ಪುತ್ತೂರು : ಜನನ-ಮರಣ ಪ್ರಮಾಣ ಪತ್ರ ಜನರ ಮನೆಬಾಗಿಲಿಗೆ ಯೋಜನೆಗೆ ಚಾಲನೆ

ಪುತ್ತೂರು: ಜನನ-ಮರಣ ಪ್ರಮಾಣಪತ್ರವನ್ನು ಜನರ ಮನೆ ಬಾಗಿಲಿಗೆ ಸ್ಪೀಡ್ ಪೋಸ್ಟ್ ಮೂಲಕ ತಲುಪಿಸುವ ನಿಟ್ಟಿನಲ್ಲಿ ನಗರಸಭೆ ಹಾಗೂ ಅಂಚೆ ಇಲಾಖೆ ವತಿಯಿಂದ ಯೋಜನೆಗೆ ಶುಕ್ರವಾರ ನಗರಸಭೆ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.

ಕರಾರುಪತ್ರಕ್ಕೆ ಸಹಿ ಹಾಕುವ ಮೂಲಕ ಚಾಲನೆ ನೀಡಿದ ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಮಾತನಾಡಿ, ಸಾರ್ವಜನಿಕರ ಹಿತದೃಷ್ಟಿಯಿಂದ ಈ ಯೋಜನೆಯನ್ನಯ ಕೈಗೊಳ್ಳಲಾಗಿದ್ದು, ಈಗಾಗಲೇ ಒಪ್ಪಂದಪತ್ರಕ್ಕೆ ಸಹಿ ಮಾಡಲಾಗಿದೆ. ಈಗಾಗಲೇ ಜನನ-ಮರಣ ಪತ್ರಕ್ಕೆ ಸಾಕಷ್ಟು ಅರ್ಜಿಗಳು ಬರುತ್ತಿದ್ದು, ಬೇರೆ ಬೇರೆ ರಾಜ್ಯ, ಊರುಗಳಲ್ಲಿರುವವರಿಗೆ ಸಕಾಲದಲ್ಲಿ ಕೊಂಡು ಹೋಗಲು ಕಷ್ಟಕರವಾಗಿದೆ. ಈ ನಿಟ್ಟಿನಲ್ಲಿ ಸ್ಪೀಡ್ ಪೋಸ್ಟ್ ಮೂಲಕ ಅವರ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ ಎಂದರು.

ಅಂಚೆ ಇಲಾಖೆಯ ಡಾ.ಏಂಜಲ್‍ರಾಜ್ ಮಾತನಾಡಿ, ಮಂಗಳೂರಿನಲ್ಲಿ ಈಗಾಗಲೇ ಈ ಯೋಜನೆಯನ್ನು ಮಾಡಲಾಗಿದೆ. ಪುತ್ತೂರು ನಗರಸಭೆ ಈ ಯೋಜನೆಗೆ ಕೈಜೋಡಿಸಿರುವುದು ಸಂತಸವಾಗಿದೆ. ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಿ ಎಂದರು.

ವೇದಿಕೆಯಲ್ಲಿ ನಗರಸಭೆ ಪೌರಾಯುಕ್ತ ಮಧು ಎಸ್.ಮನೋಹರ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಚಂದ್ರ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು, ಅಂಚೆ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related Posts

Leave a Reply

Your email address will not be published.

How Can We Help You?