ವಿಟ್ಲ: ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಪ್ರಯುಕ್ತ ,ಪ.ಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆ ಆಯೋಜನೆ

ವಿಟ್ಲ: ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ಮತ್ತು ಮಹಿಳಾ ಘಟಕದ ವತಿಯಿಂದ ಡಾ. ಬಿ ಆರ್ ಅಂಬೇಡ್ಕರ್ ಅವರ 131ನೇ ಜನ್ಮ ದಿನಾಚರಣೆ ಪ್ರಯುಕ್ತ ನಡೆಯಲಿರುವ ಜಿಲ್ಲಾ ಮಟ್ಟದ 15ನೇ ಆಚರಣೆ ಪ್ರಯುಕ್ತ ಪ.ಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳು ವಿಟ್ಲ ಸರಕಾರಿ ಶಾಲಾ ಮೈದಾನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಮೂಡಬಿದಿರೆ ನಲಿಕೆ ಯಾನೆ ಪಾಣಾರ ಸಂಘದ ಜಿಲ್ಲಾ ಗೌರವಾಧ್ಯಕ್ಷ ಎಂ.ಡಿ ವೆಂಕಪ್ಪ ಅವರು ಉದ್ಘಾಟಿಸಿ, ಅಂಬೇಡ್ಕರ್ ದಿನಾಚರಣೆ ಬಗ್ಗೆ ಮಾತನಾಡಿದರು. ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ಸ್ಥಾಪಕಾಧ್ಯಕ್ಷ ಬಿ.ಕೆ ಸೇಸಪ್ಪ ಬೆದ್ರಕಾಡು, ಜಿಲ್ಲಾಧ್ಯಕ್ಷ ಚಂದ್ರಶೇಖರ ಯು, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮೀನಾಕ್ಷಿ ನೆಲ್ಲಿಗುಡ್ಡೆ, ಬಂಟ್ವಾಳ ತಾಲೂಕು ಅಧ್ಯಕ್ಷ ಸಂಜೀವ ಹೆಗ್ಡೆಕೋಡಿ, ಮಹಿಳಾ ಘಟಕದ ಅಧ್ಯಕ್ಷೆ ಲಲಿತ ಪಾಲ್ತಾಜೆ, ಜಿಲ್ಲಾ ದಲಿತ್ ಸೇವಾ ಸಮಿತಿ ಗೌರವ ಸಲಹೆಗಾರ ರಾಮಣ್ಣ ಪಿಲಿಂಜ, ಪುತ್ತೂರು ಘಟಕದ ಅಧ್ಯಕ್ಷೆ ಲಲಿತಾ ಟೀಚರ್, ಜಿಲ್ಲಾ ಉಪಾಧ್ಯಕ್ಷ ಪ್ರಸಾದ್ ಬೊಳ್ಮಾರ್ , ಪ್ರಸಾದ್ , ಸುಪ್ರೀತ ಪಿಲಿಂಜ ಉಪಸ್ಥಿತರಿದ್ದರು