ಸರ್ವೋತ್ತಮ ಸೇವಾ ಪ್ರಶಸ್ತಿ ವಿತರಣಾ ಸಮಾರಂಭ : 2019-20ನೇ ಸಾಲಿನ ಪ್ರತಿಭಾ ಪುರಸ್ಕಾರ ಸಮಾರಂಭ

ದಕ್ಷಿಣ ಕನ್ನಡ ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ(ರಿ) ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಪ್ರಯುಕ್ತ 2021ನೇ ಹಾಗೂ 2022ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿ ವಿತರಣಾ ಸಮಾರಂಭ ಹಾಗೂ 2019-20ನೇ ಸಾಲಿನ ಪ್ರತಿಭಾ ಪುರಸ್ಕಾರ ಸಮಾರಂಭವು ಎಪ್ರಿಲ್ 21ರಂದು ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ.

ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನೀಲ್ ಕುಮಾರ್ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ವೇದವ್ಯಾಸ ಕಾಮತ್ ವಹಿಸಲಿದ್ದಾರೆ. ಸರ್ಕಾರಿ ಸೇವೆ ಸಲ್ಲಿಸಿದ 20 ಸರ್ಕಾರಿ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಪ್ರದಾನ ಮಾಡಿ ಸನ್ಮಾನಿಸಲಿದ್ದೇವೆ. 2019 ಮತ್ತು 20ರಲ್ಲಿ ಎಸೆಸೆಲ್ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಸಂಪನ್ನತೆಯನ್ನು ಪ್ರಶಂಸಿಸಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು.

ಈ ಸಂದರ್ಭ ಸುದ್ದಿಗೋಷ್ಟಿಯಲ್ಲಿ ಕಾರ್ಯದರ್ಶಿ ಎಚ್. ಗಣೇಶ್ ರಾವ್, ರಾಜ್ಯ ಪರಿಷತ್ ಸದಸ್ಯರಾದ ಶೆರ್ಲಿ ಸುಮಾಲಿನಿ, ಖಜಾಂಜಿ ಅಕ್ಷಯ್ ಭಂಡಾರ್ಕರ್, ನವೀನ್ ಕುಮಾರ್ ಉಪಸ್ಥಿತರಿದ್ದರು.

Related Posts

Leave a Reply

Your email address will not be published.

How Can We Help You?