Home 2022 August (Page 10)

ಮದರ್ ತೆರೇಸಾ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ದಾಖಲೆ ಮೆರೆದ ಜಿಲ್ಲಾ ಮಟ್ಟದ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆ

ಮಾನವೀಯತೆಯ ಪ್ರತಿರೂಪ ಸಂತ ಮದರ್ ತೆರೇಸಾರವರ 25ನೇ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ಇಂದು(20-08-2022) ನಗರದ ಮಿಲಾಗ್ರಿಸ್ ಪ.ಪೂ.ಕಾಲೇಜ್ ನಲ್ಲಿ ದ.ಕ.ಜಿಲ್ಲಾ ಮಟ್ಟದ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ನಿರೀಕ್ಷೆಗೂ ಮೀರಿ ಜಿಲ್ಲೆಯಾದ್ಯಂತ 78 ಶಿಕ್ಷಣ ಸಂಸ್ಥೆಗಳಿಂದ 480 ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸೇರಿದಂತೆ ಸುಮಾರು

ಆ.22;ವೆನ್ಲಾಕ್ ಆಸ್ಪತ್ರೆಯು ಸಮುದಾಯ ವಾಚನಾಲಯ ಉದ್ಘಾಟನಾ ಕಾರ್ಯಕ್ರಮ

ಮಂಗಳೂರು;ವೆನ್ಲಾಕ್ ಆಸ್ಪತ್ರೆ ಮಂಗಳೂರು.ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದ.ಕ ಜಿಲ್ಲೆ. ಯುವ ರೆಡ್ ಕ್ರಾಸ್ ಘಟಕ ಮಂಗಳೂರು ವಿಶ್ವ ವಿದ್ಯಾನಿಲಯ,ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ(ರಿ)ಇದರ ಸಂಯುಕ್ತ ಆಶ್ರಯದಲ್ಲಿ ದಿನಾಂಕ22-8-2022.ಸೋಮವಾರ ಬೆಳಿಗ್ಗೆ 10ಗಂಟೆಗೆ. ವೆನ್ಲಾಕ್ ಆಸ್ಪತ್ರೆ ಮಂಗಳೂರು ಆವರಣದಲ್ಲಿಸಮುದಾಯ ವಾಚನಾಲಯದಲ್ಲಿ ಉದ್ಘಾಟನಾ ಕಾರ್ಯಕ್ರಮ

ಬಹರೈನ್‍ ಸಂಗೀತ ಗಾನ ಸಂಭ್ರಮ-2022

ಅಮ್ಮ ಕಲಾವಿದರು ಬಹರೈನ್ ಅರ್ಪಿಸುವ ಸಂಗೀತ ಗಾನ ಸಂಭ್ರಮ 22 ಕಾರ್ಯಕ್ರಮದ ಮುಹೂರ್ತ ಪೂಜೆ ಹಾಗೂ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭವು ಆಗಸ್ಟ್ 19ರಂದು ಸ್ಥಳೀಯ ಇಂಡಿಯನ್ ಕ್ಲಬ್ ಸಭಾಂಗಣದಲ್ಲಿ ಗಣ್ಯ ಅತಿಥಿಗಳ ಸಮಕ್ಷಮದಲ್ಲಿ ನೆರವೇರಿತು. ಅಮ್ಮ ಕಲಾವಿದರು ಸಂಘಟನೆಯ ಮುಖ್ಯಸ್ಥರಾದ ಮೋಹನದಾಸ್ ರೈ ಎರುಂಬು ಸಾರಥ್ಯದಲ್ಲಿ ನಡೆಯಲಿರುವ ಈ ಸಂಗೀತ ಕಾರ್ಯಕ್ರಮದಲ್ಲಿ

ಕಾರ್ಕಳ : ಚಾಣಕ್ಯ ಕದೀಮರಿಬ್ಬರ ಸೆರೆ

ಒಡವೆ ಕಳ್ಳತನ ಸಹಿತ ವಾಹನಗಳ ಕಳ್ಳತನ ನಡೆಸಿ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸುತ್ತಿದ್ದ ಕದೀಮ ಕಳ್ಳರಿಬ್ಬರನ್ನು ಕಾರ್ಕಳ ಪೊಲೀಸ್ ಉಪಾಧೀಕ್ಷರ ಹಾಗೂ ವೃತ ನಿರೀಕ್ಷಕರ ತಂಡ ಬಂಧಿಸಿದೆ. ಬಂಧಿತರ ಮೇಲೆ ರಾಜ್ಯಾದ್ಯಂತ ಬಹಳಷ್ಟು ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು, ಮೂಲತಃ ಬಜಪೆ ನಿವಾಸಿ ಇದೀಗ ಮೂಳೂರುಎಸ್.ಎಸ್. ರಸ್ತೆಯ ಶ್ರೀ ಸಾಯಿ ಅಪಾರ್ಟ್ಮೆಂಟ್ ನಲ್ಲಿ

ಮೂಡುಬಿದರೆ : ಬೀದಿಯುದ್ದಕ್ಕೂ ಕಟ್ಟಿದ ಮೊಸರ ಕುಡಿಕೆಗಳನ್ನು ಒಡೆದ ಯಕ್ಷಕೃಷ್ಣ

ಮೂಡುಬಿದಿರೆ: ಯಕ್ಷಗಾನ ಶೈಲಿಯ ಕೃಷ್ಣ ಪರಂಪರೆಯ ಮೂಡುಬಿದಿರೆಯ ಶ್ರೀಗೋಪಾಲಕೃಷ್ಣ ದೇವಸ್ಥಾನದ ಮೊಸರು ಕುಡಿಕೆ ಉತ್ಸವವು ಮೂಡುಬಿದಿರೆಯಲ್ಲಿ ಪೇಟೆಯಲ್ಲಿ ಶುಕ್ರವಾರ ನಡೆಯಿತು. ಪೇಟೆಯ ಬೀದಿಯುದ್ದಕ್ಕೂ ನೂರಾರು ಮಡಿಕೆಗಳು ಕಟ್ಟಿ, ಅವುಗಳನ್ನು ಯಕ್ಷಗಾನೀಯ ಶ್ರೀ ಕೃಷ್ಣ ವೇಷಧಾರಿ ಚಂದ್ರಶೇಖರ್ ಮಳಲಿ ಅವರು ಒಡೆಯುವ ಸಂಭ್ರಮಕ್ಕೆ ಊರ ಪರವೂರಿನ ಸಾವಿರಾರು ಮಂದಿ

ಕಟಪಾಡಿ : ಹುಲಿವೇಷ ಹಾಕಿ ಮಾನವೀಯತೆ ಮೆರೆದ ಫ್ರೆಂಡ್ಸ್

ಹಣಕ್ಕಾಗಿ ಯಾವ ಮಟ್ಟಕ್ಕೂ ಇಳಿಯಲು ತಯಾರಿದ್ದ ಈ ಕಾಲಘಟ್ಟದಲ್ಲಿ, ಯಾವುದೋ ಕುಟುಂಬದ ಪರಿಚಯವೇ ಇಲ್ಲದ ಎರಡು ತಿಂಗಳ ಮಗುವಿನ ಚಿಕಿತ್ಸಾ ವೆಚ್ಚ ಭರಿಸುವ ನಿಟ್ಟಿನಲ್ಲಿ ಕಟಪಾಡಿ ಪ್ರೇಂಡ್ಸ್ ಸಂಸ್ಥೆಯ ಸದಸ್ಯರು ಹುಲಿವೇಷ ಹಾಕಿ ಮಾನವೀಯತೆ ಭೂಮಿಯಲ್ಲಿ ಇನ್ನೂ ಸತ್ತಿಲ್ಲ ಎಂಬುದನ್ನು ಸಾಭೀತು ಪಡಿಸಿದ್ದಾರೆ. ಹುಲಿವೇಷ ಎಂದರೆ ಬೇರೆ ವೇಷಗಳಂಥಲ್ಲ…ಇದಕ್ಕೆ ಅದರದ್ದೇ ಆದ

ಪುತ್ತೂರಿನ ವಿವೇಕಾನಂದ ಶಿಶು ಮಂದಿರ : 24ನೇ ವರ್ಷದ ಶ್ರೀಕೃಷ್ಣಲೋಕ

ಪುತ್ತೂರು: ಪುತ್ತೂರಿನ ವಿವೇಕಾನಂದ ಶಿಶು ಮಂದಿರದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಠಮಿ ಸಮಿತಿಯ ವತಿಯಿಂದ ಹಿಂದೂ ಸನಾತನ ಸಂಸ್ಕೃತಿಯ ಪ್ರತಿರೂಪವಾಗಿ ನಡೆಯುವ `ಶ್ರೀಕೃಷ್ಣ ಲೋಕ’ 24ನೇ ವರ್ಷದ ಕಾರ್ಯಕ್ರಮವು ಜರುಗಿತು. ಬೆಳಿಗ್ಗೆ ಮಕ್ಕಳಿಂದ ಪ್ರಾರ್ಥನೆ ನಡೆದ ಬಳಿಕ ಕೃಷ್ಣ, ರಾಧೆಯರ ನೊಂದಾವಣೆಯು ಪ್ರಾರಂಭಗೊಂಡಿತು. ಬಳಿಕ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ

ಮಡಿಕೇರಿಯಲ್ಲಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿರುವುದು ಖಂಡನೀಯ

ನಮ್ಮ ಆಡಳಿತದ ಅವಧಿಯಲ್ಲಿ ಹತ್ಯೆ ನಡೆದಿದೆ ನಿಜ.ಆದರೆ ಅಪರಾಧಿಗಳು ಬಿಜೆಪಿ ಕಡೆಯವರಾಗಿದ್ದರು. ಕಾಂಗ್ರೆಸ್ ಸಾಮರಸ್ಯವನ್ನು ಬಯಸುವ ಪಕ್ಷವಾಗಿದೆ. ಹಿಂಸೆಯನ್ನು ಪ್ರಚೋದಿಸುವ ಪಕ್ಷ ಅಲ್ಲ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಮತೀಯವಾದಿಗಳು ಪರಾಕಾಷ್ಠೆಯಿಂದ ಮೆರೆಯುತ್ತಿದ್ದಾರೆ.

ಮುಲ್ಕಿ ಜಯಾನಂದ ದೇವಾಡಿಗ ಅವರಿಗೆ ಜಿಲ್ಲಾ ಮಟ್ಟದ ಡಿ. ದೇವರಾಜ ಅರಸು ಪ್ರಶಸ್ತಿ

ಮಂಗಳೂರು, ಆ.19(ಕ.ವಾ):- ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸು ಅವರ 107 ನೇ ಜನ್ಮದಿನಾಚರಣೆ ಸಂದರ್ಭದಲ್ಲಿ 2022-23ನೇ ಸಾಲಿನ ಡಿ.ದೇವರಾಜ ಅರಸು ಜಿಲ್ಲಾ ಮಟ್ಟದ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಜಯಾನಂದ ದೇವಾಡಿಗ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಮುಲ್ಕಿಯ ಜಯಾನಂದ ದೇವಾಡಿಗರು ಡಿ. ದೇವರಾಜ ಅರಸು ಅವರ ಚಿಂತನೆ,

ರಸ್ತೆ ಸ್ವಚ್ಛತೆ ಮತ್ತು ರಸ್ತೆಗಳ ಗುಂಡಿಗಳ ದುರಸ್ತಿಗೆ ಆಗ್ರಹ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಸ್ವಚ್ಚತೆ ಮತ್ತು ರಸ್ತೆಗಳ ಗುಂಡಿಗಳ ದುರಸ್ತಿ ಪಡಿಸುವಂತೆ , ಹೀಗೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು, ದಕ್ಷಿಣ ಕನ್ನಡ ಜಿಲ್ಲಾ ಆಮ್ ಆದ್ಮಿ ಪಾರ್ಟಿ ವತಿಯಿಂದ ಮಂಗಳೂರು ಮಹಾನಗರಪಾಲಿಕೆ ಆಯುಕ್ತರಿಗೆ ಲಿಖಿತವಾಗಿ ದೂರು ನೀಡಲಾಯಿತು. ನಗರದ ಪಾಲಿಕೆ ಕಚೇರಿಯಲ್ಲಿ ಎಎಪಿ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ಅವರ