ಪ್ರಮೋದ್ ಮಧ್ವರಾಜ್ ಅವಕಾಶವಾದಿ ರಾಜಕಾರಣಿ : ಉಡುಪಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧೃವನಾರಾಯಣ್ ಹೇಳಿಕೆ

ಪ್ರಮೋದ್ ಮಧ್ವರಾಜ್ ಅವಕಾಶವಾದಿ ರಾಜಕಾರಣಿ. ಮೊದಲ ಬಾರಿ ಗೆದ್ದವನಿಗೆ ಪಕ್ಷ ಎಲ್ಲಾ ಅವಕಾಶ ಕೊಟ್ಟಿತ್ತು. ಪ್ರಮೋದ್ ಜಿಲ್ಲಾ ಕಾಂಗ್ರೆಸ್ ವಿರುದ್ಧ ಮಾತನಾಡುವುದು ಶೋಭೆ ತರಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧೃವನಾರಾಯಣ್ ಹೇಳಿದರು.
ಅವರು ಉಡುಪಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಪ್ರಮೋದ್ ಹೇಳಿದವರಿಗೆ ಜಿಲ್ಲಾ ಕಾಂಗ್ರೆಸ್ನಲ್ಲಿ ಅವಕಾಶ ಕೊಟ್ಟಿದ್ದೇವೆ. ಪ್ರಮೋದ್ ಕಾಂಗ್ರೆಸ್ ಬಿಟ್ಟು ಹೋಗಿರುವುದು ದುರಾದೃಷ್ಟಕರ. ಪ್ರಮೋದ್ಗೆ ಸಣ್ಣ ವಯಸ್ಸಿನಲ್ಲಿ ಎಲ್ಲಾ ಹುದ್ದೆ ಕೊಟ್ಟಿದ್ದೇವೆ. ಡಿಕೆಶಿ ಪ್ರಮೋದ್ ಮೇಲೆ ಬಹಳ ನಿರೀಕ್ಷೆ ಇಟ್ಟಿದ್ದರು. ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಗೆ , ಮತದಾರರಿಗೆ ದ್ರೋಹ ಮಾಡಿದ್ದಾರೆ. ಮಧ್ವರಾಜ್ ವೈಯಕ್ತಿಕ ಆಸೆ ಏನಿದೆ ಗೊತ್ತಿಲ್ಲ. ಜಿಲ್ಲೆಯಲ್ಲಿ ಕಾಂಗ್ರೆಸ್ಸನ್ನು ತಳಮಟ್ಟದಿಂದ ಕಟ್ಟುತ್ತೇವೆ. ರಾಜಕಾರಣ ನಿಂತ ನೀರಲ್ಲ, ಉಡುಪಿಯಲ್ಲಿ ಮತ್ತೆ ಪಕ್ಷ ಕಟ್ಟುತ್ತೇವೆ ಎಂದರು.
ನಳಿನ್ ಕುಮಾರ್ ಕಟೀಲ್ ಬೇಜವಾಬ್ದಾರಿ ಹೇಳಿಕೆ ಕೊಡುತ್ತಿದ್ದಾರೆ. ಕಾಂಗ್ರೆಸ್ ಮುಕ್ತ ಮಾಡೋದು ಬಿಜೆಪಿಯ ಹಗಲುಗನಸು. ರಾಜ್ಯದಲ್ಲಿ ಕಾಂಗ್ರೆಸ್ ನ ಪರ್ಫಾಮೆನ್ಸ್ ಚೆನ್ನಾಗಿದೆ. ನಳಿನ್ ಕುಮಾರ್ ಅಂಕಿ ಅಂಶ ಇಟ್ಟುಕೊಂಡು ಮಾತನಾಡಬೇಕು ಎಂದು ಹೇಳಿದರು.
ಅರ್ಕಾವತಿ ಡಿನೋಟಿಫಿಕೇಶನ್ ಪ್ರಕರಣದ ಬಗ್ಗೆ ಮಾತನಾಡಿದ ಅವರು, ಸಮರ್ಥ ಅಧ್ಯಕ್ಷ ಆಗಿದ್ದರೆ ಕಾರ್ಯಾಚರಣೆ ಮಾಡಿ, ಸಿದ್ದರಾಮಯ್ಯರನ್ನು ಬಂಧಿನ ಮಾಡಿ. ನಳಿನ್ ಕುಮಾರ್ ಒಬ್ಬ ಹಿಟ್ ಆಂಡ್ ರನ್ ಕೇಸ್ ಸಿದ್ದರಾಮಯ್ಯ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದ ಆಡಳಿತಗಾರ.
ಬಿಜೆಪಿ ಮನೆಯಲ್ಲಿ ದೊಡ್ಡ ದೊಡ್ಡ ಹೆಗ್ಗಣ ಇದೆ. ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗೆ ಇಲ್ಲ. ನಳಿನ್ ಕುಮಾರ್ ಕಟೀಲ್ ಅಸಮರ್ಥ ರಾಜ್ಯಾಧ್ಯಕ್ಷ ಎಂದು ವಾಗ್ದಾಳಿ ನಡೆಸಿದರು.
ಈ ಸಂದರ್ಭ ಸುದ್ದಿಗೋಷ್ಟಿಯಲ್ಲಿ ಕಾಂಗ್ರೆಸ್ ಮುಖಂಡರಾದ ವಿನಯಕುಮಾರ್ ಸೊರಕೆ, ಉಡುಪಿ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಮೊದಲಾದವರು ಉಪಸ್ಥಿತರಿದ್ದರು.