ದೇವೆ. ಮುಂದಿನ ದಿನಗಳಲ್ಲಿ, ಕೂಚುಪುಡಿ, ಮೋಹಿನಿ ಅಟ್ಟಂ, ನಾಟಕ, ಸಂಗೀತ, ನೃತ್ಯ, ಸಿನೆಮಾ ಹಾಗೂ ಇನ್ನಿತರ ಲಲಿತ ಕಲೆಗಳಿಗೆ ಸಂಬಂಧಿಸಿದ ತರಬೇತಿಯನ್ನು ಪ್ರಾರಂಭಿಸಲಿದ್ದೇವೆ ಎಂದು ಡಾ. ಸಿಎ ಎ ರಾಘವೇಂದ್ರ ರಾವ್ ರವರು ಹೇಳಿದರು. ಲಲಿತ ಕಲೆಗಳಲ್ಲಿ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳು ಹಾಗೂ ಕಲಾಭಿಮಾನಿಗಳು ನಮ್ಮ ವಿಶ್ವವಿದ್ಯಾಲಯದಲ್ಲಿ ಕಲೆಯನ್ನು ಅಭ್ಯಾಸ ಮಾಡುವುದರ ಮೂಲಕ ಪ್ರಯೋಜನವನ್ನು ಪಡೆದುಕೊಳ್ಳುವಂತಾಗಬೇಕು ಎಂದು ಡಾ. ಸಿಎ ಎ ರಾಘವೇಂದ್ರ ರಾವ್ ರವರು ಹೇಳಿದರು. ದಕ್ಷಿಣ ಭಾರತದ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಆದ ಛಾಪನ್ನು ಹೊಂದಿರುವ ಶ್ರೀನಿವಾಸ್ ವಿಶ್ವವಿದ್ಯಾಲಯವು, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಬೆಂಗಳೂರಿನಲ್ಲಿ ತನ್ನ ಶಿಕ್ಷಣ ಸಂಸ್ಥೆಯನ್ನು ಪ್ರಾರಂಭಿಸಲಿದೆ ಎಂದು ಡಾ. ರಾಘವೇಂದ್ರ ರಾವ್ ರವರು ಹೇಳಿದರು, ಹಾಗೂ ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಶುಭವನ್ನು ಕೋರಿದರು.

ಈ ಸಂದರ್ಭದಲ್ಲಿ, ಶೈಕ್ಷಣಿಕ, ಕ್ರೀಡೆ, ಚಿತ್ರಕಲೆ ಹಾಗೂ ಸಂಗೀತ ಕ್ಷೇತ್ರದಲ್ಲಿ ರಾಜ್ಯ-ರಾಷ್ಟ್ರ-ಅಂತರರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಸಾಧನೆಯನ್ನು ಮಾಡಿದ  ಶ್ರೀನಿವಾಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ಪ್ರಶಸ್ತಿ ಪತ್ರವನ್ನು ನೀಡುವುದರ ಮೂಲಕ ಗೌರವಿಸಲಾಯಿತು.

ಸೋಮವಾರ ಆಯೋಜಿಸಿದ್ದ ವಿದ್ಯಾರ್ಥಿಗಳ ಪ್ರತಿಭಾ ಸ್ಪರ್ಧೆಯಲ್ಲಿ, ಶ್ರೀನಿವಾಸ್ ಸಮೂಹ ಶೈಕ್ಷಣಿಕ ಸಂಸ್ಥೆಗಳ ಹಾಗೂ ಶ್ರೀನಿವಾಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಪ್ರತಿಭಾ ಕಲಾ ಸ್ಪರ್ಧೆಯಲ್ಲಿ ಹದಿನಾಲ್ಕು ತಂಡಗಳು ಭಾಗವಹಿಸಿದ್ದವು. ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಏವಿಯೇಷನ್ ಸ್ಟಡಿಸ್ ಮತ್ತು ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಎಜುಕೇಷನ್ ಸಂಸ್ಥೆಯ ವಿದ್ಯಾರ್ಥಿಗಳು ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಸ್ಥಾನವನ್ನು ಪಡೆದರು. ವಿದುಷಿ ಶ್ರೀಮತಿ ಮಾನಸಿ ಸುಧೀರ್ ಮತ್ತು ನೃತ್ಯ ನಿರ್ದೇಶಕರಾದ ಶ್ರೀ ಪ್ರಮೋದ್ ಆಳ್ವ ರವರು ತೀರ್ಪುಗಾರರಾಗಿ ಆಗಮಿಸಿ, ಸ್ಪರ್ಧಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಮಂಗಳವಾರ, ಸಭಾ ಕಾರ್ಯಕ್ರಮದ ಬಳಿಕ, ಶ್ರೀನಿವಾಸ್ ವಿಶ್ವವಿದ್ಯಾಲಯ ಹಾಗೂ ಶ್ರೀನಿವಾಸ್ ಸಮೂಹ ಶೈಕ್ಷಣಿಕ ಸಂಸ್ಥೆಗಳ ಸಿಬ್ಬಂದಿಗಳಿಂದ ರಂಗಪಂಚಮಿ “ವೀರ ಬಬ್ರುವಾಹನ” ಯಕ್ಷಗಾನವನ್ನು ಪ್ರದರ್ಶಿಸಲಾಯಿತು. ಶ್ರೀ ಜಿ ಕೆ ನಾವಡ ಮತ್ತು ತಂಡದವರು ಹಿಮ್ಮೇಳದಲ್ಲಿ ಸಹಕರಿಸಿದರು. ಮುಮ್ಮೇಳದಲ್ಲಿ, ಶ್ರೀನಿವಾಸ್ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ಪಿ ಎಸ್ ಐತಾಳ್ ರವರು ನೀಲಧ್ವಜನ ಪಾತ್ರದಲ್ಲಿ, ಶ್ರೀನಿವಾಸ್ ಕಾಲೇಜ್ ಆಫ್ ಫಾರ್ಮಸಿಯ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಶಬರಾಯ ರವರು ಬಬ್ರುವಾಹನನ ಪಾತ್ರವನ್ನು ಹಾಗೂ ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಶ್ರೀಮತಿ ಸುಮನ ರವರು ಅರ್ಜುನನ ಪಾತ್ರವನ್ನು ನಿರ್ವಹಿಸಿ, ಮೆಚ್ಚುಗೆಯನ್ನು ಪಡೆದರು.

ತದನಂತರ, ಶ್ರೀನಿವಾಸ್ ವಿಶ್ವವಿದ್ಯಾಲಯ ಹಾಗೂ ಶ್ರೀನಿವಾಸ್ ಸಮೂಹ ಶೈಕ್ಷಣಿಕ ಸಂಸ್ಥೆಗಳ ಸಿಬ್ಬಂದಿಗಳು, ಸಾಂಸ್ಕೃತಿಕ ಹಾಗೂ ಮನೋರಂಜನಾ ಕಾರ್ಯಕ್ರಮವನ್ನು ಪ್ರದರ್ಶಿಸಿದರು.

ಶ್ರೀನಿವಾಸ್ ವಿಶ್ವವಿದ್ಯಾಲಯದ ವಿಶ್ವಸ್ತ ಮಂಡಳಿಯ ಸದಸ್ಯರಾದ ಶ್ರೀಮತಿ ಎ. ವಿಜಯಲಕ್ಷ್ಮಿ ಆರ್ ರಾವ್, ವಿಶ್ವವಿದ್ಯಾಲಯದ ವಿಶ್ವಸ್ತ ಮಂಡಳಿಯ ಸದಸ್ಯರಾದ ಪ್ರೊ. ಶ್ರೀಮತಿ ಎ. ಮಿತ್ರಾ ಎಸ್ ರಾವ್, ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ಪಿ ಎಸ್ ಐತಾಳ್, ವಿಶ್ವವಿದ್ಯಾಲಯದ ಸಹಉಪಕುಲಪತಿಗಳಾದ ಡಾ. ಜಿಲ್ಲೆಲ್ಲಾ ಸತ್ಯ ಸಾಯಿ ಕುಮಾರ್, ವಿಶ್ವವಿದ್ಯಾಲಯದ ಕುಲಸಚಿವರುಗಳು, ಶ್ರೀನಿವಾಸ್ ವಿಶ್ವವಿದ್ಯಾಲಯ ಹಾಗೂ ಶ್ರೀನಿವಾಸ್ ಸಮೂಹ ಶೈಕ್ಷಣಿಕ ಸಂಸ್ಥೆಗಳ ಪ್ರಾಂಶುಪಾಲರು ಹಾಗೂ ಮುಖ್ಯಸ್ಥರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ರಾಮಕೃಷ್ಣ ಹೆಗಡೆಯವರು ಸುಶ್ರಾವ್ಯವಾಗಿ ಹಾಡಿ ದೇವರಿಗೆ ಪ್ರಾರ್ಥನೆಯನ್ನು ಸಲ್ಲಿಸಿದರು.ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಎಜುಕೇಷನ್ ಇದರ ಮುಖ್ಯಸ್ಥರಾದ ಡಾ. ಜಯಶ್ರೀ ಬೋಳಾರ್ ರವರು ವಂದನಾರ್ಪಣೆ ಸಲ್ಲಿಸಿದರು.ಡಾ. ಪದ್ಮಾ ರವರು ಕಾರ್ಯಕ್ರಮವನ್ನು ನಿರೂಪಿಸಿದರು.

Related Posts

Leave a Reply

Your email address will not be published.

How Can We Help You?