ಉಡುಪಿಯ ಮಲ್ಪೆ ಬೀಚ್ನಲ್ಲಿರುವ ತೇಲುವ ಸೇತುವೆ

ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಮಲ್ಪೆ ಬೀಚ್ನಲ್ಲಿ ಸ್ಥಾಪಿಸಲಾಗಿರುವ ಕರ್ನಾಟಕ ರಾಜ್ಯದ ಪ್ರಪ್ರಥಮ ತೇಲುವ ಸೇತುವೆಗೆ ಚಾಲನೆ ನೀಡಲಾಯಿತು.
100 ಮೀಟರ್ ಉದ್ದ ಹಾಗೂ ಮೂರೂವರೆ ಮೀಟರ್ ಅಗಲ ಇರುವ ಈ ಸೇತುವೆ ಉದ್ದಕ್ಕೂ ತಡೆಬೇಲಿಯನ್ನು ಹಾಕಲಾಗಿದೆ. 10 ವರ್ಷದಿಂದ 60ವರ್ಷ ಪ್ರಾಯದವರು ಇದರಲ್ಲಿ ನಡೆಯುವ ಮೂಲಕ ಹೊಸ ಅನುಭವ ಪಡೆದುಕೊಳ್ಳಬಹುದಾಗಿದೆ. ಇದರಲ್ಲಿ ನಡೆಯುವವರಿಗೆ ಲೈಫ್ ಜಾಕೆಟ್ ಕಡ್ಡಾಯ ಮಾಡಲಾಗಿದೆ.

ಸುಮಾರು 80 ಲಕ್ಷ ರೂ. ವೆಚ್ಚದ ವಿದೇಶಿ ತಂತ್ರಜ್ಞಾನದಲ್ಲಿ ತಯಾರಿಸಿದ ಸೇತುವೆ ಇದಾಗಿದೆ. ಪ್ರವಾಸಿಗರ ಸುರಕ್ಷತೆಗಾಗಿ 10 ಜನ ಲೈಫ್ ಗಾರ್ಡ್, 30 ಮಂದಿ ಲೈಫ್ ಬಾಯ್ಸ್ ಮತ್ತು ಪ್ಯಾಟ್ರೋಲಿಂಗ್ ಮಾಡಲು ಒಂದು ಬೋಟು ನಿಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಲ್ಪೆ ಬೀಚ್ನ ಗುತ್ತಿಗೆ ದಾರ ಸುದೇಶ್ ಶೆಟ್ಟಿ, ಶಾಸಕ ರಘುಪತಿ ಭಟ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಪಾಧ್ಯಕ್ಷ ಲಕ್ಷ್ಮಿ ಮಂಜುನಾಥ್, ಮಲ್ಪೆ ಬೀಚ್ ಅಭಿವೃದ್ದಿ ಸಮಿತಿ ಅಧ್ಯಕ್ಷ ಪಾಂಡುರಂಗ ಮಲ್ಪೆ, ಮಂಜು ಕೊಳ, ಮಲ್ಪೆ ಎಸ್ಸೈ ಸಕ್ತಿವೇಲು, ಮಲ್ಪೆ ಬೀಚ್ ಗುತ್ತಿಗೆದಾರ ಸುದೇಶ್ ಶೆಟ್ಟಿ, ಶೇಖರ್ ಪುತ್ರನ್, ಧನಂಜಯ ಕಾಂಚನ್ ಉಪಸ್ಥಿತರಿದ್ದರು.