ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ರಾಜೀನಾಮೆ

ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್‍ಗೆ ರಾಜೀನಾಮೆ ನೀಡಿದ್ದಾರೆ. ಸಿದ್ದರಾಮಯ್ಯ ಸರಕಾರದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಪ್ರಮೋದ್ ಮಧ್ವರಾಜ್ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ರಾಜೀನಾಮೆ ನೀಡಿದ್ದಾರೆ.

ಪ್ರಮೋದ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ಬರೆದಿದ್ದು, ನನಗೆ ಪಕ್ಷದಲ್ಲಿ ದುಡಿಸಿಕೊಂಡಿದ್ದಕ್ಕಾಗಿ ಧನ್ಯವಾದಗಳು ಎಂದಿದ್ದಾರೆ. ಉಡುಪಿ ಜಿಲ್ಲೆಯ ಕಾಂಗ್ರೆಸ್‍ನಲ್ಲಿ ನನಗೆ ಮುಂದುವರಿಯಲು ಸಾಧ್ಯವಾಗದ ವಾತಾವರಣವಿದೆ. ನಾನು ಈ ಬಗ್ಗೆ ವಿಷಾದ ವ್ಯಕ್ತಪಡಿಸುತ್ತೇನೆ. ಇತ್ತೀಚಿಗೆ ನನಗೆ ಕೆಪಿಸಿಸಿ ಉಪಾಧ್ಯಕ್ಷನನ್ನಾಗಿ ನೇಮಿಸಿದ್ದೀರಿ ಅದಕ್ಕಾಗಿ ಧನ್ಯವಾದಗಳು, ಆದರೆ ನಾನು ಅದನ್ನು ಒಪ್ಪಿಕೊಳ್ಳುವುದಿಲ್ಲ, ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿಯಲು ಸಾಧ್ಯವಾಗುತ್ತಿಲ್ಲ ಎಂದು ಬರೆದಿದ್ದಾರೆ.

pramodh madhwaraj

2018 ರಲ್ಲಿ ಸರ್ವೇಯೊಂದರಲ್ಲಿ ನಾನು ರಾಜ್ಯದ ಅತ್ಯುತ್ತಮ ಕಾರ್ಯನಿರವಹಿಸಿದ ಶಾಸಕರ ಪೈಕಿ ಮೊದಲಿಗನಾಗಿದ್ದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Related Posts

Leave a Reply

Your email address will not be published.

How Can We Help You?