ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ : ಸ್ಥಳದಲ್ಲೇ ಇಬ್ಬರು ಮೃತ್ಯು

ಗುಂಡ್ಲುಪೇಟೆ: ಗುಂಡ್ಲುಪೇಟೆ ತಾಲ್ಲೂಕಿನ ಹಿರಿಕಾಟಿ ಎಸ್ಎಲ್ವಿ ಪೆಟ್ರೊಲ್ ಬಂಕ್ ಬಳಿ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ತಂದೆ ಮಗ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.
ಮೃತರು ನಂಜನಗೂಡು ಮೂಲದ ಶಶಿಕುಮಾರ್(35) ದರ್ಶನ್(5) ಎಂದು ತಿಳಿದು ಬಂದಿದ್ದು ಶಶಿಕುಮಾರ್ ಪತ್ನಿ ಚೈತ್ರಾ ಮತ್ತು ಮತ್ತೋರ್ವ ಮಗ ಗಗನ್ ಗೆ ಬೇಗೂರು ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಮೈಸೂರಿನ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿದ್ದು ಅವರಿಬ್ಬರ ಸ್ಥಿತಿಯು ಗಂಭೀರವಾಗಿದೆ ಎನ್ನಲಾಗಿದೆ.
ಗುಂಡ್ಲುಪೇಟೆ ಕಡೆಯಿಂದ ಬರುತಿದ್ದ ತಮಿಳುನಾಡಿನ ಮೂಲದ ಕಾರು ಪೆಟ್ರೋಲ್ ಬಂಕ್ ಬಳಿ ಬೈಕ್ ನಡುವೆ ಮುಖಾಮುಖಿಯಾಗಿ ಅಪಘಾತ ಸಂಭವಿಸಿದೆ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು.
ಬೇಗೂರಿನ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆ ನಡೆಸಲು ಮೃತದೇಹಗಳನ್ನು ರವಾನಿಸಲಾಗಿದೆ ಬೇಗೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಾಲಾಗಿದೆ.