Home 2022 December (Page 4)

ಸುರತ್ಕಲ್-ನಂತೂರು ಟೋಲ್ ಮುಕ್ತ ರಸ್ತೆಯಾಗಿ ಘೋಷಿಸಲು ಒತ್ತಾಯ : ಬನ್ನಂಜೆಯಲ್ಲಿ ಸಾಮೂಹಿಕ ಜನಾಗ್ರಹ ಧರಣಿ

ಸುರತ್ಕಲ್ ಅಕ್ರಮ ಟೋಲ್ ಸುಂಕ ಹೆಜಮಾಡಿ ಟೋಲ್‍ಗೇಟ್‍ನಲ್ಲಿ ಸಂಗ್ರಹಿಸುವ ಹೆದ್ದಾರಿ ಪ್ರಾಧಿಕಾರದ ವಿಲೀನ ಆದ್ಯಾದೇಶ ಶಾಶ್ವತವಾಗಿ ಹಿಂಪಡೆಯಲು ಆಗ್ರಹಿಸಿ ಸುರತ್ಕಲ್ ನಂತೂರು ಹೆದ್ದಾರಿಯನ್ನು ಟೋಲ್ ಮುಕ್ತ ರಸ್ತೆಯಾಗಿ ಘೋಷಿಸಲು ಒತ್ತಾಯಿಸಿ ಸಾಮೂಹಿಕ ಜನಾಗ್ರಹ ಧರಣಿ ಬನ್ನಂಜೆಯಲ್ಲಿ ನಡೆಯಿತು. ಟೋಲ್‍ಗೇಟ್ ವಿರೋಧಿ ಹೋರಾಟ ಸಮಿತಿ ಮತ್ತು

ಭಜನೆ ಹಾಗೂ ಭಜಕರ ವಿರುದ್ಧ ಫೇಸ್ಬುಕ್ ಪೋಸ್ಟ್ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಸುಳ್ಯ ಪ್ರಖಂಡ ಇದರ ವತಿಯಿಂದ ಪ್ರತಿಭಟನೆ

ಸುಳ್ಯ . ಸರಕಾರದ ಅರಣ್ಯ ಇಲಾಖೆ ಯಲ್ಲಿ ಇದ್ದುಕೊಂಡು ಭಜನೆ ಮತ್ತು ಬಜಕರ ಬಗ್ಗೆ ಹಿಂದೂ ದೇವರ ಬಗ್ಗೆ ನಿಂದನೆಯ ಪೋಸ್ಟುಗಳನ್ನು ತನ್ನ ಫೇಸ್ಬುಕ್ ನಲ್ಲಿ ಹರಿಯ ಬಿಟ್ಟು ಹಿಂದುಗಳ ಭಾವನೆಗೆ ದಕ್ಕೆ ತಂದಿರುವ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ವಿರುದ್ಧ ಪ್ರಕರಣ ದಾಖಲಾಗಿದ್ದರು ಕೂಡ ಬಂಧನ ಮಾಡದ ಅಧಿಕಾರಿಗಳ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಇಂದು

ಜ.5ರಂದು ಪದವು ಬಂಟರ ಭವನಕ್ಕೆ ಶಿಲಾನ್ಯಾಸ.

ಬಂಟ್ಚಾಳ: ತಾಲೂಕಿನ ವಾಮದಪದವು ವಲಯ ಬಂಟರ ಸಂಘದ ವತಿಯಿಂದ ಆಲದಪದವಿನ ನಿವೇಶನದಲ್ಲಿ ನಿರ್ಮಿಸಲು ಉದ್ಧೇಶಿಸಿರುವ “ಪದವು ಬಂಟರ ಭವನ” ದ ಶಿಲಾನ್ಯಾಸ ಸಮಾರಂಭವು ಜ.5ರಂದು ನಡೆಯಲಿದೆ ಎಂದು ಸಂಘದ ಗೌರವ ಸಲಹೆಗಾರ ಅಶೋಕ ಪಕ್ಕಳ ಶ್ರೀ ಸನ್ನಿಧಿಗುತ್ತು ತಿಳಿಸಿದ್ದಾರೆ. ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು

ಜಾಂಬೂರಿ ಸ್ಟಾಲ್‍ಗಳು ಖಾಲಿ ಖಾಲಿ.. ಬಿಕೋ ಎನ್ನುತ್ತಿರುವ ವಿದ್ಯಾಗಿರಿ

ಮೂಡುಬಿದಿರೆ: ಸ್ಕೌಟ್ಸ್ ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಂಬೂರಿ ಕಾರ್ಯಕ್ರಮದಿಂದ ಕಳೆದ ಏಳು ದಿನಗಳಿಂದ ಜನಜಂಗುಳಿಯಿಂದ ತುಂಬಿಕೊಂಡಿದ್ದ ವಿದ್ಯಾಗಿರಿ ಜನ ಸಂದಣಿ ಇಲ್ಲದೆ ಬಿಕೋ ಎನ್ನುತ್ತಿರುವ ದೃಶ್ಯ ಕಂಡು ಬಂತು. ವಿದ್ಯಾಗಿರಿಯ ಆಳ್ವಾಸ್ ಕ್ಯಾಂಪಸ್ ನಲ್ಲಿ ಹಾಕಲಾಗಿದ್ದ ವಿವಿಧ ಸ್ಟಾಲ್ ಗಳು, ಕೃಷಿ ಮೇಳದ ವೇದಿಕೆ, ಕೃಷಿಸಿರಿ, ಪ್ರದರ್ಶನಕ್ಕಿಟ್ಟಿದ್ದ

ಗಣರಾಜ್ಯೋತ್ಸವ ಫೆರೇಡಲ್ಲಿ ಭಾಗವಹಿಸಲು ಪುತ್ತೂರಿನ ಡಾ| ವಜೀದಾಬಾನು ಆಯ್ಕೆ

2023 ನೇ ಸಾಲಿನಲ್ಲಿ ದೆಹಲಿಯಲ್ಲಿ ನಡೆಯಲಿರುವ ಭಾರತ ಗಣರಾಜ್ಯೋತ್ಸವ ಫೆರೇಡ್ ನಲ್ಲಿ ಭಾಗವಹಿಸಲು ಪುತ್ತೂರಿನ ಡಾ| ವಜಿದಾಬಾನು ಆಯ್ಕೆ. ಎನ್ ಎಸ್ ಎಸ್ ವತಿಯಿಂದ ನಡೆದ ದಕ್ಷಿಣ ಪ್ರಾಂತೀಯ ಪ್ರೀ ಆರ್ ಡಿ ತರಬೇತಿ ಶಿಬಿರದಲ್ಲಿ ಕರ್ನಾಟಕದಿಂದ ಆಯ್ಕೆಗೊಂಡಿರುವ ಏಳು ಮಂದಿಯಲ್ಲಿ ಇವರು ಒಬ್ಬರಾಗಿದ್ದಾರೆ. ಇವರು ಪುತ್ತೂರು ಅಂಬಿಕಾ ಪದವಿಪೂರ್ವ ಕಾಲೇಜಿನ ಹಿರಿಯ

ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸುರತ್ಕಲ್ ಯುವಕ ಮೃತ್ಯು

ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸುರತ್ಕಲ್ ತಡಂಬೈಲ್ ನ ಯುವಕನೋರ್ವ ಮೃತಪಟ್ಟಿರುವ ಘಟನೆ ವರದಿಯಾಗಿದೆ.ಸೌದಿ ಅರೆಬಿಯಾದ ಅಲ್ಅಸಾ ಎಂಬಲ್ಲಿ ಕಾರು ಮತ್ತು ಲಾರಿಯ ನಡುವೆ ಭೀಕರ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಫಾಝಿಲ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.ಫಾಝಿಲ್ ಅವರಿಗೆ

ಸಿಪಿಎಂ ಪಕ್ಷದ ಹಿರಿಯ ಸದಸ್ಯ, ಕಮ್ಯುನಿಸ್ಟ್ ಚಳವಳಿಯ ಹಿರಿಯ ಮುಖಂಡ ಕಾಂ. ಚಂದು ಭಂಡಾರಿ(80) ನಿಧನ

ಎಳೆಯ ಪ್ರಾಯದಲ್ಲೇ ಎಡಪಂಥೀಯ ವಿಚಾರಧಾರೆಗೆ ಆಕರ್ಷಿತರಾದ ಚಂದು ಭಂಡಾರಿ ಆ ಕಾಲದಲ್ಲಿ ನಡೆಯುತ್ತಿದ್ದ ರೈತರ ಹೋರಾಟದಲ್ಲಿ ಭಾಗವಹಿಸುವ ಮೂಲಕ ರೈತಾಪಿ ಜನತೆಯ ನಾಯಕರಾಗಿ ಬೆಳೆದರು. ಜೊತೆಗೆ ಹಂಚು ಕಾರ್ಮಿಕರಾಗಿ ದುಡಿಯುವ ಮೂಲಕ ಹಂಚು ಕಾರ್ಮಿಕರ ಸಮರಶೀಲ ಹೋರಾಟಗಳಲ್ಲಿ ಭಾಗವಹಿಸಿ ಕಾರ್ಮಿಕ ನಾಯಕರಾದರು. ಬಜಾಲ್ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಅವರು ಪಕ್ಷದ ಪತ್ರಿಕೆ

ಕಾಶಿಯಲ್ಲಿ ಜೈ ಸೀತಾ ರಾಮ್ ಧ್ವನಿಸುರುಳಿ ಬಿಡುಗಡೆ

ಸತ್ಯ ಶಾಂತ ಪ್ರತಿಷ್ಠಾನ (ರಿ) ಅರ್ಪಿಸುವ ಶ್ರೀಮತಿ ಶಾಂತಾ ಕುಂಟಿನಿ ಇವರ ಸಾಹಿತ್ಯ ರಚನೆ ಹಾಗೂ ನಿರ್ಮಾಣದ ಅದೇ ರೀತಿ ಸಂಗೀತ ಹಾಗೂ ಗಾಯನ ದ.ಕ ಜಿಲ್ಲೆಯ ಹೆಸರಾಂತ ಗಾಯಕರಾದ ಶ್ರೀ ಅರ್ವಿಂದ್ ವಿವೇಕ್ ಹಾಗೂ ಪ್ರತೀಕ್ಷಾ ಸೌಜನ್ಯ ಗೌಡ, ನಿತಿನ್ ಇವರ ಧ್ವನಿಯಲ್ಲಿ ಮೂಡಿ ಬಂದಿರುವ ಯೂಟ್ಯೂಬ್ ಹಾಡು “ಜೈ ಸೀತಾ ರಾಮ್ ಹಾಡಿನ ಬಿಡುಗಡೆ ಕಾರ್ಯಕ್ರಮವು ದಿನಾಂಕ

ಕುಕ್ಕೆ ಸುಬ್ರಹ್ಮಣ್ಯ: ಭಕ್ತಿ ಸಂಭ್ರಮದ ಕಿರುಷಷ್ಠಿ ರಥೋತ್ಸವ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಪುಷ್ಯ ಶುದ್ದ ಕಿರುಷಷ್ಠಿಯ ದಿನವಾದ ಬುಧವಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರ ಕಿರುಷಷ್ಠಿ ರಥೋತ್ಸವವು ಭಕ್ತಿ ಸಡಗರದಿಂದ ನೆರವೇರಿತು. ಸಹಸ್ರಾರು ಸಂಖ್ಯೆಯ ಭಗವದ್ಬಕ್ತರ ಪರಾಕುಗಳೊಂದಿಗೆ ತಳಿರು, ತೋರಣ, ಸೀಯಾಳ, ಅಡಿಕೆ,ಬಾಳೆ, ಬಾಳೆಗೊನೆ ಮತ್ತು ವಿದ್ಯುತ್ ಅಲಂಕಾರದ ರಥದಲ್ಲಿ ಶ್ರೀ ದೇವರ ಉತ್ಸವ

ಪ್ರಧಾನಿ ಮೋದಿ ತಾಯಿ ಹೀರಾ ಬೆನ್‌ ಆರೋಗ್ಯದಲ್ಲಿ ಏರುಪೇರು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾ ಬೆನ್‌ ಆರೋಗ್ಯದಲ್ಲಿ ಏರುಪೇರಾಗಿದೆ. ಗುಜರಾತ್‌ನ ಅಹಮದಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತಾಯಿ ಆರೋಗ್ಯ ವಿಚಾರಿಸಲು ಸಂಜೆ ತೆರಳಲಿದ್ದಾರೆ. ಈ ವರ್ಷದ ಜೂನ್‌ನಲ್ಲಿ 99 ನೇ ವರ್ಷಕ್ಕೆ ಕಾಲಿಟ್ಟ ಹೀರಾಬೆನ್ ಮೋದಿ ಅವರ ಆರೋಗ್ಯ ಕಳೆದ ರಾತ್ರಿ