Monthly Archives: September, 2023

ಮಣಿಪಾಲದಲ್ಲಿ ವಿಸ್ಡಮ್ ಎಡ್ ನೂತನ ಶಾಖೆ ಕಾರ್ಯಾರಂಭ

ಉಡುಪಿಯ ಮಣಿಪಾಲದಲ್ಲಿ ವಿಸ್ಡಮ್ ಎಡ್ ಇದರ ನೂತನ ಶಾಖೆಯು ಕಾರ್ಯಾರಂಭಗೊಂಡಿತು. ಉಡುಪಿ ಕ್ಷೇತ್ರದ ಶಾಸಕ ಯಶಪಾಲ್ ಸುವರ್ಣ ಅವರು ನೂತನ ಶಾಖೆ ಉದ್ಘಾಟಿಸಿದರು. ಈ ಸಂದರ್ಭ ಉಜ್ವಲ್ ಕನ್ಸ್ಟ್ರಕ್ಷನ್ಸ್ ಇದರ ಮಾಲಿಕರಾದ ಪುರುಷೋತ್ತಮ್...

ಕನ್ನಡ ಭಾಷೆ, ಸಂಸ್ಕೃತಿ ಕಲಿಕೆ ಅಗತ್ಯ: ಡಾ. ಸುಬ್ರಹ್ಮಣ್ಯ ಕೆ.

ಉಜಿರೆ, ಸೆ.7: “ಪಾಶ್ಚಾತ್ಯ ಸಾಹಿತ್ಯದೆಡೆಗಿನ ಅತಿಯಾದ ಒಲವಿನ ಪರಿಣಾಮದಿಂದ ಕನ್ನಡ ಭಾಷೆ ಹಾಗೂ ಸಂಸ್ಕೃತಿ ನಮ್ಮಿಂದ ದೂರವಾಗುತ್ತಿದೆ. ಭಾಷೆ, ಸಂಸ್ಕೃತಿಯನ್ನು ಕಲಿತು, ಉಳಿಸುವುದು ಇಂದಿನ ಅಗತ್ಯವಾಗಿದೆ” ಎಂದು ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಸುಬ್ರಹ್ಮಣ್ಯ ಕೆ. ಅಭಿಪ್ರಾಯಪಟ್ಟರು. ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಇಂದು (ಸೆ.7) ಕನ್ನಡ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭಾಷೆ ಕೇವಲ ಸಂವಹನ ಮಾಧ್ಯಮವಲ್ಲ, ಅದು ಸಂಸ್ಕೃತಿಯ ವಾಹಕವೂ ಆಗಿದೆ. ಸಾಹಿತ್ಯ, ಪರಂಪರೆ, ಸಂಸ್ಕೃತಿಯ ಕೊಂಡಿಯಾಗಿರುವ ವಿದ್ಯಾರ್ಥಿಗಳು ಸಂಸ್ಕೃತಿಯನ್ನು ಅರಿತು, ಭಾಷೆಯ ಬಗ್ಗೆ ಒಲವು ಮೂಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು. “2,300 ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಕಲಿಯುವುದು ನಮ್ಮ ಹೆಮ್ಮೆ. ಪ್ರಾಚೀನ ಸಾಹಿತ್ಯದ ಪದಗಳಲ್ಲಡಗಿರುವ ಅರ್ಥವನ್ನು ಹುಡುಕುವ, ಆಲೋಚಿಸುವ, ವಿಮರ್ಶಿಸುವ ಮನೋಭಾವ ನಮ್ಮಲ್ಲಿರಬೇಕು. ಅಧ್ಯಾಪಕರು ಕೂಡ ಅಧ್ಯಯನಶೀಲರಾಗಿ ವಿದ್ಯಾರ್ಥಿಗಳನ್ನು ಪ್ರೇರಿಸಬೇಕು" ಎಂದು ಅವರು ಕಿವಿಮಾತು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ, "ವಿದ್ಯಾರ್ಥಿಗಳು ಓದುವ, ಬರೆಯುವ ಅಭ್ಯಾಸ ರೂಢಿಸಿಕೊಳ್ಳಬೇಕು. ವಿಶೇಷವಾಗಿ, ವ್ಯಾಕರಣದ ಬಗ್ಗೆ ಅಧ್ಯಯನ ಮಾಡುವ ಸಾಹಿತ್ಯದ ವಿದ್ಯಾರ್ಥಿಗಳು ಭಾಷಾ ಸ್ವಚ್ಛತೆ ಬಗ್ಗೆ ಗಮನ ಕೊಡುವುದು ಅಗತ್ಯ” ಎಂದು ಸಲಹೆ ನೀಡಿದರು. 2023-24 ನೇ ಸಾಲಿನ ಕನ್ನಡ ಸಂಘದ ವಿದ್ಯಾರ್ಥಿ ಪ್ರತಿನಿಧಿಗಳ ಪದಗ್ರಹಣ ನಡೆಯಿತು. ಸಂಘದ ಕಾರ್ಯದರ್ಶಿಯಾಗಿ ಜಾನ್ಹವಿ ಎಸ್., ಜತೆ ಕಾರ್ಯದರ್ಶಿಯಾಗಿ ವಿಘ್ನೇಶ ಮತ್ತು ಪದಾಧಿಕಾರಿಗಳಾಗಿ ಉಲ್ಲೇಖ, ಶಂಕರ್, ಜೀವಿತ್ ಹಾಗೂ...

ಮಂಗಳೂರು: ಇಸ್ಕಾನ್ ಮಂದಿರದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಸಂಭ್ರಮ

ಮಂಗಳೂರಿನ ಪಿವಿಎಸ್ ಕಲಾಕುಂಜದಲ್ಲಿರುವ ಇಸ್ಕಾನ್ ಮಂದಿರದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿಯು ಸಂಭ್ರಮ-ಸಡಗರದೊಂದಿಗೆ ಸಂಪನ್ನಗೊಂಡಿತು. ಭಕ್ತರು ಇಸ್ಕಾನ್ ಮಂದಿರಕ್ಕೆ ಭೇಟಿ ನೀಡಿ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಶ್ರೀಕೃಷ್ಣ ದೇವರಿಗೆ ಹಾಲು, ಮೊಸರು, ತುಪ್ಪ, ಜೇನುತುಪ್ಪ, ಸಿಹಿ...

ಸುರತ್ಕಲ್: ಅನುದಾನ ಸಿಗದೆ ಆಶ್ರಯ ಮನೆ ಪೂರ್ಣಗೊಂಡಿಲ್ಲ-ಫಲಾನುಭವಿಗಳ ಅಳಲು

ಸುರತ್ಕಲ್: ಅನುದಾನ ಸಿಗದೇ ಆಶ್ರಯ ಮನೆ ಪೂರ್ಣಗೊಂಡಿಲ್ಲ. ಆರ್ಥಿಕ ಸಂಕಷ್ಟದಿಂದಾಗಿ ಬಾಡಿಗೆ ಮನೆಯಲ್ಲಿ ಇರುವುದೂ ಸಾಧ್ಯವಾಗುತ್ತಿಲ್ಲ. ಹೃದಯ ಖಾಯಿಲೆಯಿಂದ ಬಳಲುತ್ತಿದ್ದು ಕೆಲಸ ಮಾಡಲೂ ಆಗುತ್ತಿಲ್ಲ. ನಮಗೆ ಎಪಿಎಲ್ ಕಾರ್ಡು ಬದಲು ಬಿಪಿಎಲ್ ಮಾಡಿ...

ಉಡುಪಿ: ಹುಲಿ ಕುಣಿತ ಬೀಟ್‍ಗೆ ಹೆಜ್ಜೆ ಹಾಕಿದ ನಟ ರಕ್ಷಿತ್ ಶೆಟ್ಟಿ ಮತ್ತು ತಂಡ

ಉಡುಪಿಯ ಮಲ್ಪೆ ಸಮೀಪದ ಕೊಳ ಎಂಬಲ್ಲಿ ನಡೆದ ಹುಲಿ ವೇಷ ಸ್ಪರ್ಧೆಯಲ್ಲಿ ಸಪ್ತಸಾಗರದಾಚೆ ಎಲ್ಲೋ ಚಿತ್ರತಂಡದ ಕಲಾವಿದರು ಭಾಗವಹಿಸಿದ್ದರು. ನಟ ರಕ್ಷಿತ್ ಶೆಟ್ಟಿ ಮತ್ತು ತಂಡ ಭೇಟಿ ನೀಡಿ ಹುಲಿ ಕುಣಿತ ಬೀಟ್‍ಗೆ...

ಶಿಶಿಲ: ಮಿಯ್ಯಾರು ರಕ್ಷಿತಾರಣ್ಯದಲ್ಲಿ ಮರ ಕಡಿದು ದಾಸ್ತಾನು-ಓರ್ವನ ಬಂಧನ

ಶಿಶಿಲ: ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಮಿಯ್ಯಾರು ರಕ್ಷಿತಾರಣ್ಯದ ಹೇವಾಜೆಯಲ್ಲಿ ಅಕ್ರಮವಾಗಿ ಮರ ಕಡಿದು ದಾಸ್ತಾನು ಮಾಡುತ್ತಿದ್ದಾಗ ಉಪ್ಪಿನಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳ ತಂಡ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಓರ್ವ...

ನೆಲ್ಯಾಡಿ: ಕಾಡಾನೆ ದಾಳಿ ತಡೆಗಟ್ಟುವ ಬಗ್ಗೆ ತಜ್ಞರಿಂದ ಮಾಹಿತಿ ಹಾಗೂ ಪ್ರಾತ್ಯಕ್ಷತೆ

ನೆಲ್ಯಾಡಿ: ಅರಣ್ಯ ಇಲಾಖೆ ವತಿಯಿಂದ ಇಚ್ಲಂಪಾಡಿ ಗ್ರಾಮದ ಸೈಂಟ್ ಜಾರ್ಜ್ ಅರ್ಥೋಡಾಕ್ಸ್ ಸೀರಿಯನ್ ಚರ್ಚ್‍ನಲ್ಲಿ ನಾಗರಿಕರಿಗೆ ಕಾಡಾನೆಗಳು ತೋಟಕ್ಕೆ ಬರದಂತೆ ತಡೆಗಟ್ಟುವ ಹಾಗೂ ಬಂದರೆ ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಪ್ರಾತ್ಯಕ್ಷಿಕೆ ಮತ್ತು ಮಾಹಿತಿ...

ವಿಟ್ಲ: ಅನುದಾನ ಹಂಚಿಕೆಯಲ್ಲಿ ಬಿಜೆಪಿ ಸದಸ್ಯರ ಕಡೆಗಣನೆ-ಧರಣಿ

ವಿಟ್ಲ: ನಗರೋತ್ಥಾನ ಹಾಗೂ 15ನೇ ಹಣಕಾಸು ಯೋಜನೆಯ ಅನುದಾನ ಹಂಚಿಕೆಯಲ್ಲಿ ಬಿಜೆಪಿ ಬೆಂಬಲಿತ 12 ಮಂದಿ ಸದಸ್ಯರನ್ನು ಕಡೆಗಣಿಸಲಾಗಿದೆ. ಶಾಸಕರು ಅನುದಾನವನ್ನು ಎಲ್ಲರಿಗೂ ಸಮನಾಗಿ ಹಂಚಬೇಕು ಎಂದು ಆಗ್ರಹಿಸಿ ಸೆ.7ರಂದು ಪಟ್ಟಣ ಪಂಚಾಯಿತಿ...

ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿ ಕೃಷ್ಣಾಷ್ಟಮಿಯ ಸಂಭ್ರಮದಲ್ಲಿ ಭಾಗಿಯಾದ ಸ್ಪೀಕರ್ ಯು.ಟಿ.ಖಾದರ್

ಉಡುಪಿಯ ಶ್ರೀಕೃಷ್ಣ ಮಠಕ್ಕೆ ಸ್ಪೀಕರ್ ಯು.ಟಿ.ಖಾದರ್ ಭೇಟಿ ನೀಡಿ ಕೃಷ್ಣಾಷ್ಟಮಿಯ ಸಂಭ್ರಮದಲ್ಲಿ ಭಾಗಿಯಾದರು. ಮಠದೊಳಗೆ ಭೇಟಿ ನೀಡಿದ ಯು.ಟಿ.ಖಾದರ್ ಅವರನ್ನು ಸತ್ಯನಾರಾಯಣ ಭಟ್ ಮತ್ತು ಸಮಿತಿಯವರು ಶಾಲು ಹೊದಿಸಿ ಸ್ವಾಗತಿಸಿದರು. ಪ್ರಸಾದವನ್ನು ನೀಡಿ ಹರಸಿದರು. ಬುಧವಾರ...

ಹಿರಿಯ ರಂಗಕರ್ಮಿ, ತರಬೇತುದಾರ, ಸಂಘಟಕ ಮಂಜು ವಿಟ್ಲ ಇನ್ನಿಲ್ಲ

ಬಂಟ್ವಾಳ: ಹಿರಿಯ ರಂಗಕರ್ಮಿ, ನಟ, ನಿರ್ದೇಶಕ, ತರಬೇತುದಾರ, ಸಂಘಟಕ, ಕಾರ್ಯಕ್ರಮ ನಿರೂಪಕ ಮಂಜು ವಿಟ್ಲ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನಲ್ಲಿರುವ ಪುತ್ರಿ ಮನೆಯಲ್ಲಿ ಬುಧವಾರ ನಿಧನರಾದರು.ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಮತ್ತು ಕಲಾ ಕ್ಷೇತ್ರಗಳಲ್ಲಿ...

Most Read