Home 2023 May (Page 12)

ಕುಲಶೇಖರ ಬ್ರಹ್ಮಕಲಶೋತ್ಸ ವ ವೈಭವ : ಪ್ರಧಾನ ಶ್ರೀ ವೀರನಾರಾಯಣ ದೇವರ ಪ್ರತಿಷ್ಠೆ

ಕುಲಾಲರ ಕುಲದೇವರು ಕುಲಶೇಖರ ಕ್ಷೇತ್ರದ ಪ್ರಧಾನ ಶ್ರೀ ವೀರನಾರಾಯಣ ದೇವರ ಪ್ರತಿಷ್ಠೆಯು ಇಂದು ಬೆಳಿಗ್ಗೆ ೯.೧೦ರ ಮಿಥುನಲಗ್ನ ಸುಮುಹೂರ್ತದಲ್ಲಿ ಕ್ಷೇತ್ರದ ತಂತ್ರಿಗಳಾದ ವೇ|ಮೂ| ಬ್ರಹ್ಮಶ್ರೀ ಅನಂತ ಉಪಾಧ್ಯಾಯರ ವೈದಿಕ ನೇತೃತ್ವದಲ್ಲಿ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಹಾಗೂ ವಿವಿಧ ಸಮಿತಿ ಪದಾಧಿಕಾರಿಗಳು ಹಾಗೂ ನೂರಾರು ಸಂಖ್ಯೆಯ

ಅಕ್ರಮ ಮರಳು ಗಣಿಗಾರಿಕೆ ತಡೆಯಲು ಕಾರ್ಯಪ್ರವೃತ್ತರಾಗಿ : ತಹಶೀಲ್ದಾರ್ ರವಿ ಎಸ್ ಅಂಗಡಿ

ಉಡುಪಿ : ಉಡುಪಿ ತಾಲೂಕು ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಣಿಕೆ ಕುರಿತು ಸಾರ್ವಜನಿಕರಿಂದ ದೂರುಗಳು ಬಂದ ತಕ್ಷಣವೇ ಅಧಿಕಾರಿಗಳು ಕಾರ್ಯಪ್ರವೃತರಾಗಿ ಮರಳು ಸಾಗಾಣಿಕೆಯನ್ನು ತಡೆಯಲು ಕ್ರಮಕೈಗೊಳ್ಳುವಂತೆ ಉಡುಪಿ ತಾಲೂಕು ತಹಶೀಲ್ದಾರ್ ರವಿ ಎಸ್ ಅಂಗಡಿ ಹೇಳಿದರು.ಅವರು ಶುಕ್ರವಾರ ಉಡುಪಿ ತಾಲೂಕು ಕಚೇರಿಯಲ್ಲಿ ಉಡುಪಿ ತಾಲೂಕು ಮರಳು ಉಪಖನಿಜ ಅಕ್ರಮ ಸಾಗಾಣಿಕೆ,

ಅನಧಿಕೃತ ಮರಳು ದಕ್ಕೆಯಲ್ಲಿದ್ದ 5 ಲಾರಿಗಳು ವಶ

ಉಡುಪಿ : ಕುಂದಾಪುರ ತಾಲೂಕು ವಂಡ್ಸೆ ಹೋಬಳಿಯ ಹಟ್ಟಿಯಂಗಡಿ ಹಾಗೂ ಹೆಮ್ಮಾಡಿ ಪರಿಸರದಲ್ಲಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿದಂತೆ ಶುಕ್ರವಾರ ರಾತ್ರಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿ ಸಂಧ್ಯಾ ಅವರು ಕಾರ್ಯಾಚರಣೆ ನಡೆಸಿ 5 ಟಿಪ್ಪರ್ ಲಾರಿಗಳನ್ನು ವಶ ಪಡಿಸಿಕೊಂಡಿದ್ದಾರೆ.ಹಟ್ಟಿಯಂಗಡಿ ಗ್ರಾಮದ ಹಟ್ಟಿಕುದ್ರು ಹಾಗೂ ಹೆಮ್ಮಾಡಿ

ದೇಶವನ್ನೇ ತಲ್ಲಣಗೊಳಿಸಿದ ಮಂಗಳೂರು ವಿಮಾನ ದುರಂತಕ್ಕೆ ಹದಿಮೂರು ವರ್ಷ

2010ರ ಮೇ 22ರಂದು ಬೆಳಗ್ಗೆ 6.20ಕ್ಕೆ ದುಬಾಯಿಂದ ಬಂದ ಏರ್ ಇಂಡಿಯಾ ಎಕ್ಸ್‍ಪ್ರೆಸ್ ಲ್ಯಾಂಡ್ ಆಗುವ ಹಂತದಲ್ಲಿ ನಿರ್ದಿಷ್ಟ ಮಿತಿಗಿಂತ ಸ್ವಲ್ಪ ಮೀಟರ್ ದೂರದಲ್ಲಿ ಇಳಿದ ಕಾರಣ ಹತೋಟಿ ತಪ್ಪಿ ಕೆಂಜಾರಿನ ಗುಡ್ಡದಿಂದ ಕೆಳ ಜಾರಿತ್ತು. ಅಗ್ನಿ ಆವರಿಸಿ ಅದರಲ್ಲಿದ್ದ 158 ಮಂದಿ ಮೃತಪಟ್ಟಿದ್ದರು. 8 ಮಂದಿಯಷ್ಟೇ ಬದುಕುಳಿದಿದ್ದರು. ಊರಿಗೆ ಮರಳುವ ಖುಷಿಯಲ್ಲಿ

ಇಂದಿನಿಂದ ಮೂರು ದಿನ ವಿಧಾನಸಭೆ ಅಧಿವೇಶನ

ಇಂದಿನಿಂದ 16ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭಗೊಂಡಿದೆ. ಹಂಗಾಮಿ ಸ್ವೀಕರ್ ಆಗಿ ಆರ್ ವಿ ದೇಶಪಾಂಡೆಯವರು ನೇಮಕಗೊಂಡಿದ್ದಾರೆ. ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತ್ರ, ಶಾಸಕರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕಾಗಿ ವಿಶೇಷ ಅಧಿವೇಶನವನ್ನು ಕರೆಯಲಾಗಿತ್ತು. ಇಂದಿನಿಂದ ಮೂರು ದಿನಗಳ ಕಾಲ ವಿಶೇಷ ಅಧಿವೇಶನ ನಡಯಲಿದ್ದು, ಅದಕ್ಕೂ

ಪುತ್ತಿಲ ಪರಿವಾರ ಸಂಘಟನೆಯ ಲಾಂಛನ ಬಿಡುಗಡೆ : 5ಸಾವಿರಕ್ಕೂ ಅಧಿಕ ಮಂದಿ ಪುತ್ತಿಲರೊಂದಿಗೆ ಹೆಜ್ಜೆ

ಪುತ್ತೂರು: ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ಬೆಂಬಲಿಗರಿಂದ ನಮ್ಮ ನಡಿಗೆ ಶ್ರೀ ಮಹಾಲಿಂಗೇಶ್ವರನ ನಡೆಗೆ” ಎಂಬ ಬೃಹತ್ ಪಾದಯಾತ್ರೆ ಹಾಗೂಸೇವಾ ಸಮರ್ಪಣಾ ಕಾರ್ಯಕ್ರಮ” ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಾಲಯದ ದೇವರ ಮಾರುಗದ್ದೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ `ಪುತ್ತಿಲ ಪರಿವಾರ’ ಸಂಘಟನೆಯ ಲಾಂಚನ ಬಿಡುಡೆಗೊಳಿಸಲಾಯಿತು. ದರ್ಬೆಯಲ್ಲಿ ಚಾಲನೆ

ಅರುಣ್ ಕುಮಾರ್ ಪುತ್ತಿಲ-ಡಾ. ಪ್ರಭಾಕರ್ ಭಟ್ ಪರಸ್ಪರ ಮುಖಾಮುಖಿ

ಪುತ್ತೂರು: ಮದುವೆ ಕಾರ್ಯಕ್ರಮವೊಂದರಲ್ಲಿ ಪುತ್ತೂರು ಕ್ಷೇತ್ರದ ಪರಾಜಿತ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಮತ್ತು ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಪರಸ್ಪರ ಮುಖಾಮುಖಿಯಾದ ಪ್ರಸಂಗ ನಡೆದಿದೆ. ಪೆರಾಜೆಯ ಮಾಣಿ ಶ್ರೀರಾಮಚಂದ್ರಾಪುರ ಮಠದಲ್ಲಿ ನಡೆದ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದ ಅರುಣ್ ಕುಮಾರ್ ಪುತ್ತಿಲ ಮತ್ತು ಕಲ್ಲಡ್ಕ ಡಾ. ಪ್ರಭಾಕರ್

ವಿಟ್ಲ : ಅಕ್ರಮ ಗೋವು ಸಾಗಾಟ, ರಕ್ಷಣೆ

ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ಪೊಲೀಸರಿಗೊಪ್ಪಿಸಿ ಎರಡು ಜಾನುವಾರುಗಳನ್ನು ರಕ್ಷಣೆ ಮಾಡಿದ ಘಟನೆ ವಿಟ್ಲ ಸಮೀಪದ ಸಾಲೆತ್ತೂರು ಎಂಬಲ್ಲಿ ನಡೆದಿದೆ. ಈ ಬಗ್ಗೆ ತಿಳಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪಿಕಪ್ ವಾಹನವನ್ನು ತಡೆದು ಪೊಲೀಸರಿಗೊಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.

ಉಡುಪಿ: ಮಾಜಿ ಶಾಸಕ ಯು.ಆರ್ ಸಭಾಪತಿ ನಿಧನ

ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಯು.ಆರ್. ಸಭಾಪತಿ ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಗ್ಗೆ ನಿಧನರಾದರು. 1987ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪರಿಷತ್ ನ ಉದ್ಯಾವರ ಕ್ಷೇತ್ರದ ಸದಸ್ಯರಾಗಿದ್ದ ಇವರು, ಪರಿಷತ್ ನ ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಅದೇ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉತ್ತರ ವಿಭಾಗದ ಯುವ ಕಾಂಗ್ರೆಸ್

ಉಳ್ಳಾಲ : ಓಮ್ನಿ ಅಪಘಾತ: ವೃದ್ಧೆ ಸಾವು, ಮೂವರಿಗೆ ಗಂಭೀರ ಗಾಯ

ಉಳ್ಳಾಲ:ಹೆದ್ದಾರಿ ಬದಿಯ ಕಬ್ಬಿಣದ ಸಲಾಕೆಯ ತಡೆಬೇಲಿಗೆ ಓಮ್ನಿ‌ ಕಾರು ಢಿಕ್ಕಿ ಹೊಡೆದ ಪರಿಣಾಮ 85ರ ವೃದ್ಧೆಯೋರ್ವರ ದೇಹ ಛಿದ್ರಗೊಂಡು ಸಾವನ್ನಪ್ಪಿದ ಘಟನೆ ರಾ.ಹೆ 66 ರ ಉಚ್ಚಿಲ ಎಂಬಲ್ಲಿ ಇಂದು ಮುಂಜಾನೆ ನಸುಕಿನ ಜಾವ ಸಂಭವಿಸಿದೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ,ಕುಂಜತ್ತೂರು ನಿವಾಸಿ ಬಿ.ಫಾತಿಮಾ(85)ಮೃತ ಪಟ್ಟ ವೃದ್ಧೆ.ಫಾತಿಮಾ ಅವರು ತನ್ನ ಮಗ ಮೂಸ(50)