Home 2023 March (Page 3)

ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಸಾವು

ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಇಹಲೋಕ ತ್ಯಜಿಸಿದ ಘಟನೆ ಮಾ.30 ರಂದು ಕಡಬ ಸಮೀಪದ ಎಡಮಂಗಲ ಗ್ರಾಮದಿಂದ ವರದಿಯಾಗಿದೆ.ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದ ಕಾಂತು ಅಜಿಲ ಮೂಲಂಗೀರಿ ಸಾವನ್ನೊಪ್ಪಿದವರು. ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ

ಕೂಡಲೇ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಗಳನ್ನು ತೆರವು ಮಾಡಲು ಸೂಚನೆ

ಮಂಗಳೂರು,ಮಾ.29(ಕ.ವಾ):- ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು ಬೆಳಿಗ್ಗೆಯಿಂದಲೇ ಮಾದರಿ ಸಂಹಿತೆ ಜಾರಿಗೊಂಡ ಕಾರಣ ಸರ್ಕಾರದ ಅನುದಾನವನ್ನು ಬಳಸಿಕೊಂಡು ಹಾಕಿರುವ ಜಾಹೀರಾತು ಫ್ಲೆಕ್ಸ್, ಬ್ಯಾನರ್ ಹಾಗೂ ಬಂಟಿಂಗ್ಸ್ ಗಳನ್ನು ಜಿಲ್ಲೆಯಾದ್ಯಂತ ಕೂಡಲೇ ತೆರವುಗೊಳಿಸುವಂತೆ ಜಿಲ್ಲೆಯ ಎಲ್ಲಾ ಚುನಾವಣಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ

ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆ ನೇಣಿಗೆ ಶರಣು

ಮೂಡುಬಿದಿರೆ: ಕಳೆದೆರಡು ವರ್ಷಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೋರ್ವರು ಬುಧವಾರ ಬೆಳಿಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದಿರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಪುರಸಭಾ ವ್ಯಾಪ್ತಿಯ ಪ್ರಾಂತ್ಯ ಗ್ರಾಮದ ಗೌರಿಕೆರೆ ರಾಮ ಮಂದಿರ ಬಳಿಯ ನಿವಾಸಿ ಚಂದ್ರಶೇಖರ ಭಟ್ ಎಂಬವರ ಪತ್ನಿ ಕುಸುಮಾ( 49 ವ) ಆತ್ಮಹತ್ಯೆ ಮಾಡಿಕೊಂಡ

ಉಳ್ಳಾಲ : ಯುವಕ,ಯುವತಿಯನ್ನ ಅಡ್ಡಗಟ್ಟಿ ಸುಲಿಗೆ : ಹೆಡೆಮುರಿ ಕಟ್ಟಿದ್ದ ಪೊಲೀಸರು

ಯುವಕ,ಯುವತಿಯನ್ನ ಅಡ್ಡಗಟ್ಟಿ ಸುಲಿಗೆ;ಉಳ್ಳಾಲ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ,ಬೈಕ್,ಐಫೋನ್ ಎಗರಿಸಿದವರ ಬಂಧನ.ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲದಲ್ಲಿ ಬೈಕಲ್ಲಿ ತೆರಳುತ್ತಿದ್ದ ಜೋಡಿಯನ್ನ ಅಡ್ಡ ಕಟ್ಟಿ ಐ-ಪೋನ್ ಮತ್ತು ಬೈಕನ್ನ ದೋಚಿದ್ದ ಮೂವರು ಖದೀಮರನ್ನ ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66

ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನೆ

ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆಯನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವೀರೇಂದ್ರ ಹೆಗ್ಗಡೆ ಅವರು, ದೇಶದಲ್ಲೇ ಅತ್ಯಂತ ಹೆಸರುವಾಸಿಯಾದ ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇತ್ರಕ್ಕೆ ಧರ್ಮದೇವತೆಗಳು ರಕ್ಷಕರಾದರೆ ಕ್ಷೇತ್ರಕ್ಕೆ ಬರುವ ಭಕ್ತರನ್ನು ರಕ್ಷಿಸಿ, ಅಧರ್ಮಕ್ಕೆ ಶಿಕ್ಷೆಯನ್ನು

ಮಹಾವೀರ ಜಯಂತಿ ಅಂಗವಾಗಿ ಜಿತೋನಿಂದ “ಅಹಿಂಸಾ ಓಟ”: ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಗುರಿ – ರಾಜ್ಯಪಾಲರು ಭಾಗಿ

ಮಹಾವೀರ ಜಯಂತಿ ಅಂಗವಾಗಿ ಜಿತೋನಿಂದ “ಅಹಿಂಸಾ ಓಟ”: ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಗುರಿ – ರಾಜ್ಯಪಾಲರು ಭಾಗಿ ಬೆಂಗಳೂರು; ಮಹಾವೀರ ಜಯಂತಿ ಅಂಗವಾಗಿ ಏಪ್ರಿಲ್ 2 ರಂದು ಜೈನ್ ಇಂಟರ್ ನ್ಯಾಷನಲ್ ಟ್ರೇಡ್ ಆರ್ಗನೈಸೇಷನ್ ನಿಂದ ಐಐಎಫ್ಎಲ್ ಜಿತೋ “ಅಹಿಂಸಾ ಓಟ” ಆಯೋಜಿಸಲಾಗಿದೆ. ಶಾಂತಿ – ಸೌಹಾರ್ದತೆ ಸ್ಥಾಪನೆಯ ಮಹತ್ವಾಕಾಂಕ್ಷೆಯೊಂದಿಗೆ ಗಿನ್ನೆಸ್ ದಾಖಲೆ

ಪುತ್ತೂರು ನಗರ ಪೊಲೀಸ್ ಠಾಣೆ ಹೆಡ್‌ಕಾನ್‌ಸ್ಟೇಬಲ್ ಪರಮೇಶ್ವರ ಗೌಡ ಅವರಿಗೆ ಮುಖ್ಯಮಂತ್ರಿ ಪದಕ

ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಪರಮೇಶ್ವರ ಗೌಡ ಅವರು 2022ನೇ ಸಾಲಿನ ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾಗಿದ್ದಾರೆ. ವಾರಂಟ್ ಕರ್ತವ್ಯ ನಿರ್ವಹಿಸುತ್ತಿರುವ ಪರಮೇಶ್ ಅವರು ಕಳೆದ ಹಲವು ವರ್ಷಗಳಿಂದ ನ್ಯಾಯಾಲಯದಲ್ಲಿ ವಿಚಾರಣೆಗೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪತ್ತೆ ಮಾಡುವಲ್ಲಿ ಮಾಡಿದ ಸಾಧನೆ ಮತ್ತು ಕರ್ತವ್ಯ ನಿಷ್ಠೆಗೆ

ಸರಣಿ ದ್ವಿಚಕ್ರ ವಾಹನಗಳ ಕಳವು ಕೃತ್ಯ ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಉಳ್ಳಾಲ: ಉಳ್ಳಾಲದಲ್ಲಿ ಸರಣಿ ಬೈಕ್ ಕಳ್ಳತನ ನಡೆದಿದ್ದು ಕೋಟೆಕಾರಿನ ಕೊರಗಜ್ಜನ ಕಟ್ಟೆಯ ಬಳಿ ನಿಲ್ಲಿಸಲಾಗಿದ್ದ ಬೈಕನ್ನು ನಸುಕಿನ ವೇಳೆ ಇಬ್ಬರು ಕಳ್ಳರು ಕಳವು ನಡೆಸಿರುವ ಘಟನೆ ನಡೆದಿದೆ. ಕಳ್ಳರಿಬ್ಬರ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ರಾ.ಹೆ.66 ರ ಉದ್ದಕ್ಕೂ ಹಲವು ಸಮಯದಿಂದ ಸರಣಿಯಾಗಿ ಬೈಕ್ ಕಳವಾಗುತ್ತಿದ್ದರೂ ಕಳ್ಳರ

ಭಾರತದ ಕ್ರಿಕೆಟ್ ತಂಡದ ಮಾಜಿ ಆಟಗಾರ ರವಿಶಾಸ್ತ್ರಿ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ

ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರರು ಹಾಗೂ ಮಾಜಿ ಕೋಚ್‍ಗಳಾದ ರವಿಶಾಸ್ತ್ರಿ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಕೆರಾಡಿ ಚಂದ್ರಶೇಖರ್ ಶೆಟ್ಟಿ ಅವರು ಸನ್ಮಾನ ಮಾಡಿ ಪ್ರಸಾದ ನೀಡಿ ಗೌರವಿಸಿದರು ವ್ಯವಸ್ಥಾಪನ ಸಮಿತಿಯ ಸರ್ವ ಸದಸ್ಯರು

ರೆಂಜಿಲಾಡಿಯ ಯೋಧ ಲಿಜೇಶ್ ಕುರಿಯನ್ ನಿಧನ

ಕಡಬ: ಹೃದಯಾಘಾತದಿಂದ ಕೊಯಂಬತ್ತೂರಿನಲ್ಲಿ ನಿಧನರಾದ ಕಡಬ ತಾಲೂಕಿನ ರೆಂಜಿಲಾಡಿಯ ಯೋಧನಿಗೆ ಸಕಲ ಸರಕಾರಿ ಗೌರವಗಳೊಂದಿಗೆ ಮಂಗಳವಾರ ಅಂತಿಮ ಗೌರವ ಸಲ್ಲಿಸಿ ಅಂತಿಮ ಕಾರ್ಯ ನೆರವೇರಿಸಲಾಯಿತು. ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ತರಪ್ಪೇಳ್ ನಿವಾಸಿ ಮಾಜಿ ಯೋಧ ಜೋನಿ ಟಿ.ಕೆ. ಅವರ ಪುತ್ರ ಚೆನೈ ರಿಜಿಮೆಂಮಟ್ನ ಕೊಲ್ಕತ್ತಾ ಘಟಕದಲ್ಲಿ ಯೋಧರಾಗಿದ್ದ ಲಿಜೇಶ್ ಕುರಿಯನ್ (30)