Home 2023

ಪಡುಬಿದ್ರಿ: ಶ್ರೀ ಸಾಯಿ ಇಲೆಕ್ಟ್ರಾನಿಕ್ಸ್ & ಫರ್ನಿಚರ್ ಮಳಿಗೆ:  ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಪ್ರಯುಕ್ತ ವಿಶೇಷ ಆಫರ್

ಪಡುಬಿದ್ರಿಯ ಹೊಟೇಲ್ ಎಸ್‌ಎಎಸ್ ಬಿಲ್ಡಿಂಗ್‌ನಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ಸಾಯಿ ಇಲೆಕ್ಟ್ರಾನಿಕ್ಸ್ & ಫರ್ನಿಚರ್ ಮಳಿಗೆಯಲ್ಲಿ ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಪ್ರಯುಕ್ತ ವಿಶೇಷ ಆಫರ್‌ಗಳನ್ನು ಘೋಷಿಸಲಾಗಿದೆ. ಹೊಸ ವರ್ಷದ ಪ್ರಯುಕ್ತ ಶ್ರೀ ಸಾಯಿ ಇಲೆಕ್ಟ್ರಾನಿಕ್ಸ್ & ಫರ್ನಿಚರ್ ಮಳಿಗೆಯಲ್ಲಿ ಗ್ರಾಹಕರಿಗಾಗಿ ವಿಶೇಷ ಕೊಡುಗೆಗಳನ್ನು

ಪುತ್ತೂರು: ಕಾಡು ರಕ್ಷಣೆಯಲ್ಲಿ ಅರಣ್ಯ ಇಲಾಖೆ ಸೇನಾನಿಗಳ ಕೊಡುಗೆ ಅಪಾರ: ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂಥೋನಿ ಎಸ್ ಮರಿಯಪ್ಪ

ಪುತ್ತೂರು; ಮಾನವನ ಮೂಲಭೂತ ವ್ಯವಸ್ಥೆಗೆ ಪೂರಕವಾಗಿರುವ ಕಾಡು ರಕ್ಷಣೆಯಲ್ಲಿ ಅರಣ್ಯ ಇಲಾಖೆಯ ತಳಹಂತದ ಸೇನಾನಿಗಳು ಜೀವಪಣಕ್ಕಿಟ್ಟು ಕೆಲಸ ಮಾಡುತ್ತಿದ್ದಾರೆ. ಶೇ.೨೩ರಷ್ಟಿರುವ ಭೌಗೋಳಿಕಾ ಚೌಕಟ್ಟಿನಲ್ಲಿರುವ, ಎಲ್ಲದಕ್ಕೂ ಮೂಲವಾಗಿರುವ ಕಾಡನ್ನು ಕಾಪಾಡುವ ಜತೆಗೆ ಜೀವಜಗತ್ತಿನ ರಕ್ಷಣೆ ಮಾಡುತ್ತಿರುವ ಏಕೈಕ ಇಲಾಖೆ ಅರಣ್ಯ ಇಲಾಖೆ ಎಂದು  ಮಂಗಳೂರು ವಿಭಾಗದ ಉಪ ಅರಣ್ಯ

ಮಂಗಳೂರು: ಹೊಸ ವರ್ಷಾಚರಣೆಗೆ ಬಿಗು ಬಂದೋಬಸ್ತ್

ಮಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಬಿಗು ಬಂದೋಬಸ್ತ್‌ನ್ನು ಏರ್ಪಡಿಸಲಾಗಿದೆ. ಬೀಚ್, ಪಾರ್ಕ್ ಸಹಿತ ಹೊರಾಂಗಣಗಳಲ್ಲಿ ರಾತ್ರಿ 10 ಗಂಟೆಯವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ವರ್ಷಾಚರಣೆಗೆ ಹೊಟೇಲ್, ಚರ್ಚ್, ರೆಸಾರ್ಟ್ ಮೊದಲಾದ ಒಳಾಂಗಣಗಳಲ್ಲಿ

ಉಡುಪಿ:  ಜಯಲಕ್ಷ್ಮೀ ಸಿಲ್ಕ್ಸ್ ನಲ್ಲಿ ಮಿಸ್ ಫೈರಿಂಗ್: ಒಬ್ಬರಿಗೆ ಗಾಯ, ಪೊಲೀಸ್ ದೌಡು

ಉಡುಪಿಯ ಬನ್ನಂಜೆಯಲ್ಲಿರುವ ಜಯಲಕ್ಷ್ಮೀ ಸಿಲ್ಕ್ಸ್ ನಲ್ಲಿ ಮಿಸ್ ಫೈರಿಂಗ್ ಆಗಿದ್ದು, ಇದರಿಂದ ಓರ್ವ ಸಿಬ್ಬಂದಿ ಗಾಯಗೊಂಡ ಘಟನೆ ನಡೆದಿದೆ. ಬಟ್ಟೆ ಮಳಿಗೆಯಲ್ಲಿ ಯಾರೋ ಬಿಟ್ಟು ಹೋಗಿದ್ದ ಗನ್ ಪತ್ತೆಯಾಗಿತ್ತು. ಅದನ್ನು ಎತ್ತಿಕೊಂಡ ಸಿಬ್ಬಂದಿ ಆಪರೇಟ್ ಮಾಡಿ ಪರೀಕ್ಷಿಸಲು ಮುಂದಾಗಿದ್ದಾರೆ. ಈ ವೇಳೆ ಅಲ್ಲೇ ಇದ್ದ ಇನ್ನೋರ್ವ ಸಿಬ್ಬಂದಿಗೆ ಗುಂಡು ತಗುಲಿದ್ದು, ಅವರನ್ನು

ಬೈಂದೂರು: ತ್ರಾಸಿ ಬೀಚ್‌ನಲ್ಲಿ ಬಾಲ ಪ್ರತಿಭೆ ತನ್ವಿತಾ ಅವರಿಂದ ಯೋಗಾಸನದ ಪ್ರದರ್ಶನ

ಬೈಂದೂರು: ಕುಂದಾಪುರ ತಾಲೂಕಿನ ಕುಂದಬಾರಂದಾಡಿ ಗ್ರಾಮದ ನಿವಾಸಿ ಪುಷ್ಪಲತಾ ಮತ್ತು ವಸಂತ ಅವರ ದಂಪತಿಗಳ ಪುತ್ರಿ ಬಾಲ ಪ್ರತಿಭೆ ಕು. ತನ್ವಿತಾ ಯೋಗಾಸನದಲ್ಲಿ ಚಿನ್ನ,ಬೆಳ್ಳಿ,ಕಂಚು ಸೇರಿದಂತೆ ಒಟ್ಟು ೬೫ಕ್ಕೂ ಅಧಿಕ ಪ್ರಶಸ್ತಿಗಳನ್ನು ಜಯಿಸುವುದರ ಮೂಲಕ ಯೋಗಾಸನದಲ್ಲಿ ವಿಶಿಷ್ಟವಾದ ಸಾಧನೆ ಮಾಡುತ್ತಿದ್ದಾರೆ. ಇದೀಗ ತ್ರಾಸಿ ಬೀಚ್‌ನಲ್ಲಿ ನಾನಾ ಭಂಗಿಗಳ ಯೋಗಾಸನ

ಉಡುಪಿ: ಹೊಸ ವರ್ಷಾಚರಣೆಗೆ ನಿಗಾ: ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ

ಉಡುಪಿ: ಹೊಸ ವರ್ಷಚರಣೆಯ ಸಂದರ್ಭ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರವನ್ನು ವಹಿಸಿಕೊಳ್ಳಲಾಗಿದೆ ಎಂದು ಉಡುಪಿ ಪೊಲೀಸ್ ವರಿಷ್ಟಾಧಿಕಾರಿ ಅರುಣ್ ಕುಮಾರ್ ತಿಳಿಸಿದ್ದಾರೆ. ಹಲವೆಡೆ ಹೊಸ ವರ್ಷಚರಣೆ ಸಂಭ್ರಮಾಚರಣೆ ನಡೆಸಲು ಅನುಮತಿ ನೀಡಲಾಗಿದೆ.ಸುಪ್ರಿಂ ಕೋರ್ಟ್ ನಿರ್ದೇಶನದಂತೆ ಹತ್ತು ಗಂಟೆ ವರೆಗೆ ಸೌಂಡ್ಸ್ ಗೆ ಅವಕಾಶ ಇದ್ದು, ಬಳಿಕ ನಿಲ್ಲಿಸುವಂತೆ

*ಮಂಗಳೂರು: ಮಂಗಳೂರು-ಮಡಗಾಂವ್ ನಡುವೆ ವಂದೇ ಭಾರತ್ ರೈಲಿಗೆ ಚಾಲನೆ

ಮಂಗಳೂರು- ಮಡಗಾಂವ್ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ವೀಡಿಯೊ ಕಾನ್ಫರೆನ್ಸ್  ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ಮಾಡಿದರು. ಪ್ರಧಾನ ನಗರಗಳನ್ನು ಜೋಡಿಸುವ ಸೆಮಿ ಹೈ ಸ್ಪೀಡ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಮಡಗಾಂವ್‌ಗೆ ಶನಿವಾರ 12.13 ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಪ್ರಥಮ ಪ್ರಯಾಣ

ಅಯ್ಯಪ್ಪ‌… ಮಹಿಳೆಯೆಂದರೆ ನಿನಗ್ಯಾಕೆ ಮೈಲಿಗೆಯಪ್ಪ…??

ಮಂಗಳೂರು: ಶಬರಿಮಲೆ ಯಾತ್ರೆಯ ಗೌಜಿ. ಎಲ್ಲೆಲ್ಲಿಂದಲೋ ಶಬರಿಮಾಲೆಗೆ ಆಗಮಿಸುತ್ತಿರುವ ಅಪಾರ ಸಂಖ್ಯೆಯ ಭಕ್ತರು. ಊರೂರಲ್ಲಿ, ಮಂದಿರ, ಗುಡಿ, ಬೀರಿಗಳಲ್ಲಿ ಭಜನೆ, ದೀಪೋತ್ಸವ, ಇರುಮುಡಿ ಕಟ್ಟುವಿಕೆ ಇತ್ಯಾದಿ ಇತ್ಯಾದಿ. ಅಂತೂ ಎಲ್ಲೆಲ್ಲೂ ಅಯ್ಯಪ್ಪ ವೃತದಾರಿಗಳು…ಇವೆಲ್ಲವೂ ಕಣ್ಣಿಗೆ ಈಗ ನಿತ್ಯ ಕಾಣುವ ದೃಶ್ಯಗಳಾದರೆ ಅಯ್ಯಪ್ಪ ಮಾಲಾಧಾರಣೆಯ ಹಿಂದೆ ಮಹಿಳೆಯರನ್ನು

ಕಾಸರಗೋಡು: ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾಸರಗೋಡು: ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ   ಫೆಬ್ರವರಿ 16 ರಿಂದ 29 ರ ವರೆಗೆ ನಡೆಯಲಿರುವ ನವೀಕರಣ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಕ್ಷೇತ್ರದಲ್ಲಿ ನಡೆಯಿತು. ಎಡನೀರು ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹಾಗೂ ಮಾಣಿಲ ಶ್ರೀ

ಮಂಗಳೂರು: ಕೊಟ್ಟಾರದಲ್ಲಿ ಭೀಕರ ಅಪಘಾತ: ಸ್ಕೂಟರ್ ಸವಾರ ಮೃತ್ಯು

ಮಂಗಳೂರಿನ ಕೊಟ್ಟಾರದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸ್ಕೂಟರ್‌ಗೆ ಲಾರಿಯೊಂದು ಢಿಕ್ಕಿಯಾಗಿದ್ದು, ರಸ್ತೆಗೆ ಎಸೆಯಲ್ಪಟ್ಟ ಸ್ಕೂಟರ್ ಸವಾರನ ಮೇಲೆ ಲಾರಿ ಹರಿದು ಈ ದುರ್ಘಟನೆ ಸಂಭವಿಸಿದೆ.