ಸುದ್ದಿ ಹರಡುವ ಮುನ್ನ ಬೀದಿ ನಾಟಕ ಪ್ರದರ್ಶನ

ರೇಡಿಯೋ ಸಾರಂಗ್ 107.8 ಹಾಗು ಸಂತ ಅಲೋಶಿಯಸ್ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಸಹಯೋಗದಲ್ಲಿ ‘ಸುದ್ದಿ ಹರಡುವ ಮುನ್ನ’ ಎನ್ನುವ ಬೀದಿನಾಟಕ ಕಾಲೇಜಿನ ಮದರ್ ತೆರೇಸಾ ಪೀಸ್ ಪಾರ್ಕ್ ನಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಸಂತ ಅಲೋಶಿಯಸ್ ಕಾಲೇಜಿನ ಪ್ರಾಂಶುಪಾಲರಾದ ಫಾದರ್ ಡಾಕ್ಟರ್ ಪ್ರವೀಣ್ ಮಾರ್ಟಿಸ್ ಎಸ್. ಜೆ ಅವರು ಮಾತನಾಡಿ, ವಿದ್ಯಾರ್ಥಿಗಳು ಬೀದಿ ನಾಟಕದ ಮೂಲಕ ಬಹಳ ಉತ್ತಮ ಸಂದೇಶವನ್ನು ನೀಡುವ ಪ್ರಯತ್ನಕ್ಕೆ ಅಭಿನಂದನೀಯ ಎಂದರು.

ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ. ವಿಲಿಯಂ ಮಾರ್ಸೆಲ್ ರೋಡ್ರಿಗಸ್ ಎಸ್ ಜೆ ಅವರು ಮಾತನಾಡಿ, ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡುವ ಬೀದಿ ನಾಟಕವನ್ನು ಪ್ರಸ್ತುತಪಡಿಸಿದ್ದಾರೆ ಎಂದರು.

ಇದೇ ವೇಳೆ ವಿದ್ಯಾರ್ಥಿಗಳಿಂದ ಬೀದಿ ನಾಟಕ ಪ್ರದರ್ಶನಗೊಂಡಿತು.
ಈ ಸಂದರ್ಭ ರೇಡಿಯೋ ಸಾರಂಗ ನಿರ್ದೇಶಕರಾದ ಡಾ. ಫಾದರ್ ಮೆಲ್ವಿನ್ ಪಿಂಟೋ ಎಸ್ ಜೆ. ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.