ಮಾಜಿ ಶಾಸಕರು ಹಾಗೂ ಕೆಪಿಸಿಸಿಯ ಉಪಾಧ್ಯಕ್ಷರಾದ ಶ್ರೀ ಐವನ್ ಡಿಸೋಜ ರವರು ಇಂದು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವೇಲೆನ್ಸಿಯಾ ವಾರ್ಡಿನ ತಮ್ಮ ಮತಗಟ್ಟೆಯಲ್ಲಿ ಮತದಾನ ಮಾಡಿದರು.
Month: May 2023
ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಅವರು ಗರ್ಡಾಡಿಯ ಸೈಂಟ್ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 123 ರಲ್ಲಿ ಮತ ಚಲಾಯಿಸಿದರು. ಪ್ರಜಾಪ್ರಭುತ್ವದ ಅತ್ಯಂತ ಪವಿತ್ರ ಹಬ್ಬ ಎಂದು ಕರೆಸಿಕೊಳ್ಳುವ ಮತದಾನ ಸಂಭ್ರಮದಲ್ಲಿ ಕ್ಷೇತ್ರದ ಎಲ್ಲಾ ಮತದಾರರು ಭಾಗಿಯಾಗಬೇಕೆಂದು ಮನವಿ ಮಾಡಿದರು.
ಕುಕ್ಕುಂದೂರು ಬೂತ್ ಸಂಖ್ಯೆ 110 ಗ್ರಾಮ ಪಂಚಾಯತ್ ಕಚೇರಿ ಕುಕ್ಕುಂದೂರಿಲ್ಲಿ ಪ್ರಮೋದ್ ಮುತಾಲಿಕ್ ಅವರು ಬೆಳಿಗ್ಗೆ 7 ಗಂಟೆಗೆ ಮತದಾನ ಮಾಡಿದರು.
ಕೋಡಿಂಬಾಡಿಯ ಮತದಾನ ಕೇಂದ್ರದಲ್ಲಿ ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ಮತ ಚಲಾವಣೆ.
ಕಡಬ :ಕುಂತೂರಿನ ಮತಗಟ್ಟೆಯಲ್ಲಿ ಪುತ್ತೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ಮತ ಚಲಾಯಿಸಿದರು
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಅವರು ಸೈಂಟ್ ಆಗ್ನೇಸ್ ಹಿರಿಯ ಪ್ರಾಥಮಿಕ ಶಾಲೆ, ಬೆಂದೂರಿನಲ್ಲಿ ತಮ್ಮ ಮತ ಚಲಾಯಿಸಿದರು.
ಮುಲ್ಕಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಮಿಥುನ್ ರೈ ಅವರು ಕಿನ್ನಿಗೋಳಿಯ ಸೈಂಟ್ ಮೇರಿಸ್ ಸ್ಕೂಲ್ ನಲ್ಲಿ ಪತ್ನಿಯ ಜೊತೆ ಮತದಾನ ಮಾಡಿದರು.
ಬೈಂದೂರು: ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರು ಬುಧವಾರ ಬೆಳಗ್ಗೆ ಕಂಚಿಕಾನ್ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ತಮ್ಮ ಮತ ಚಲಾಯಿಸಿದರು.ಚುನಾವಣೆಗೆ ಟಿಕೆಟ್ ಘೋಷಣೆಯಾದ ದಿನದಿಂದಲೂ ಪ್ರಚಾರ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿದ್ದ ಗುರುರಾಜ್ ಗಂಟಿಹೊಳೆಯವರು ಬುಧವಾರ ಬೆಳಗ್ಗೆ ಮತಗಟ್ಟೆಗೆ ಆಗಮಿಸಿ ತಮ್ಮ ಮತ ಚಲಾಯಿಸುವ ಮೂಲಕ ಪ್ರಾಥಮಿಕ
ವಿನಯ್ ಕುಮಾರ್ ಸೊರಕೆ ಉಡುಪಿಯ ಬಾಲಕಿಯರ ಸರಕಾರಿ ಕಾಲೇಜಿಗೆ ತಮ್ಮ ಕುಟುಂಬದದೊಂದಿಗೆ ಆಗಮಿಸಿ ಮತ ಚಲಾಯಿಸಿದ್ದಾರೆ.
ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಅವರು ಬೆಳ್ಳಗ್ಗೆ ತನ್ನ ಪತ್ನಿ ಹಾಗೂ ಸಹೋದರಿ ಜೊತೆಗೆ ಅಗಮಿಸಿ ಬಡಾನಿಡಿಯೂರು ಸನ್ಯಾಸಿ ಮಠದ ಬಳಿಯಿರುವ ಬೂತ್ ನಂಬರ್ 97 ರಲ್ಲಿ ಮತ ಚಾಲಾಯಿಸಿದ್ದಾರೆ.




























