Home 2022 October (Page 3)

ಬಿಜೆಪಿ ಸಂಸದ, ಶಾಸಕರುಗಳ ಬಣ್ಣ ಟೋಲ್ ಗೇಟ್ ಮುಂಭಾಗ ಕರಗುತ್ತಿದೆ. ವೈ ರಾಘವೇಂದ್ರ ರಾವ್

ಸುರತ್ಕಲ್ ಅಕ್ರಮ ಟೋಲ್ ಗೇಟ್ ಕರಾವಳಿ ಜಿಲ್ಲೆಗಳಲ್ಲಿ ನಡೆಯುತ್ತಿರುವ ಜನವಿರೋಧಿ ಆಡಳಿತದ ಸಂಕೇತವಾಗಿ ರಾರಾಜಿಸುತ್ತಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜನರ ಒಕ್ಕೊರಲ ಆಗ್ರಹದ ಹೊರತಾಗಿಯೂ ಟೋಲ್ ಕೇಂದ್ರ ಮುಚ್ಚದಿರುವುದರ ಹಿಂದೆ ಭ್ರಷ್ಟಾಚಾರ, ಕಮೀಷನ್, ಖಾಸಗಿ ಕಂಪೆನಿಗಳ ಹಿತಾಸಕ್ತಿಗಳು ಕೆಲಸ ಮಾಡುತ್ತಿರುವುದು, ಬಿಜೆಪಿ ಸರಕಾರ ಅಂತಹ ನೀತಿಗಳ ಪರ

ಕಂಚಿನಡ್ಕದಲ್ಲಿ ಪ್ರಪ್ರಥಮ ಬಾರಿಗೆ ಸಾಮೂಹಿಕ ಗೋಪೂಜೆ, ಗೌರವಾರ್ಪಣೆ

ದೀಪಾವಳಿಯ ಪ್ರಯುಕ್ತ ಕಂಚಿನಡ್ಕದ ಹಿಂದೂ ಬಾಂಧವರ ನೇತೃತ್ವದಲ್ಲಿ ಸಾಮೂಹಿಕ ಗೋಪೂಜೆ,ಗೋಸಾಕುವ ಕುಟುಂಬಕ್ಕೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಭಾಜಪ ಉಪಾಧ್ಯಕ್ಷ ಶ್ರೀಪ್ರಕಾಶ್ ಶೆಟ್ಟಿಯವರು ಭಾರತಮಾತೆ ಪೂಜೆ ನಡೆಸಿ ಚಾಲನೆ ನೀಡಿದರು. ಮಾತೆಯರಿಂದ ಗೋಪೂಜೆ ನಡೆಸಿ ಪ್ರತಿ ಗೋಸಾಕುವ ಕುಟುಂಬಕ್ಕೆ ಗೌರವಪೂರ್ವಕವಾಗಿ ಸನ್ಮಾನಿಸಿ,

ಸೂಟರ್ ಪೇಟೆ ಶ್ರೀ ಬಬ್ಬುಸ್ವಾಮಿ ಕ್ಷೇತ್ರದಲ್ಲಿ ಪಾರಂಪರಿಕ ಬಲೀಂದ್ರ ಪೂಜೆ

ಅತೀ ಪುರಾತನ ಬಬ್ಬುಸ್ವಾಮಿ ಕ್ಷೇತ್ರಗಳಲ್ಲಿ ಒಂದಾಗಿರುವ ಸೂಟರ್ ಪೇಟೆ ಶ್ರೀ ಕೋರ್ದಬ್ಬು ದೇವಸ್ಥಾನದಲ್ಲಿ ಬಲೀಂದ್ರ ಪೂಜೆಯನ್ನು ವಿಶಿಷ್ಟ ರೀತಿಯಲ್ಲಿ ನಡೆಸಲಾಯಿತು. ಅಂಧಕಾರವನ್ನು ಕಳೆಯುವ ದೀಪಾವಳಿ ಹಬ್ಬದ ಮೂರನೇ ದಿನವೇ ಬಲಿಪಾಡ್ಯಮಿ. ಅಂದು ದಾನಶೂರ ಬಲೀಂದ್ರನ ಪೂಜೆಯನ್ನು ದೈವಸ್ಥಾನಗಳಲ್ಲಿ ಭಕ್ತಿ ಶ್ರದ್ಧೆಯಿಂದ ಆಚರಿಸಲಾಗುತ್ತದೆ. ಸೂಟರ್ ಪೇಟೆ ಶ್ರೀ

ಸುರತ್ಕಲ್ ಜಂಕ್ಷನ್‍ಗೆ ವೀರ ಸಾವರ್ಕರ್ ಹೆಸರಿಡುವ ಬಗ್ಗೆ ಪ್ರಸ್ತಾಪ :ಗದ್ದಲದ ಗೂಡಾದ ಪಾಲಿಕೆ ಸಭೆ

ಸುರತ್ಕಲ್ ಜಂಕ್ಷನ್‍ಗೆ ವೀರ ಸಾವರ್ಕರ್ ಹೆಸರು ಇಡುವ ಬಗ್ಗೆ ಬಿಜೆಪಿ ಸದಸ್ಯರು ಪಾಲಿಕೆ ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪ ಮಾಡಿದ್ದು ಇದರಿಂದಾಗಿ ಸಭೆಯಲ್ಲಿ ಗದ್ದಲ ಉಂಟಾಗಿ ಕೆಲ ಕಾಲ ಸಭೆ ಮುಂದೂಡಿಕೆಯಾದ ಘಟನೆ ನಡೆಯಿತು. ಪಾಲಿಕೆಯ ಸಭೆ ಸಾಮಾನ್ಯ ಸಭೆಯಲ್ಲಿ ಸುರತ್ಕಲ್ ಜಂಕ್ಷನ್‍ಗೆ ವೀರ ಸಾವರ್ಕರ್ ಹೆಸರು ಇಡಬೇಕೆಂದು ಪ್ರಸ್ತಾಪ ಮಾಡಿದ್ದರು.

ಸುರತ್ಕಲ್ ಅಕ್ರಮ ಟೋಲ್‍ಗೇಟ್ ವಿರುದ್ಧ ಹಗಲು-ರಾತ್ರಿ ಧರಣಿ : ಸಾಥ್ ನೀಡಿದ ಅಭಯಚಂದ್ರ ಜೈನ್

ಸುರತ್ಕಲ್ ಟೋಲ್ ಗೇಟ್ ಹೋರಾಟ ಸಮಿತಿ ಮತ್ತು ಸಮಾನ ಮನಸ್ಕ ಸಂಘಟನೆಗಳು ಹಮ್ಮಿಕೊಂಡಿರುವ ಆಹೋರಾತ್ರಿ ಧರಣಿಯ ಪ್ರಥಮ ದಿನದ ರಾತ್ರಿಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್ ಹೋರಾಟಗಾರರಿಗೆ ಸಾಥ್ ನೀಡಿದರು. ಧರಣಿಯ ಸ್ಥಳಕ್ಕೆ ರಾತ್ರಿ 9 ಗಂಡೆಗೆ ಬಂದ ಜೈನ್ ಅವರು, ಒಂದು ಚಾಪೆ ಹಾಗೂ ಸೊಳ್ಳೆಗಳಿಂದ ರಕ್ಷಣೆಗೆ ಒಂದು ಹೊದಿಕೆಯೊಂದಿಗೆ ಬಂದಿರುವುದು ವಿಶೇಷವಾಗಿತ್ತು. ಈ ವೇಳೆ

ಬೈಂದೂರಿಗೆ ಸಿಎಂ ಬೊಮ್ಮಾಯಿ ಭೇಟಿ ಹಿನ್ನೆಲೆ : ಜಿಲ್ಲಾಧಿಕಾರಿ ಕೂರ್ಮರಾವ್ ಅವರಿಂದ ಸ್ಥಳ ಪರಿಶೀಲನೆ

ಬೈಂದೂರು: ಉಡುಪಿ ಜಿಲ್ಲೆ ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನ.7ರಂದು ಬೈಂದೂರಿಗೆ ಆಗಮಿಸಲಿದ್ದು, ಅದರ ಪೂರ್ವಭಾವಿ ತಯಾರಿ, ಇಂದಿನಿಂದಲೇ ಕಾರ್ಯಾಚರಣೆ ಪ್ರಾರಂಭಗೊಂಡಿದ್ದು, ಸಭೆ ನಡೆಯುವ ಸ್ಥಳ ಜಿಲ್ಲಾಧಿಕಾರಿ ಕೂರ್ಮಾ ರಾವ್ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದರು, ಸಿಎಂ ಭೇಟಿ ನೀಡುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಎಲ್ಲಾ

ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ‘ನನ್ನ ನಾಡು ನನ್ನ ಹಾಡು’ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಇಂಧನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮವು ಕರಾವಳಿಯ ವಿವಿಧ ಭಾಗಗಳಲ್ಲಿ ಅತ್ಯುತ್ತಮವಾಗಿ ನಡೆದಿದೆ. ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೋಟಿ ಕಂಠ ಗಾಯನ ‘ನನ್ನ

ಜೈನಕಾಶಿಗೆ ಆಗಮಿಸಿದ ಕೆಂಪೇಗೌಡ ರಥಯಾತ್ರೆ

ಮೂಡುಬಿದಿರೆ: ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಪ್ರಗತಿ ಪ್ರತಿಮೆ ಎಂದು ನಾಮಕರಣ ಮಾಡಲು ರಾಜ್ಯದೆಲ್ಲೆಡೆಯಲ್ಲಿ ಪವಿತ್ರ ಮಣ್ಣು ಮತ್ತು ಜಲ ಸಂಗ್ರಹಣೆ ವಿಶಿಷ್ಟ ಅಭಿಯಾನವನ್ನು “ಬನ್ನಿ ನಾಡ ಕಟ್ಟೋಣ” ಎಂಬ ಘೋಷ ವಾಕ್ಯದೊಂದಿಗೆ 15 ದಿನಗಳ ವರೆಗೆ ಹಮ್ಮಿಕೊಂಡ ರಥಯಾತ್ರೆಯು ಜೈನಕಾಶಿ ಮೂಡುಬಿದಿರೆಗೆ

ಮೂಡುಬಿದರೆ ಸಾವಿರ ಕಂಬದ ಬಸದಿಯಲ್ಲಿ ಕೋಟಿ ಕಂಠ ಗಾಯನ

ಮೂಡುಬಿದಿರೆ: ದ.ಕ ಜಿಲ್ಲಾಡಳಿತ ವತಿಯಿಂದ ತಾಲೂಕು ಶಿಕ್ಷಣ ಇಲಾಖೆ ಮೂಡುಬಿದಿರೆ,ಮೂಡುಬಿದಿರೆ ಪುರಸಭೆ ಹಾಗೂ ತಾಲೂಕು ತಹಶೀಲ್ದಾರ್ ಇವುಗಳ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕೋಟಿಕಂಠ ಗಾಯನವು ಜೈನ್ ಪೇಟೆಯ ಸಾವಿರ ಕಂಬದ ಬಸದಿಯಲ್ಲಿ ನಡೆಯಿತು. ನಂತರ ಆರ್ಶೀವಾಚಿಸಿ ಮಾತನಾಡಿದ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಕನ್ನಡವನ್ನು ಭಾಷವಾರು

ವರಾಹ ರೂಪಂ ಹಾಡಿಗೆ ತಡೆಯಾಜ್ಞೆ

ಬೆಂಗಳೂರು: ಕಾಂತಾರ ಸಿನಿಮಾ ಮಲಯಾಳಂ, ತೆಲುಗು, ತಮಿಳು, ಹಿಂದಿ ಸೇರಿದಂತೆ ಎಲ್ಲಾ ಭಾಷೆಯ ಬಾಕ್ಸ್‌ ಆಫೀಸ್‌ನಲ್ಲಿ ಸೌಂಡ್ ಮಾಡುತ್ತಿದೆ. ಈ ನಡುವೆ ಕಾಂತಾರ ಸಿನಿಮಾದ ಜನಪ್ರಿಯ ವರಾಹ ರೂಪಂ ಹಾಡು ವಿವಾದ ಆಗಿತ್ತು. ಇದೀಗ ಈ ಹಾಡು ಬಳಸದಂತೆ ಕೋಯಿಕ್ಕೋಡ್ ಕೋರ್ಟ್ ಸೂಚನೆ ನೀಡಿರೋದು ಚಿತ್ರತಂಡಕ್ಕೆ ಬಿಗ್ ಶಾಕ್ ಕೊಟ್ಟಿದೆ. ಕಾಂತಾರ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್