ಕೋಡಿಕಲ್‍ನ ಶ್ರೀ ಕುರುಅಂಬಾ ರಾಜರಾಜೇಶ್ವರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಸಂಭ್ರಮ

ಮಂಗಳೂರಿನ ಕೋಡಿಕಲ್‍ನ ಕಲ್ಬಾವಿ ಬನದ ಶ್ರೀ ಕುರುಅಂಬಾ ರಾಜರಾಜೇಶ್ವರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಆರಂಭಗೊಂಡಿದೆ.
ಶ್ರೀ ಕುರುಅಂಬಾ ರಾಜರಾಜೇಶ್ವರಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದಿನಿಂದ ಎಪ್ರಿಲ್ 16ರ ವರೆಗೆ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯಲಿದ್ದು, ಬ್ರಹ್ಮಶ್ರೀ ದೇರೆಬೈಲು ವಿಠಲದಾಸ ತಂತ್ರಿವರ್ಯರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡಿದೆ. ಶ್ರೀ ಕ್ಷೇತ್ರದಲ್ಲಿ ಇಂದು ನವಕ ಕಲಶ, ಪ್ರಧಾನ ಹೋಮ, ಶ್ರೀದೇವಿಗೆ ಹಾಗೂ ಸುಬ್ರಹ್ಮಣ್ಯ ದೇವರಿಗೆ ಹೂವಿನ ಪೂಜೆ ನೆರವೇರಿತು, ಮಧ್ಯಾಹ್ನ 12 ಗಂಟೆಗೆ ಧ್ವಜಾರೋಹಣ, ಮಹಾಪೂಜೆ ತದನಂತರ ಅನ್ನ ಸಂತರ್ಪಣೆ ನಡೆಯಿತು

.ಈ ಸಂದರ್ಭದಲ್ಲಿ ಶ್ರೀ ದೇವಳದ ಆಡಳಿತ ಮೊಕ್ತೇಸರರು, ಅರ್ಚಕ ವೃಂದ ಮತ್ತು ಸಿಬ್ಬಂದಿ ವರ್ಗ ಸೇವಾ ಸಮಿತಿ ಮತ್ತು ಊರಿನ ಹತ್ತು ಸಮಸ್ತರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.

How Can We Help You?