ಮುಲ್ಕಿ : ಬಸ್ ಮತ್ತು ಓಮಿನಿ ನಡುವೆ ಅಪಘಾತ : ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತ್ಯು

ಮುಲ್ಕಿ ಸಮೀಪದ ಪಾವಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಬಸ್ ಮತ್ತು ಒಮಿನಿ ವಾಹನಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಗು ಇನ್ನೋರ್ವ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕತ್ಸೆ ಪಡೆಯುತ್ತಿದ್ದಾರೆ.

ಮೃತರನ್ನ ಚಾಲಕ ಭುಜಂಗ ಹಾಗು ಇನ್ನೋರ್ವ ವಸಂತ ಕುಂದರ್ ಎಂದು ಗುರುತಿಸಲಾಗಿದೆ. ಗಾಯಾಳು ಬಾಲಕೃಷ್ಣ ಚಿಕಿತ್ಸೆಯಲ್ಲಿದ್ದು ಎಲ್ಲರೂ ಮುಕ್ಕಾ ಸಮೀಪದ ಪಡ್ರೆ ನಿವಾಸಿಗಳಾಗಿರುತ್ತಾರೆ. ಒಮಿನಿ ಕಾರ್ ಚಾಲಕನ ನಿರ್ಲಕ್ಷ್ಯತನದಿಂದ ಈ ಘಟನೆ ಸಂಭವಿಸಿದ್ದು ಮಂಗಳೂರು ಉತ್ತರ ಸಂಚಾರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Posts

Leave a Reply

Your email address will not be published.

How Can We Help You?