ಕೊಡಿಯಾಲ್‍ಬೈಲ್‍ನ ಸಿಬಿಇಯು ಗೋಲ್ಡನ್ ಜ್ಯುಬಿಲಿ ಹಾಲ್‍ನಲ್ಲಿ ಅಲೆಮಾರಿ ಬುಡಕಟ್ಟು ಸಮುದಾಯದ ಹಕ್ಕೊತ್ತಾಯ ಸಮಾವೇಶ

ಮಂಗಳೂರು: ಕರಾವಳಿ ವೃತ್ತಿನಿರತ ಅಲೆಮಾರಿ (ಶಿಳ್ಳೆಕ್ಯಾತ) ಹಕ್ಕುಗಳ ಸಮಿತಿ ದ.ಕ.ಜಿಲ್ಲಾ ಘಟಕದ ಆಶ್ರಯದಲ್ಲಿ ನಗರದ ಕೊಡಿಯಾಲ್‍ಬೈಲ್‍ನ ಸಿಬಿಇಯು ಗೋಲ್ಡನ್ ಜ್ಯುಬಿಲಿ ಹಾಲ್‍ನಲ್ಲಿ ಹಕ್ಕೊತ್ತಾಯ ಸಮಾವೇಶ ನಡೆಯಿತು.

ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ಅಲೆಮಾರಿ, ಅರೆ ಅಲೆಮಾರಿ ಮತ್ತು ವಿಮುಕ್ತ ಬುಡಕಟ್ಟುಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಾ. ಮಲ್ಲಿಕಾರ್ಜುನ ಮಾನ್ಪಡೆಯವರು, ಅಲೆಮಾರಿ (ಶಿಳ್ಳೆಕ್ಯಾತ), ಆದಿವಾಸಿ ಸಮುದಾಯ ಮನೆ, ಶಿಕ್ಷಣ, ಉದ್ಯೋಗ, ಆರೋಗ್ಯ ಸೌಲಭ್ಯಗಳಂತಹ ಕನಿಷ್ಟ ಮೂಲಭೂತ ಸೌಲಭ್ಯಗಳಿಗಾಗಿ ಹಲವು ದಶಕಗಳಿಂದ ಸರಕಾರಗಳ ಮುಂದೆ ನಿರಂತರ ಬೇಡಿಕೆಗಳನ್ನು ಮಂಡಿಸುತ್ತಾ ಬಂದಿವೆ. ಆದರೆ ಇದಕ್ಕೆ ಈವರೆಗೆ ಯಾವುದೇ ಸ್ಪಂದನೆ ದೊರಕಿಲ್ಲ ಎಂದರು.

ಕರ್ನಾಟಕ ಅದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಹಸಂಚಾಲಕ ಡಾ. ಕೃಷ್ಣಪ್ಪ ಕೊಂಚಾಡಿ ಮಾತನಾಡಿ ನಿರಂತರ ಶೋಷಣೆ, ದೌರ್ಜನಕ್ಕೆ ಒಳಗಾಗುತ್ತಾ ಬಂದಿರುವ ಆದಿವಾಸಿ, ಬುಡಕಟ್ಟು, ಅಲೆಮಾರಿ ಸಮುದಾಯಗಳು ಸಂಘಟಿತರಾಗಿ ನ್ಯಾಯಯುತ ಬೇಡಿಕೆಗಳನ್ನು ಪಡೆಯಲು ಮುಂದಾಗಬೇಕಿದೆ ಎಂದರು.

ಡಿವೈಎಫ್‍ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಕಾರ್ಮಿಕ ನಾಯಕ ಸುನಿಲ್ ಕುಮಾರ್ ಬಜಾಲ್,ಮಂಜುನಾಥ್, ನವೀನ್ ಕುಮಾರ್ ಅತಿಥಿಗಳಾಗಿದ್ದರು. ಕರಾವಳಿ ವೃತ್ತಿನಿರತ ಅಲೆಮಾರಿ ಹಕ್ಕುಗಳ ಸಮಿತಿ ರಾಜ್ಯಾಧ್ಯಕ್ಷ ರವಿ ಟಿ.ಎನ್. ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸಂಘಟನೆಯ ಪ್ರಮುಖರಾದ ದಾಖಲಯ್ಯ, ನಾಗೇಶ್, ರಘು, ರಾಘವೇಂದ್ರ, ಸ್ವಾಮಿ, ಸುಶೀಲಮ್ಮ, ನಾಗೇಶ್ ತೋಕೂರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.

How Can We Help You?