ಖಾಸಗಿ ಬಸ್ ಮಹಿಳೆಯರಿಗೆ ಫ್ರೀ ಆಗಲಿ : ವಿ. ಸುನಿಲ್ ಕುಮಾರ್ ಟ್ವೀಟ್ ಖಂಡಿಸಿದ ಕಿಶನ್ ಹೆಗ್ಡೆ ಕೊಳ್ಕೆಬೈಲ್

ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿಗಳ ಪೈಕಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಗ್ಯಾರಂಟೀ ಗೆ ನೂತನ ಸಾರಿಗೆ ಸಚಿವರಾದ ಡಾ. ರಾಮಲಿಂಗಾರೆಡ್ಡಿ ತೆರೆ ಎಳೆದಿದ್ದಾರೆ. ಮೇ 30 ರಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲ ಮಹಿಳೆಯರು ಯಾವುದೇ ಷರತ್ತುಗಳಿಲ್ಲದೆ ಪ್ರಯಾಣಿಸಬಹುದು ಎಂದು ತಿಳಿಸಿದರು. ಆದರೆ ಈ ಗ್ಯಾರಂಟೀ ರಾಜ್ಯಾದ್ಯಂತ ಯಾವಾಗಿನಿಂದ

ಜೂನ್ 3ರಂದು ದಿ.ಜಾರ್ಜ್ ಫೆರ್ನಾಂಡಿಸ್ ರವರ ಜನ್ಮದಿನಾಚರಣೆ, ಪ್ರಶಸ್ತಿ ಪ್ರದಾನ

ಮುಂಬಯಿ :ಅವಿಭಾಜಿತ ದಕ್ಷಿಣ ಕನ್ನಡ ಜಿಲ್ಲೆಗಳ ಅಭಿವೃದ್ದಿಗಾಗಿ ವಿವಿಧ ರೀತಿಯಲ್ಲಿ ಶ್ರಮಿಸುತ್ತಿರುವ ಮುಂಬಯಿಯಲ್ಲಿ ನೆಲೆಸಿದ ಕರ್ನಾಟಕದ ಕರಾವಳಿಯ ಎಲ್ಲಾ ಜಾತೀಯ ಹಾಗೂ ವಿವಿಧ ಭಾಷೀಯ ಸಂಘಟನೆಗಳನ್ನೊಳಗೊಂಡ ಏಕೈಕ ಸರಕಾರೇತರ ಸಂಘಟನೆ ಜಯಶ್ರಿಕೃಷ್ಣ ಪರಿಸರ ಪ್ರೇಮಿ ಸಮಿತಿ. ಇದರ ಮಾರ್ಗದರ್ಶಕರಾಗಿದ್ದ ಮಾಜಿ ಕೇಂದ್ರ ಸಚಿವ ದಿ. ಜಾರ್ಜ್ ಫೆರ್ನಾಂಡಿಸ್ ಅವರ 94ನೇ

ಮುಂಗಾರು ಮಳೆ ಎದುರಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಸಜ್ಜು : ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್

ಮುಂಗಾರು ಮಳೆ ಎದುರಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಸಜ್ಜಾಗಿದೆ. ಪ್ರಕೃತಿ ವಿಕೋಪ ಸಮರ್ಥವಾಗಿ ನಿರ್ವಹಿಸಲು ಬೇಕಾದ ಎಲ್ಲಾ ರೀತಿ ಸಿದ್ಧತೆಯನ್ನು ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್ ಹೇಳಿದರು. ವಿ4ನ್ಯೂಸ್‍ನೊಂದಿಗೆ ಮಾತನಾಡಿದ ಅವರು, ಈಗಾಗಲೇ ಸ್ಪೀಕರ್ ಯು.ಟಿ.ಖಾದರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಜನಪ್ರತಿನಿಧಿಗಳು ಹಾಗೂ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ – ರನ್ ವೇ ಕಾಮಗಾರಿ ಪೂರ್ಣ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 2.45 ಕಿ.ಮೀ. ಉದ್ದದ ರನ್‍ವೇ ಮರುನಿರ್ಮಾಣ ಕಾಮಗಾರಿ ಮೇ 28ರಂದು ಪೂರ್ಣಗೊಂಡಿದೆ. ಈಗಾಗಲೇ ತಜ್ಞರ ತಂಡ ಪ್ರಾಥಮಿಕ ಸಮೀಕ್ಷೆ ನಡೆಸಿದ್ದು, ಅಂತಿಮ ಸಮೀಕ್ಷೆಯ ಬಳಿಕ ಜೂ. 1ರಿಂದ ಹಗಲು ವೇಳೆಯಲ್ಲೂ ನಿಲ್ದಾಣದ ಕಾರ್ಯಾಚರಣೆ ಆರಂಭವಾಗಲಿದೆ. ವಿಮಾನಯಾನ ಸುರಕ್ಷಾ ಮಾನದಂಡಗಳ ಪ್ರಕಾರ ಕಾಮಗಾರಿ ಕೈಗೊಳ್ಳಲಾಗಿದ್ದು,

ಬಾಲವಿಕಾಸ ಇಂಗ್ಲೀಷ್ ಮೀಡಿಯಂ ಸ್ಕೂಲ್ – ವೆಲ್ಕಂ ಡೇ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ

ಬಾಲವಿಕಾಸ ಇಂಗ್ಲೀಷ್ ಮೀಡಿಯಂ ಸ್ಕೂಲ್, ಮಾಣಿಯ ವಿದ್ಯಾನಗರದಲ್ಲಿರುವ ಈ ಶಾಲೆ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಶಿಕ್ಷಣ ನೀಡುವ ಮೂಲಕ ಹೆಸರುವಾಸಿಯಾದ ಸಂಸ್ಥೆ. ಇದೀಗ ಈ ಶಾಲೆಯಲ್ಲಿ ನಾಳೆ ವೆಲ್ಕಂ ಡೇ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ಬೆಳಗ್ಗೆ 9.30ಕ್ಕೆ ನಡೆಯಲಿದೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲವಿಕಾಸ ಟ್ರಸ್ಟ್ನ ಅಧ್ಯಕ್ಷ ಪ್ರಹಲ್ಲಾದ್ ಶೆಟ್ಟಿ ಜೆ

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತರಾಮ್ ಭೇಟಿ

ಉಳ್ಳಾಲ: ಸ್ಯಾಂಡಲ್‍ವುಡ್‍ನ ಡಿಂಪಲ್ ಬೆಡಗಿ ರಚಿತಾರಾಮ್ ಅವರಿಂದು ಮಂಗಳೂರು ಹೊರವಲಯದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿತಳಕ್ಕೆ ಭೇಟಿ ನೀಡಿ ತಮ್ಮ ನಟನೆಯ ಹೊಸ ಚಿತ್ರಗಳಾದ ಮ್ಯಾಟ್ನಿ,ಬ್ಯಾಡ್ ಮ್ಯಾನರ್ಸ್ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಿದರು. ನನ್ನ ಸ್ನೇಹಿತರೆಲ್ಲರೂ ಕೊರಗಜ್ಜ ದೈವದ ಕಾರಣೀಕದ ಬಗ್ಗೆ ಹೇಳಿದ್ರು. ಹಾಗಾಗಿ ನನಗೂ

ವಿಟ್ಲ : ವಿವಾಹಿತ ನೇಣ ಬಿಗಿದು ಆತ್ಮಹತ್ಯೆ

ವಿಟ್ಲ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಅಳಕೆಮಜಲು ಸಮೀಪ ನಡೆದಿದೆ. ಅಳಕೆಮಜಲು ನಿವಾಸಿ ಧೀರಜ್ (30) ಮೃತಪಟ್ಟ ವ್ಯಕ್ತಿ. ಧೀರಜ್ ಬಿ.ಸಿ.ರೋಡ್ ನ ಹೋಂಡಾ ಶೋ ರೂಂ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಒಂದು ವರುಷದ ಹಿಂದಷ್ಟೇ ವಿವಾಹವಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಪತ್ನಿ

ಬ್ರಹ್ಮಾವರ ರುಡ್ ಸೆಟ್‍ನಿಂದ ಸ್ವ ಉದ್ಯೋಗ ತರಬೇತಿ

ಬ್ರಹ್ಮಾವರದಲ್ಲಿ ರುಡ್ ಸೆಟ್ ವತಿಯಿಂದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರೀಗೆ ಸ್ವ ಉದ್ಯೋಗ ಮತ್ತು ಕಿರು ಉದ್ಯಮಗಳಿಗೆ ಉಚಿತ ತರಬೇತಿಯನ್ನು ನೀಡುತ್ತಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ನಾನಾ ಸರಕಾರಿ ಸ್ವಾಮ್ಯದ ಬ್ಯಾಂಕ್‍ಗಳ ಸಹಕಾರದಲ್ಲಿ ಉಜಿರೆಯಲ್ಲಿ 1982ರಲ್ಲಿ ರುಡ್ ಸೆಟ್ ಗಳ

ಚುನಾವಣೆ ಗೆದ್ದ ಬಳಿಕ ಪ್ರತಿಯೊಂದು ನಡೆಯಲ್ಲೂ ಹೆಚ್ಚಿದ ಜವಾಬ್ದಾರಿ : ಶಾಸಕ ಅಶೋಕ್ ಕುಮಾರ್ ರೈ

ವಿಟ್ಲ: ಕಾರ್ಯಕರ್ತರು ಮಾಡಿದ ಕೆಲಸಕ್ಕೆ ಹೃದಯದಲ್ಲಿ ಜಾಗವನ್ನು ನೀಡಲಾಗಿದೆ. ಜನರ ಮನಸ್ಸಿನಲ್ಲಿ ಹಲವು ನಿರೀಕ್ಷೆಗಳಿದ್ದು, ಚುನಾವಣೆಯಲ್ಲಿ ಗೆದ್ದ ಬಳಿಕ ಪ್ರತಿಯೊಂದು ನಡೆಯಲ್ಲೂ ಜವಾಬ್ದಾರಿ ಹೆಚ್ಚಿದೆ. ಭ್ರಷ್ಟಾಚಾರ ಮುಕ್ತ ಮಾಡುವ ಕಾರ್ಯಕ್ಕೆ ಕೈಹಾಕಿದ್ದು, ಯಾರೊಬ್ಬರೂ ಹಣ ನೀಡುವ ಅಗತ್ಯವಿಲ್ಲ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು

ಬೆಂಕಿ ತಗುಲಿ ಮನೆ ಸಂಪೂರ್ಣ ಭಸ್ಮ – ಕಂಗಲಾಗಿರುವ ಕುಟುಂಬಕ್ಕೆ ಬೇಕಾಗಿದೆ ಸಹಾಯಹಸ್ತ.

ಆಲೂರು ಸಕಲೇಶಪುರ ವಿಧಾನ ಸಭಾ ವ್ಯಾಪ್ತಿಗೆ ಬರುವ ಹಾಸನ ಜಿಲ್ಲೆ ಕಟ್ಟಾಯ ವ್ಯಾಪ್ತಿಯ ಮುಕುಂದೂರು ಮಲ್ಲೇನಹಳ್ಳಿ ಗ್ರಾಮದಲ್ಲಿ ಹೇಮಾವತಿ ಎಂಬುವವರ ಮನೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದಿದ್ದು ಸಂಪೂರ್ಣ ಕರಕಲಾಗಿರುವ ಘಟನೆ ನಡೆದಿದೆ. ಮನೆಗೆ ಬೆಂಕಿ ತಗುಲಿ ಉರಿಯುತ್ತಿದ್ದಂತೆ ಗ್ರಾಮ ಜನರು ತಕ್ಷಣ ನೀರು ಹಾಕಿ ಬೆಂಕಿಯ ಕೆನ್ನಾಲಿಗೆ ತಿಳಿಗೊಳಿಸಲು