ಎಜೆ ಇನ್ಸಿಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಂಡ್ ರಿಸರ್ಚ್ ಸೆಂಟರ್ : ಪದವಿ, ಸ್ನಾತಕೋತ್ತರ ವಿದ್ಯಾರ್ಥಿಗಳ ಪದವಿ ಪ್ರದಾನ

ಮಂಗಳೂನ ಕುಂಟಿಕಾನದಲ್ಲಿರುವ ಎಜೆ ಇನ್ಸಿಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಂಡ್ ರಿಸರ್ಚ್ ಸೆಂಟರ್‍ನ ಪದವಿ ಪ್ರದಾನ ಕಾರ್ಯಕ್ರಮ ಮತ್ತು ವಾರ್ಷಿಕ ದಿನಾಚರಣೆಯು ಸಂಸ್ಥೆಯ ಆವರಣದಲ್ಲಿ ನಡೆಯಿತು.

ಸಂಸ್ಥೆಯ ಆವರಣದಲ್ಲಿರುವ ಎಜೆ ಮೈದಾನದಲ್ಲಿ ನಡೆದ ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು. ಇದೇ ವೇಳೆ ಆದಿಚುಂಚನಗಿರಿ ವಿಶ್ವವಿದ್ಯಾನಿಲಯದ ಸಹ ಕುಲಾಧಿಪತಿ ಪ್ರೊ. ಕೆ. ಬೈರಪ್ಪ ಅವರನ್ನು ಗಣ್ಯರು ಸನ್ಮಾನಿಸಲಾಯಿತು. ನಂತರ ಮಾತನಾಡಿದ ಅವರು, ವೈದ್ಯರು ದೇವರಿಗೆ ಸಮಾನ, ಮುಂದೆ ವೈದ್ಯರಾಗಿರುವ ನೀವು ನಿಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿಭಾಯಿಸಿ. ಇಲ್ಲಿನ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದಿರುವುದಕ್ಕೆ ನೀವು ತುಂಬಾ ಹೆಮ್ಮೆ ಪಡಬೇಕು ಎಂದ ಅವರು ಪ್ರದವಿ ಸ್ವೀಕರಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು.

ಆನಂತರ ಎಲ್‍ಎಮ್‍ಇಟಿ ಅಧ್ಯಕ್ಷರಾದ ಡಾ. ಎ.ಜೆ. ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇದೇ ವೇಳೆ ಆದಿಚುಂಚನಗಿರಿ ವಿಶ್ವವಿದ್ಯಾನಿಲಯದ ಸಹ ಕುಲಾಧಿಪತಿ ಪ್ರೊ. ಕೆ. ಬೈರಪ್ಪ ಮತ್ತು ಎಲ್‍ಎಮ್‍ಇಟಿ ಅಧ್ಯಕ್ಷರಾದ ಡಾ. ಎ.ಜೆ. ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. 196 ಮಂದಿ ಎಂಬಿಬಿಎಸ್ ಪದವೀಧರರು ಹಾಗೂ 16 ಮಂದಿ ಸ್ನಾತಕೋತ್ತರ ಪದವೀಧರರು ಸೇರಿದಂತೆ ಒಟ್ಟು 212 ಮಂದಿ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ಪ್ರದಾನ ಮಾಡಲಾಯಿತು.

ಕಾಲೇಜಿನ ಡೀನ್ ಡಾ. ಅಶೋಕ್ ಹೆಗ್ಡೆ ಅವರು ವಾರ್ಷಿಕ ವರದಿಯನ್ನು ವಾಚಿಸಿದರು. ನಂತರ ಪದವಿ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಮತ್ತು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪದಕ ಪ್ರದಾನ ಮಾಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಲಕ್ಷ್ಮೀ ಮಮೋರಿಯಲ್ ಎಜ್ಯುಕೇಶನ್ ಟ್ರಸ್ಟ್‍ನ ಉಪಾಧ್ಯಕ್ಷರಾದ ಪ್ರಶಾಂತ್ ಶೆಟ್ಟಿ, ಎಜೆ ಹೆಚ್‍ಆರ್‍ಸಿಯ ವೈದ್ಯಕೀಯ ನಿರ್ದೇಶಕರಾದ ಡಾ. ಪ್ರಶಾಂತ್ ಮಾರ್ಲ, ಸಂಸ್ಥೆಯ ನಿರ್ದೇಶಕರಾದ ಶಾರದಾ ಜೆ ಶೆಟ್ಟಿ, ಎಜೆ ಹೆಚ್‍ಆರ್‍ಸಿ ವಿಭಾಗದ ನಿರ್ದೇಶಕರಾದ ಡಾ. ಅಮಿತಾ ಮಾರ್ಲ, ಲಕ್ಷ್ಮೀ ಮಮೋರಿಯಲ್ ಎಜ್ಯುಕೇಶನ್ ಟ್ರಸ್ಟ್‍ನ ನಿರ್ದೇಶಕರಾದ ಆಶ್ರಿತಾ ಪಿ ಶೆಟ್ಟಿ, ಪ್ರೊ. ರಮೇಶ್ ಪೈ, ಡಾ. ತೇಜಸ್ವಿನಿ ಗೌಡ, ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು ಪ್ರಾಧ್ಯಾಪಕರು ವೇದಿಕೆಯಲ್ಲಿದ್ದರು.

ಸಂಸ್ಥೆಯ ಅಸೋಸಿಯೇಟ್ ಡೀನ್ ಡಾ. ಫ್ರಾನ್ಸಿಸ್ ಪಿ. ಮೊಂತೆರೋ ಸ್ವಾಗತಿಸಿ, ಇನ್ನೋರ್ವ ಅಸೋಸಿಯೇಟ್ ಡೀನ್ ಡಾ. ಸುಶಿತ್ ವಂದಿಸಿದರು. ಜಾನೀಸ್ ಡಿಸೋಜಾ ಮತ್ತು ರಯಾನಾ ಫೆರ್ನಾಂಡಿಸ್ ಕಾರ್ಯಕ್ರಮ ನಿರ್ವಹಿಸಿದರು.

Related Posts

Leave a Reply

Your email address will not be published.

How Can We Help You?