Home 2022 November (Page 8)

ಗೃಹರಕ್ಷಕ ದಳ ಸಿಬ್ಬಂದಿಗಳ ಕುಂದು ಕೊರತೆಗಳ ಬಗ್ಗೆ ಮನವರಿಕೆ : ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿರುವ ಗೃಹ ಸಚಿವರು

ಸರ್ಕಾರಿ ಗೌರವಧನಾಧಾರಿತ ಕ್ಷೇಮಭಿವೃದ್ಧಿ ಮಹಾಸಂಘದ ಪದಾಧಿಕಾರಿಗಳು ಗೃಹ ಸಚಿವರಾದ ಅರಗ ಜ್ಞಾನೇಂದ್ರ ರವರನ್ನು ಭೇಟಿ ಮಾಡಿ ಗೃಹರಕ್ಷಕ ದಳ ಸಿಬ್ಬಂದಿಗಳ ಸಮಸ್ಯೆ ಮತ್ತು ಕುಂದು ಕೊರತೆಗಳ ಬಗ್ಗೆ ಸಚಿವರಿಗೆ ತಿಳಿಸಿ, ಮುಂಬರುವ ಅಧಿವೇಶನದಲ್ಲಿ ಸಿಬ್ಬಂದಿಗಳ ಕೊರತೆಗಳನ್ನು ಚರ್ಚಿಸಿ ನ್ಯಾಯಯುಕ್ತವಾದ ಬೇಡಿಕೆಗಳನ್ನು ಈಡೇರಿಸುವಂತೆ ವಿನಂತಿಸಿಕೊಂಡಿದ್ದಾರೆ. ಮನವಿ

ವಿಟ್ಲ: ಅಕ್ರಮ ಗೋ ಸಾಗಾಟ ಪತ್ತೆ

ವಿಟ್ಲ: ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸ್ರು ಕಾರ್ಯಾಚರಣೆ ನಡೆಸಿ ವಾಹನ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಬೆಳ್ಳಂಬೆಳಗ್ಗೆ ವಿಟ್ಲ ಸಮೀಪದ ಬೋಳಂತೂರಿನಲ್ಲಿ ನಡೆದಿದೆ. ರೌಂಡ್ಸ್ ಕರ್ತವ್ಯದಲ್ಲಿದ್ದ ವಿಟ್ಲ ಎಸ್‍ಐ ಸಂದೀಪ್ ಕುಮಾರ್ ಶೆಟ್ಟಿ ಮತ್ತು ಸಿಬ್ಬಂದಿಗಳು ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ವಶಕ್ಕೆ ಪಡೆದು, ಇಬ್ಬರು

ಮೂಡುಬಿದಿರೆ: ಕೊಡ್ಯಡ್ಕ ಜಯರಾಮ ಹೆಗ್ಡೆ ನಿಧನ

ಅನಿವಾಸಿ ಉದ್ಯಮಿ, ಹೊಸನಾಡು ಕೊಡ್ಯಡ್ಕ ಶ್ರೀದೇವೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಸ್ಥಾಪಕ ಮತ್ತು ಆಡಳಿತ ಮೊಕ್ತೇಸರ ಡಾ. ಕೊಡ್ಯಡ್ಕ ಜಯರಾಮ ಹೆಗ್ಡೆ (73) ಅನಾರೋಗ್ಯದಿಂದ ನ.23, ಮಂಗಳವಾರ ಮಧ್ಯಾಹ್ನ ಮೂಡುಬಿದಿರೆ ಆಳ್ವಾಸ್ ಹೆಲ್ತ್ ಸೆಂಟರ್ ನಲ್ಲಿ ನಿಧನ ಹೊಂದಿದರು. ಪತ್ನಿ, ಪುತ್ರ , ಪುತ್ರಿಯನ್ನು ಅವರು ಅಗಲಿದ್ದಾರೆ. 23ನೇ ವಯಸ್ಸಿನಲ್ಲಿ ಮಸ್ಕತ್ ಗೆ ತೆರಳಿ

ಮೈಸೂರು ದಸರಾ ಆನೆ ಗೋಪಾಲಸ್ವಾಮಿ ಇನ್ನಿಲ್ಲ

ದಸರಾದ ಆನೆಗಳಲ್ಲಿ ಒಂದಾದ 39 ವರ್ಷದ ಗೋಪಾಲಸ್ವಾಮಿ ಬುಧವಾರ ಕೊನೆಯುಸಿರು ಎಳೆದಿದೆ.ನಾಗರಹೊಳೆ ಮತ್ತಿಗೋಡು ಆನೆ ಶಿಬಿರದಲ್ಲಿ ಗೋಪಾಲಸ್ವಾಮಿ ಆನೆ ಮಂಗಳವಾರ ಕಾಡಿಗೆ ಮೇಯಲು ಹೋಗಿದ್ದಾಗ ಕಾಡಾನೆಗಳ ದಾಳಿಗೆ ಸಿಲುಕಿತ್ತು. 40ರ ಆಸುಪಾಸು ವಯಸ್ಸಿನ ಆಕರ್ಷಕ ಮೈಕಟ್ಟು ಹೊಂದಿದ್ದ ಗೋಪಾಲಸ್ವಾಮಿ ಅಪಾರ ಅಭಿಮಾನಿಗಳನ್ನು ಹೊಂದಿತ್ತು. ದಸರಾ ಗಜಪಡೆಯಲ್ಲಿ ಅತಿ ಎತ್ತರವಾದ

ಧರ್ಮಸ್ಥಳದಲ್ಲಿ ಭೀಕರ ರಸ್ತೆ ಅಪಘಾತ, ಓರ್ವ ಸಾವು ; ಏಳು ಜನರಿಗೆ ಗಂಭೀರ ಗಾಯ

ಬೆಳ್ತಂಗಡಿ : ಭೀಕರ ರಸ್ತೆ ಅಪಘಾತ ನಡೆದಿದ್ದು ಇದರಲ್ಲಿ ಓರ್ವ ಸಾವನ್ನಪ್ಪಿದ್ದು ,ಏಳು ಜನರಿಗೆ ಗಂಭೀರ ಗಾಯಗೊಂಡು ಘಟನೆ ಧರ್ಮಸ್ಥಳದ ಕುದ್ರಾಯದಲ್ಲಿ ಇಂದು ಸಂಜೆ ನಡೆದಿದೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸುತ್ತಿದ್ದ ಮಂಡ್ಯ ಜಿಲ್ಲೆಯ ಹತ್ತು ಮಂದಿಯ ಕುಟುಂಬ ನಿಡ್ಲೆ ಗ್ರಾಮದ ಕುದ್ರಾಯ ಎಂಬಲ್ಲಿ ಬೊಲೇರೋ ವಾಹನವನ್ನು ರಸ್ತೆಯ ಬಲಕ್ಕೆ ಪಾರ್ಕ್ ಮಾಡಿ ನಿಲ್ಲಿಸಿ

ಬೆಳ್ತಂಗಡಿ : ಬೈಕ್ ಅಪಘಾತದಲ್ಲಿ ಯುವಕ ಮೃತ್ಯು

ಬೆಳ್ತಂಗಡಿ : ಬೈಕ್ ಸ್ಕಿಡ್ ಆಗಿ ಕಲ್ಲಿನ‌ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮುಂಡಾಜೆ ಗ್ರಾಮದ ದುರ್ಗಾಪರಮೇಶ್ವರೀ ದೇವಸ್ಥಾನದ ಪಕ್ಕದ ತಿರುವು ರಸ್ತೆಯಲ್ಲಿ ನಡೆದಿದೆ.ಅಣಿಯೂರಿನ ನೆರಿಯದ ಪ್ರದೀಪ ಗೌಡ (22) ಮೃತ ಯುವಕ.ಅಣಿಯೂರಿನ ನೋಣಯ್ಯ‌ ಗೌಡ ಎಂಬವರ ಪುತ್ರರಾಗಿರುವ ಪ್ರದೀಪ ಅವರು ಸಂಬಂಧಿಗಳ ಮನೆಯಲ್ಲಿ ಇರುವ ಶುಭ ಕಾರ್ಯದ ನಿಮಿತ್ತ

ಮಂಗಳೂರು: ಗ್ಯಾಸ್‌ ಸಿಲಿಂಡರ್‌ ಕಳವು ಆರೋಪಿಗೆ ಜೈಲು ಶಿಕ್ಷೆ

ಬಿಜೈ ಕೈಬಟ್ಟಲಿನ ರೇಗೋ ಕಾಂಪೌಂಡ್‌ನ‌ ಮನೆಯೊಂದರಿಂದ ಗ್ಯಾಸ್‌ ಸಿಲಿಂಡರ್‌ ಕಳವು ಮಾಡಿದ ಪ್ರಕರಣದಲ್ಲಿ ಅಣ್ಣು ಪೂಜಾರಿ ವಿರುದ್ಧ ಆರೋಪ ಸಾಬೀತಾಗಿದ್ದು, 2ನೇ ಸಿ.ಜೆ.ಎಂ. ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಎರಡನೇ ಆರೋಪಿ ಗಂಗಯ್ಯ ನೀಲಕಂಠಯ್ಯ ಮುತ್ತಯ್ಯನ ಮಠ ಯಾನೇ ಸ್ವಾಮಿಯನ್ನು ಸಾಕ್ಷ್ಯಾಧಾರ ಕೊರತೆಯಿಂದ ನ್ಯಾಯಾಲಯವು ಬಿಡುಗಡೆಗೊಳಿಸಿದೆ.

ಲವ್ ಜಿಹಾದ್ ಗೆ ನೀವು  ಬಲಿಯಾಗಬೇಡಿ ಕಟೌಟ್

ಪುತ್ತೂರು; ಹಿಂದೂ ಹುಡುಗಿ ಶ್ರದ್ಧಾಳ ಹತ್ಯೆ. ದೇಹವನ್ನು 35 ತುಂಡು ಮಾಡಿದರು. ಕಾರಣ ಲವ್ ಜಿಹಾದ್. ಇದಕ್ಕೆ ನೀವು ಬಲಿಯಾಗಬೇಡಿ’ ಕಟೌಟ್ ಅನ್ನು ವೈದ್ಯ, ಹಿಂದುತ್ವ ಪರ ಸಂಘಟನೆಗಳಲ್ಲಿ ಸಕ್ರಿಯರಾಗಿರುವ ಡಾ.ಎಂ.ಕೆ. ಪ್ರಸಾದ್ ಅವರ ಹೆಸರಿನಲ್ಲಿ ಅಳವಡಿಸಲಾಗಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಸಿರುವ ಎಂ. ಕೆ. ಪ್ರಸಾದ್’ ನಾನು ಯಾವುದೇ ಧರ್ಮ ಅಥವಾ ಸಮುದಾಯದ ವಿರುದ್ಧ

ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಆರೋಗ್ಯ ವಿಚಾರಿಸಿದ ಗೃಹ ಸಚಿವ

ಮಂಗಳೂರಿಗೆ ಭೇಟಿ ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಸಂಸದ,ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿ,ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್,ಕಾರ್ಪೋರೇಟರ್ ಮನೋಹರ್ ಕದ್ರಿ,ಬಿಜೆಪಿ‌ ಮುಖಂಡರುಗಳಾದ ಸಂತೋಷ್ ಕುಮಾರ್ ಬೋಳಿಯಾರ್, ಜಗದೀಶ ಶೇಣವ,ಚರಿತ್

ಜಾತ್ಯಾತೀತ ಪಕ್ಷಗಳ ಜಂಟಿ ವೇದಿಕೆಯ ನಿಯೋಗ ಜಿಲ್ಲಾಧಿಕಾರಿಗಳ ಭೇಟಿ

ಸುರತ್ಕಲ್ ಅಕ್ರಮ ಟೋಲ್ ಗೇಟ್ ಮುಚ್ಚಲು ಆಗ್ರಹಿಸಿ ನಡೆಯುತ್ತಿರುವ ಹಗಲು ರಾತ್ರಿ ಧರಣಿ ಒಂದು ತಿಂಗಳು ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಹಾಗೂ ಟೋಲ್ ಗೇಟ್ ತೆರವು ಆದ್ಯಾದೇಶ ಹೊರಟು ಹತ್ತು ದಿನಗಳು ದಾಟಿದರೂ ಟೋಲ್ ಸಂಗ್ರಹ ಸ್ಥಗಿತಗೊಳಿಸದಿರುವ ಕುರಿತು ಚರ್ಚಿಸಲು ದ.ಕ. ಜಿಲ್ಲಾ ಜಾತ್ಯಾತೀತ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆಯ ನಿಯೋಗ ದ‌.ಕ.