ಎಸ್‍ಸಿಡಿಸಿಸಿ ಬ್ಯಾಂಕ್‍ನ 111ನೇ ಮಣಿಪಾಲ ಶಾಖೆ ಉದ್ಘಾಟನೆ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ 111ನೇ ಶಾಖೆಯನ್ನು ಮಣಿಪಾಲದ ಕಮಿರ್ಷಿಯಲ್ ಕಾಂಪ್ಲೆಕ್ಸ್‍ನಲ್ಲಿ ಉದ್ಘಾಟನಾ ಕಾರ್ಯಕ್ರಮ ಮತ್ತು ಎಂಐಟಿ ಎದುರಿನ ಮೈದಾನದಲ್ಲಿ ನವೋದಯ ಸ್ವಸಹಾಯ ಸಂಘಗಳ ಸಾಧನ ಸಮಾವೇಶ ಅದ್ಧೂರಿಯಾಗಿ ನಡೆಯಿತು

.ರಾಜ್ಯ ಇಂಧನ ಸಚಿವ ಸುನೀಲ್ ಕುಮಾರ್ ಅವರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ 111ನೇ ಶಾಖೆಯನ್ನು ರಿಬ್ಬನ್ ಕತ್ತರಿಸಿ ಉದ್ಘಾಟಿಸಿದರು. ನಂತರ ಭದ್ರತಾ ಕೋಶವನ್ನು ಶಾಸಕ ಕೆ. ರಘುಪತಿ ಭಟ್ ಉದ್ಘಾಟಿಸಿದರು. ಬ್ಯಾಂಕ್‍ನ ಲಾಕರ್ ವ್ಯವಸ್ಥೆಗೆ ನಾಡೋಜ ಡಾ. ಜಿ. ಶಂಕರ್ ಚಾಲನೆ ನೀಡಿದರು. ಇದೇ ವೇಳೆ ಸಚಿವ ಸುನೀಲ್ ಕುಮಾರ್ ಮಾತನಾಡಿ, ಮಹಿಳೆಯರನ್ನು ಆರ್ಥಿಕ ಮತ್ತು ಸಾಮಾಜಿಕವಾಗಿ ಸಶಕ್ತರನ್ನಾಗಿಸುವುದು ರಾಜ್ಯ ಸರ್ಕಾರದ ಅಶಯವಾಗಿದೆ. ಮಹಿಳೆಯರಿಗೆ ಹಣಕಾಸಿನ ವ್ಯವಹಾರ ವಹಿಸಿದಲ್ಲಿ ಸುಲಲಿತ ನಿರ್ವಹಣೆ ಸಾಧ್ಯ. ರಾಜ್ಯದಲ್ಲಿ ಮಹಿಳಾ ಬ್ಯಾಂಕ್ ರಚಿಸುವ ಆಶಯದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್‍ನಲ್ಲಿ 500 ಕೋ.ರೂ. ಮೂಲ ಬಂಡವಾಳ ಮೀಸಲಿಟ್ಟಿದ್ದಾರೆ. ತನ್ಮೂಲಕ ಸರಕಾರ ಮಹಿಳಾ ಪರ ಎಂಬುವುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದರು.

ಆನಂತರ ಅಧ್ಯಕ್ಷತೆ ವಹಿಸಿದ್ದ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ಮತ್ತು ಎಸ್‍ಸಿಡಿಸಿಸಿ ಬ್ಯಾಂಕ್‍ನ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಮಾತನಾಡಿ, ಮಣಿಪಾಲವು ಅತ್ಯಂತ ಶ್ರೀಮಂತ ಪ್ರದೇಶ. ಯಾಕೆಂದರೆ 40 ಕೋಟಿ ರೂ.ಗೂ ಅಧಿಕ ಠೇವಣಿ ನೀಡಿದ ಮತ್ತು ಸಾವಿರಕ್ಕೂ ಅಧಿಕ ಖಾತೆ ತೆರೆದ ಕೀರ್ತಿ ಇಲ್ಲಿನ ಜನತೆಗೆ ಸಲ್ಲುತ್ತದೆ. 70 ಸ್ವಸಹಾಯ ಗುಂಪುಗಳು ರಚನೆಗೊಂಡಿವೆ ಎಂದರು. ಇದೇ ವೇಳೆ ಡಾ. ಎಂ.ಎನ್ ರಾಜೇಂದ್ರ ಕುಮಾರ್ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‍ನ ಅಧ್ಯಕ್ಷ, ಶಾಸಕ ಬೆಳ್ಳಿ ಪ್ರಕಾಶ್ ಅವರು ಮೊಬೈಲ್ ಬ್ಯಾಂಕ್ ಉದ್ಘಾಟಿಸಿದರು.ಪ್ರಥಮ ಲಾಕರ್ ಕೀ ಹಸ್ತಾಂತರ ಮತ್ತು ಗೃಹ ಸಾಲ ಪತ್ರವನ್ನು ನಾಡೋಜ ಜಿ. ಶಂಕರ್ ವಿತರಿಸಿದರು. ಮಣಿಪಾಲದ ವೈಷ್ಣವಿ, ಭ್ರಮರಾಂಬಿಕೆ ಸ್ವಸಹಾಯ ಗುಂಪುಗಳನ್ನು ಉದ್ಘಾಟಿಸಲಾಯಿತು.

ಕೋವಿಡ್‍ನಿಂದ ಮೃತಪಟ್ಟ 59 ಸಹಕಾರಿ ಸದಸ್ಯರ ಕುಟುಂಬಕ್ಕೆ ತಲಾ 1 ಲಕ್ಷ ರೂ. ನವೋದಯ ಜಂಟಿ ಬಾಧ್ಯತಾ ಗುಂಪುಗಳಿಗೆ ಸಾಲ, ಉಚ್ಚಿಲ ಮಹಾಲಕ್ಷ್ಮೀ ದೇಗುಲದ ಅಭಿವೃದ್ಧಿಗೆ 25 ಲಕ್ಷ ರೂ. ಪೊಲಿಯೋ ಪೀಡಿತರಿಗೆ ಧನಸಹಾಯದ ಚೆಕ್ ವಿತರಿಸಲಾಯಿತು. ಬ್ಯಾಂಕ್‍ನಲ್ಲಿ 7 ಸಾವಿರ ರೂ.ಗಿಂತ ಹೆಚ್ಚು ಠೇವಣಿ ನೀಡಿದ 25 ಸಾವಿರ ರೂ.ಗಿಂತ ಅಧಿಕ ಮೊತ್ತದ ನಿರಖು ಠೇವಣಿ ನೀಡಿದ ಅದೃಷ್ಟಶಾಲಿಗಳನ್ನು ಆರಿಸಲಾಯಿತು.

ಈ ಸಂದರ್ಭದಲ್ಲಿ ಸಹಕಾರಿ ಅಪಕ್ಸ್ ಬ್ಯಾಂಕ್‍ನ ಸಿಇಒ ಸಿ.ಎನ್. ದೇವರಾಜ್ , ನಬಾರ್ಡ್‍ನ ಡಿಜಿಎಂ ಸಂಗೀತಾ ಕರ್ತಾ, ಜಿಲ್ಲಾ ಸಹಕಾರಿ ಯೂನಿಯನ್‍ನ ಅಧ್ಯಕ್ಷ, ರಾಜ್ಯ ಸಹಕಾರ ಮಹಾಮಂಡಲದ ನಿರ್ದೇಶಕ ಜಯಕರ ಶೆಟ್ಟಿ ಇಂದ್ರಾಳಿ, ಹೆರ್ಗ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ದಿನಕರ ಶೆಟ್ಟಿ ಹೆರ್ಗ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ದ.ಕ. ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶಪಾಲ್ ಸುವರ್ಣ, ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ಪ್ರಭಾರ ಸಿಇಒ ರವೀಂದ್ರ ಬಿ, ನಿರ್ದೇಶಕರಾದ ಬಿ. ನಿರಂಜನ್ ಟಿ.ಜಿ. ರಾಜಾರಾಮ್ ಭಟ್, ಭಾಸ್ಕರ್ ಎಸ್ ಕೋಟ್ಯಾನ್, ಎಂ. ವಾದಿರಾಜ ಶೆಟ್ಟಿ, ರಾಜು ಪೂಜಾರಿ, ಶಶಿಕುಮಾರ್ ರೈ ಬಿ, ಎಸ್.ಬಿ. ಜಯರಾಮ್ ರೈ, ಬಿ. ಅಶೋಕ್ ಕುಮಾರ್ ಶೆಟ್ಟಿ, ಮೋನಪ್ಪ ಶೆಟ್ಟಿ ಎಕ್ಕಾರು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಪ್ರವೀಣ್ ಬಿ. ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

ನಿರ್ದೇಶಕ ಐಕಳ ಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಸ್ವಾಗತಿಸಿದರು. ಅಜಿತ್ ಕುಮಾರ್ ಕೊಕ್ಕಾಡಿ ನಿರೂಪಿಸಿದರು. ಅಶೋಕ್ ಕುಮಾರ್ ಶೆಟ್ಟಿ ವಂದಿಸಿದರು.

Related Posts

Leave a Reply

Your email address will not be published.

How Can We Help You?