Home 2023 September (Page 21)

ಬಂಟ್ವಾಳ: ಹೈಕೋರ್ಟ್ ನ್ಯಾಯಾಧೀಶರಾದ ಬಿ. ಎಂ. ಶ್ಯಾಮ್ ಪ್ರಸಾದ್ ಬಂಟ್ವಾಳ ನ್ಯಾಯಾಲಯಕ್ಕೆ ಭೇಟಿ

ಬಂಟ್ವಾಳದಲ್ಲಿ ಹೊಸ ನ್ಯಾಯಾಲಯ ಸಂಕೀರ್ಣ ಮತ್ತು ವಕೀಲರ ಭವನದ ಸ್ಥಳ ಪರಿಶೀಲನೆಗಾಗಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಬಿ. ಎಂ. ಶ್ಯಾಮ್ ಪ್ರಸಾದ್ ಅವರು ಬಂಟ್ವಾಳ ನ್ಯಾಯಾಲಯಕ್ಕೆ ಭೇಟಿ ನೀಡಿದರು. ಈ ಸಂದರ್ಭ ಮಾತನಾಡಿದ ಅವರು ಅತೀ ಶೀಘ್ರದಲ್ಲಿ ವಕೀಲರ ಭವನದ ಜೊತೆಗೆ ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡ ಕಾಮಗಾರಿ ಪ್ರಾರಂಭ ಮಾಡುವ ಪ್ರಾಮಾಣಿಕ ಪ್ರಯತ್ನ

ಉಡುಪಿ : ಅಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವಕ್ಕೆ ಸಿದ್ಧವಾಗಿದೆ ದರ್ಪಣ ಸಂಸ್ಥೆಯ ಹೆಣ್ಣು ಮಕ್ಕಳ ಹುಲಿ ವೇಷ ತಂಡ

ದರ್ಪಣ ಸಂಸ್ಥೆಯ ಹೆಣ್ಣು ಮಕ್ಕಳ ಹುಲಿ ವೇಷ ತಂಡ ಸಿದ್ಧವಾಗಿದೆ. ಈ ಬಾರಿ ಅಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದಲ್ಲಿ ಹೆಣ್ಣು ಮಕ್ಕಳ ತಂಡದ ಹುಲಿವೇಷ ಕುಣಿತ ವಿಶೇಷ ಗಮನ ಸೆಳೆಯಲಿದೆ. ಈ ಮೂಲಕ ಸಾಂಪ್ರದಾಯಿಕ ಕಲೆಯಾದ ಹುಲಿ ವೇಷ ಕುಣಿತವನ್ನು ಉಳಿಸಿ ಬೆಳೆಸುವಲ್ಲಿ ದರ್ಪಣ ಸಂಸ್ಥೆಯ ಹೆಣ್ಣು ಮಕ್ಕಳ ತಂಡ ಮುಂದಡಿಯಿಟ್ಟಿದೆ. ಈ ಕುರಿತು ದರ್ಪಣ ಸಂಸ್ಥೆಯ ನೃತ್ಯ

ಮಂಜೇಶ್ವರ: ಉಪಯೋಗ ಶೂನ್ಯವಾದ ಪ್ಲಾಸ್ಟಿಕ್ ನಿಕ್ಷೇಪ ಕೇಂದ್ರ

ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತಿಯ 8 ನೇ ವಾರ್ಡ್ ವ್ಯಾಪ್ತಿಯಲ್ಲಿರುವ ಪ್ಲಾಸ್ಟಿಕ್ ನಿಕ್ಷೇಪ ಕೇಂದ್ರ ಉಪಯೋಗ ಶೂನ್ಯವಾಗಿ ಸುಮಾರು 2 ವರ್ಷ ಕಳೆದರೂ ಯಾರೂ ಇತ್ತ ಕಡೆ ಗಮನ ಹರಿಸುತ್ತಿಲ್ಲವೆಂದು ಸ್ಥಳೀಯರು ಆರೋಪಿಸಿದ್ದಾರೆ. ಮಾಲಿನ್ಯ ನಿಕ್ಷೇಪ ಕೇಂದ್ರದಲ್ಲಿ ಶೇಖರಿಸಿಡಬೇಕಾದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ನಿಕ್ಷೇಪ ಕೇಂದ್ರದ ಹೊರಗಡೆ ಹಾಗೂ ಸಾರ್ವಜನಿಕ

ವಿದ್ಯಾರ್ಥಿಗಳಿಗೆ ಅಂಕದ ಹುಚ್ಚು ಬಿಡಿಸಿ, ಪುಸ್ತಕದ ಹುಚ್ಚು ಹಿಡಿಸಿ: ಡಾ. ಶಿಕಾರಿಪುರ ಕೃಷ್ಣಮೂರ್ತಿ

ದ.ಕ.ಜಿಲ್ಲಾ ಸಾಹಿತ್ಯ ಪರಿಷತ್ ನ ತಾಲೂಕು ಘಟಕದ ಆಶ್ರಯದಲ್ಲಿ, ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಮತ್ತು ಮಂಗಳೂರು ಲಯನ್ಸ್ ಮತ್ತು ಲಿಯೋ ಕ್ಲಬ್ ಸಹಕಾರದಲ್ಲಿ, ಶಿಕ್ಷಕರ ದಿನಾಚರಣೆ ಮತ್ತು ಶಿಕ್ಷಕರಿಗೆ ಸಂಮಾನ ಕಾರ್ಯಕ್ರಮ ನಂತೂರು ಪದುವ ಶ್ರೀ ಭಾರತೀ ಕಾಲೇಜಿನ ಶ್ರೀ ಶಂಕರಶ್ರೀ ಸಭಾಂಗಣದಲ್ಲಿ ಮಂಗಳವಾರ ಸಂಜೆ ನಡೆಯಿತು. ಲಯನ್ಸ್ ಕ್ಲಬ್ ಮಂಗಳೂರು ಅಧ್ಯಕ್ಷ ಲ.

ಉಳ್ಳಾಲ : ಗಾಂಜಾ ವ್ಯಸನಕ್ಕೆ ಬಲಿಯಾಗಿದ್ದ ಯುವಕ ಆತ್ಮಹತ್ಯೆ

ಬೈಕ್ ಕಳವುಗೈದು ಉಳ್ಳಾಲ ಪೊಲೀಸರಿಂದ ಬಂಧಿತನಾಗಿದ್ದ ಆರೋಪಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ.ಗಾಂಜಾ ವ್ಯಸನಕ್ಕೆ ಬಲಿಯಾಗಿದ್ದ ಯುವಕ ಸೇದಲು ಗಾಂಜಾ ಸಿಗದೆ ಜಿಗುಪ್ಸೆಗೊಂಡು ಇಂದು ಬೆಳಿಗ್ಗೆ ಮನೆಯಲ್ಲಿ ಸಾವಿಗೆ ಶರಣಾಗಿದ್ದಾನೆ.ತಲಪಾಡಿ ಗ್ರಾಮದ ನಾರ್ಲ,ಪಡೀಲ್ ನಿವಾಸಿ ಪೈಝಲ್(24) ಆತ್ಮಹತ್ಯೆಗೈದ ಯುವಕ.ಫೈಝಲ್ ಇಂದು ಬೆಳಿಗ್ಗೆ ತನ್ನ ಮನೆಯ ಮೊದಲ ಅಂತಸ್ತಿನ

ಅರ್ಥಪೂರ್ಣವಾಗಿ ಶಿಕ್ಷಕರ ದಿನವನ್ನು ಆಚರಿಸಿದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ

ವಿಟ್ಲ – ಪೆರಾಜೆ, ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸ್ಕಾಲರ್ ಶಿಪ್ ಮಾಸ್ಟರ್ ಎಂದೇ ಖ್ಯಾತರಾದ ನಿವೃತ್ತ ಸರಕಾರಿ ಶಿಕ್ಷಕರಾದ ಶ್ರೀ ನಾರಾಯಣ ನಾಯ್ಕ್ ರವರು ಮಾತನಾಡಿ, ” ಎರಡು ರೀತಿಯ ದೇವರು

ಕಮೀಷನರ್ ವರ್ಗಾವಣೆ : ಡ್ರಗ್ಸ್ ವಿರುದ್ದದ ಹೋರಾಟದಲ್ಲಿ ಪೊಲೀಸರ ನೈತಿಕ ಸ್ಥೈರ್ಯ ಕ್ಕೆ ಹೊಡೆತ : ಶಾಸಕ ಡಾ.ಭರತ್ ಶೆಟ್ಟಿ

ಮಂಗಳೂರು: ನಗರದಲ್ಲಿ ವ್ಯಾಪಕವಾಗಿ ಜಾಲಹರಡಿದ್ದ ಮಾದಕ ವಸ್ತುಗಳ ಮಾರಾಟ,ಸೇವನೆ,ಡ್ರಗ್ಸ್ ಪೆಡ್ಲರ್ ಗಳ ಅಟ್ಟಹಾಸವನ್ನು ಸಮಪರ್ಕವಾಗಿ ನಿಗ್ರಹಿಸಿ ನಗರವನ್ನು ಕಾನೂನು ಅಸ್ತ್ರ ಸ್ವಚ್ಚಮಾಡುತ್ತಿದ್ದ ಪೊಲೀಸ್ ಕಮೀಷನರ್ ಕುಲ ದೀಪ್ ಜೈನ್ ಅವರ ವರ್ಗಾವಣೆಯಿಂದ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕ್ಕೆ ಹೊಡೆತ ನೀಡಲಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಕಿಡಿ

ದುಬಾಯಿಯಲ್ಲಿ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ 2023 ಆಚರಣೆಗೆ ಸರ್ವ ಸಿದ್ಧತೆ

ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಪ್ರಾಯೋಜಕತ್ವದಲ್ಲಿ, “ಮಕ್ಕಳಿಗೆ ತಾಯ್ನಾಡಿನ ಪರಂಪರೆ-ಕಲೆ- ಸಂಸ್ಕೃತಿ-ಹಬ್ಬ-ಆಚರಣೆಗಳ ಪರಿಚಯ ಯೋಜನೆಯಡಿಯಲ್ಲಿ ” ಕಳೆದ ಕೆಲ ವರ್ಷಗಳಿಂದ ಆಚರಿಸಿಕೊಂಡು ಬರುತ್ತಿರುವಂತೆ, ಮತ್ತಷ್ಟು ವೈಭವ-ಸಡಗರ ಮತ್ತು ನವರೂಪದಿಂದ ಈ ಸಲವೂ, ಸಾರ್ವಜಿನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ -2023 ಆಚರಣೆಗೆ ಸರ್ವ ಸಿದ್ಧತೆಗಳನ್ನು

ಮಂಗಳೂರು: ತನಿಷ್ಕ್ ಜ್ಯುವೆಲ್ಲರ್ಸ್ ವತಿಯಿಂದ ಶಿಕ್ಷಕರ ದಿನಾಚರಣೆ

ಮಂಗಳೂರಿನ ಬಲ್ಮಠ ಸಮೀಪದ ತನಿಷ್ಕ್ ಜ್ಯುವೆಲ್ಲರ್ಸ್ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ವಿನೂತನವಾಗಿ ಆಚರಿಸಲಾಯಿತು. ಈಗಾಗಲೇ ಚಿನ್ನಾಭರಣ ಮಾರಾಟದಲ್ಲಿ ಹೆಸರುವಾಸಿಯಾಗಿರುವ ಮಂಗಳೂರಿನ ತನಿಷ್ಕ್ ಜ್ಯುವೆಲ್ಲರ್ಸ್ ನಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಶಿಕ್ಷಕಿಯರು ದೀಪಬೆಳಗಿಸಿ, ಕೇಕ್ ಕತ್ತರಿಸಿ ಉದ್ಘಾಟಿಸಿದರು. ಇದೇ

ಮಂಜೇಶ್ವರ: ಪೋಲಿಸರ ಮೇಲೆ ಹಲ್ಲೆ-ಜಿಲ್ಲಾ ಪಂಚಾಯತ್ ಸದಸ್ಯ ಅಬ್ದುರ್ ರಹ್ಮಾನ್ ಬಂಧನ

ಉಪ್ಪಳ ಹಿದಾಯತ್ ನಗರದಲ್ಲಿ ಪೋಲಿಸರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯನನ್ನು ಮಂಜೇಶ್ವರ ಪೋಲಿಸರು ಬಂಧಿಸಿದ್ದಾರೆ. ಮುಸ್ಲಿಂ ಲೀಗ್ ಮುಖಂಡ, ಯೂತ್ ಲೀಗ್ ಜಿಲ್ಲಾ ಕಾರ್ಯದರ್ಶಿ, ಉಪ್ಪಳ ಹಿದಾಯತ್ ಬಜಾರ್‍ನ ಗೋಲ್ಡನ್ ಅಬ್ದುಲ್ ರಹಮಾನ್ ಬಂಧಿತ ಆರೋಪಿಯಾಗಿದ್ದಾನೆ. ಉಪ್ಪಳ ಹಿದಾಯತ್ ನಗರದಲ್ಲಿ