Home 2023 June (Page 3)

ರಸ್ತೆಯಲೆಲ್ಲಾ ಡೀಸೆಲ್ ಚೆಲ್ಲಿ ವಾಹನ ಸವಾರರ ಪರದಾಟ

ಉಡುಪಿ: ರಸ್ತೆಯಲ್ಲಿ ಡೀಸೆಲ್ ಚೆಲ್ಲಿದ ಪರಿಣಾಮ ವಾಹನಗಳು ಸ್ಕಿಡ್ ಆದ ಘಟನೆ ಉಡುಪಿ ನಗರದ ಸಿಟಿ ಬಸ್ ತಂಗುದಾಣದ ಬಳಿ ಬುಧವಾರ ರಾತ್ರಿ ನಡೆದಿದೆ. ಕಲ್ಸಂಕದಿಂದ ಉಡುಪಿಯತ್ತ ತೆರಳುತ್ತಿದ್ದ ಟ್ರಕ್ ಒಂದರಿಂದ ರಸ್ತೆಯ ಮೇಲೆ ಡೀಸೆಲ್ ಚೆಲ್ಲಲ್ಪಟ್ಟಿದೆ. ಈ ವೇಳೆ ಉಡುಪಿಯತ್ತ ತೆರಳುತ್ತಿದ್ದ ದ್ವಿಚಕ್ರ ವಾಹನಗಳು ಸ್ಕಿಡ್ ಆದ ಘಟನೆ ನಡೆದಿದೆ. ಸುಮಾರು 15ರಿಂದ 20 ರಷ್ಟು

ಮೂಡುಬಿದಿರೆ : ಗಾಯಗೊಂಡ ನಾಗರಹಾವಿಗೆ ಶಸ್ತ್ರ ಚಿಕಿತ್ಸೆಯಿಂದ ಮರುಜೀವ

ಮೂಡುಬಿದಿರೆ: ಪುರಸಭಾ ವ್ಯಾಪ್ತಿಯ ಕಲ್ಲಬೆಟ್ಟು ರಸ್ತೆಯ ಬಳಿ ನಾಗರ ಹಾವೊಂದು ದ್ವಿಚಕ್ರ ವಾಹನದ ಚಕ್ರಕ್ಕೆ ಸಿಲುಕಿ ಗಾಯಗೊಂಡು ಜೀವನ್ಮರಣ ಸ್ಥಿತಿಯಲ್ಲಿತ್ತು. ಇದನ್ನು ಕಂಡ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಅರಣ್ಯ ಇಲಾಖೆಗೆ ಮಾಹಿತಿಯನ್ನು ನೀಡಿದ್ದರು. ತಕ್ಷಣ ಸ್ಪಂದಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಹಾವನ್ನು ಚಿಕಿತ್ಸೆಗಾಗಿ ಉಡುಪಿಯ ವನ್ಯಜೀವಿ

ಕರಾವಳಿಯಲ್ಲಿ ಸಂಭ್ರಮದಿಂದ ಈದ್ –ಅಲ್ ಅಧಾ ಆಚರಣೆ

ದ.ಕ.ಜಿಲ್ಲೆಯಲ್ಲಿ ಇಂದು ಮುಂಜಾನೆಯಿಂದಲೇ ಅತ್ಯಂತ ಸಡಗರ, ಸಂಭ್ರಮದಿಂದ `ಈದುಲ್ ಅಝ್ಹಾ’ ಆಚರಿಸಲಾಗುತ್ತಿದೆ. ಜಿಲ್ಲೆಯ ಮುಸ್ಲಿಮರು ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್ ನಿರ್ವಹಿಸಿ, ಈದ್ ಖುತ್ಬಾ ಮತ್ತು ಪ್ರವಚನ ಆಲಿಸಿ, ಈದ್ ಸಂದೇಶ ಸ್ವೀಕರಿಸುವುದು ಮತ್ತು ನೆರೆಮನೆ ಹಾಗೂ ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿ ನೀಡುತ್ತಿರುವುದು ಕಂಡು ಬಂತು. ಮಂಗಳೂರಿನ

ಮಂಗಳೂರು – ಮೇರಿಹಿಲ್ , ಡಿವೈಡರಿಗೆ ಬೈಕ್ ಗುದ್ದಿ ಬಾಲಕರಿಬ್ಬರು ಬಲಿ

ಮಂಗಳೂರು: ನಗರದ ಮೇರಿಹಿಲ್ ವಿಕಾಸ್ ಕಾಲೇಜಿನ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸ್ಕೂಟರ್ ಸವಾರರಿಬ್ಬರು ಬುಧವಾರ ರಾತ್ರಿ ಮೃತಪಟ್ಟಿದ್ದಾರೆ. ಮೃತರನ್ನು ಸ್ಥಳೀಯ ನಿವಾಸಿಗಳಾದ ಪವನ್ ( 16) ಹಾಗೂ ಚಿರಾಗ್ ( 15) ಎಂದು ಗುರುತಿಸಲಾಗಿದೆ. ಅಪಘಾತದಿಂದ ಒಬ್ಬ ಬಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ. ಗಾಯಗೊಂಡ ಇನ್ನೊಬ್ಬ ಬಾಲಕನನ್ನು ರಾಜಲಕ್ಷ್ಮೀ ಬಸ್ಸಿನಲ್ಲಿ

ಸುರೇಶ್‌ ಪಳ್ಳಿ, ಭರತ್‌ರಾಜ್‌ ಸನಿಲ್‌ ಗೆ ‘ಬ್ರ‍್ಯಾಂಡ್ ಮಂಗಳೂರು ಪ್ರಶಸ್ತಿ’

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದತೆ ಪ್ರತಿ ಬಿಂಬಿಸುವ ವರದಿಗೆ ನೀಡಲಾಗುವ ಬ್ರ‍್ಯಾಂಡ್ ಮಂಗಳೂರು ಪ್ರಶಸ್ತಿಗೆ ಪತ್ರಿಕಾ ಮಾಧ್ಯಮ ವಿಭಾಗದಲ್ಲಿ ಹೊಸದಿಗಂತ ವರದಿಗಾರ ಸುರೇಶ್‌ ಡಿ.ಪಳ್ಳಿ ಮತ್ತು ದೃಶ್ಯ ಮಾಧ್ಯಮ ವಿಭಾಗದಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವರದಿಗಾರ ಭರತ್‌ರಾಜ್‌ ಕೆ. ಸನಿಲ್‌

ಬಿಪಿಎಲ್ ಪಡಿತರ ಕಾರ್ಡ್‍ದಾರರ ಖಾತೆಗೆ 170 ರೂ !!

ಅನ್ನಭಾಗ್ಯ ಯೋಜನೆಯಡಿ ಪ್ರತಿ ಬಿಪಿಎಲ್ ಕುಟುಂಬಕ್ಕೆ 10 ಕೆ.ಜಿ ಅಕ್ಕಿ ನೀಡುವುದಾಗಿ ಘೋಷಿಸಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ, ಹೆಚ್ಚುವರಿ ಅಕ್ಕಿ ಹೊಂದಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ 5 ಕೆ.ಜಿ ಅಕ್ಕಿಗೆ ಬದಲಾಗಿ ಹಣವನ್ನು ನೀಡಲು ಸರ್ಕಾರ ನಿರ್ಧರಿಸಿದೆ. ಈಗಾಗಲೇ ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ 5.ಕೆ.ಜಿ ಅಕ್ಕಿಯನ್ನು ಬಿಪಿಎಲ್ ಕುಟುಂಬಗಳಿಗೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ-ಆರೋಪಿಗಳಿಗೆ ಜೂನ್30ರ ಒಳಗೆ ಶರಣಾಗಲು ಗಡುವು

ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎನ್‍ಐಎ ಅಧಿಕಾರಿಗಳು ನಾಪತ್ತೆಯಾಗಿರುವ ಆರೋಪಿಗಳಿಗೆ ತೀವ್ರ ಶೋಧ ನಡೆಸುತ್ತಿದ್ದಾರೆ. ಸುಳ್ಯ ನಗರದ ಬೀದಿಗಳಲ್ಲಿ ಈ ಬಗ್ಗೆ ಧ್ವನಿವರ್ಧಕ ಬಳಸಿ ಪ್ರಕಟಣೆ ಹೊರಡಿಸಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು ಜೂ. 30 ರೊಳಗೆ ಶರಣಾಗದೇ ಇದ್ದಲ್ಲಿ ಅವರ ಮನೆಯನ್ನು ಮುಟ್ಟುಗೋಲು

ಬೆಳ್ತಂಗಡಿ : ವಿದ್ಯುತ್ ಸಂಪರ್ಕಕ್ಕೆ ಅನುಮತಿ ನೀಡುವಂತೆ ಮನವಿ

ಬೆಳ್ತಂಗಡಿ. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ ತಾಲೂಕಿನ ಸುಲ್ಕೇರಿಮೊಗ್ರು, ಗ್ರಾಮದ ಬಲ್ಯ ಮಾಳಿಗೆಬೈಲು ಸೇರಿದಂತೆ ಬೆಳ್ತಂಗಡಿ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್ ಸಂಪರ್ಕಕ್ಕೆ ಅನುಮತಿ ನೀಡುವಂತೆ ಅರಣ್ಯ ಜೈವಿಕ ಪರಿಸರ ಸಚಿವರಾದ ಈಶ್ವರ್ ಖಂಡ್ರೆ ಅವರಿಗೆ

ಸುಳ್ಯ : ಸ್ವಯಂ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ

ಬಂದೂಕಿನಿಂದ ಸ್ವಯಂ ಗುಂಡು ಹೊಡೆದುಕೊಂಡು ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸುಳ್ಯ ತಾಲೂಕಿನ ಉಬರಡ್ಕದಲ್ಲಿ ನಡೆದಿದೆ. ಮೃತ ಯುವಕನನ್ನು ಅರಂತೋಡು ಗ್ರಾಮದ ರವಿ ಎಂದು ಗುರುತಿಸಲಾಗಿದೆ. ಈತ ಉಬರಡ್ಕ ಗ್ರಾಮದ ಬೆಳ್ರಂಪಾಡಿ ಎಂಬಲ್ಲಿನ ಗುಡ್ಡದಲ್ಲಿ ಕೋವಿಯಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಹೇಳಲಾಗಿದೆ.ಬೆಳ್ರಂಪಾಡಿಯ ಮನೆಯೊಂದರಲ್ಲಿ

ಉಡುಪಿಯ ಇನ್ಸ್ ಪಾಯರ್ ನೀಟ್ ಅಕಾಡೆಮಿಯಲ್ಲಿ ಜೂಲೈ 1 ರಿಂದ ತರಗತಿಗಳು ಪ್ರಾರಂಭ

ಉಡುಪಿ : ನೀಟ್, ಸಿಇಟಿ ಮತ್ತು ಜೆಇಇ ಕೋರ್ಸ್ಗಳ ಅತ್ಯುತ್ತಮ ತರಬೇತಿಯನ್ನು ನೀಡುವ ಉಡುಪಿಯ ಮದರ್ ಆಫ್ ಸಾರೋಸ್ ಚರ್ಚ್ ಕಾಪೌಂಡ್‌ನಲ್ಲಿರುವ ನೂತನವಾಗಿ ಆರಂಭಗೊಂಡ ‘ಇನ್ಸ್ ಪಾಯರ್ ನೀಟ್ ಅಕಾಡೆಮಿ’ಯಲ್ಲಿ ತರಗತಿಗಳು ಜುಲೈ 01, 2023 ರಂದು ಪ್ರಾರಂಭವಾಗಲಿದೆ. ಇಲ್ಲಿ ನೀಟ್ ದೀರ್ಘಾವಧಿಯ ಕೋರ್ಸ್ಗಳು ನೀಟ್, ಸಿಇಟಿ, ಜೆಇಇ ನಿಯಮಿತ ವಾರಾಂತ್ಯದ ಬ್ಯಾಚ್