Home 2023 September (Page 3)

ಉಡುಪಿ: ಅಕ್ರಮ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರಿಂದ ತರಾಟೆ

ಸದ್ಯ ಉಡುಪಿ ಜಿಲ್ಲೆಯಲ್ಲಿ ಮರಳು ಗಣಿಗಾರಿಕೆ ಸಂಪೂರ್ಣ ಬಂದ್ ಆಗಿದ್ದು, ಅಧಿಕೃತ ಮರಳು ಗಣಿಗಳು ಮಾತ್ರ ಕಾರ್ಯಚರಣೆ ಮಾಡುತ್ತಿವೆ. ಇಂತಹ ಸಂದರ್ಭದಲ್ಲೂ ಕೂಡ ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದ ವಿಡಿಯೋ ಒಂದು ವೈರಲ್ ಆಗಿದೆ. ಕುಂದಾಪುರ ತಾಲೂಕು ಬೇಳೂರು ಗ್ರಾಮ ಪಂಚಾಯತ್ ವತಿಯಿಂದ ನಡೆಯುತ್ತಿರುವ ಸಕ್ರಮ ಮರುಳುಗಾರಿಕೆಯನ್ನ ದುರುಪಯೋಗ ಪಡಿಸಿಕೊಂಡ ಕೆಲ

ಕಡಬ : ವ್ಯಕ್ತಿಯ ಮೇಲೆ ಕಾಡಾನೆ ದಾಳಿ- ಗಂಭೀರ ಗಾಯ

ಕಡಬ: ಐತ್ತೂರು ಗ್ರಾಮದ ನೇಲ್ಯಡ್ಕ ಎಂಬಲ್ಲಿ ಕಾಡಾನೆಯೊಂದು ವ್ಯಕ್ತಿಯೋರ್ವರ ಮೇಲೆ ದಾಳಿ ನಡೆಸಿದ್ದು, ಅವರಿಗೆ ಗಂಭೀರ ಗಾಯವಾಗಿದ್ದು ಅವರನ್ನು ಕಡಬ ಆಸ್ಪತ್ರೆಗೆ ದಾಖಲಿಸಲಾಗಿದೆ.ಐತ್ತೂರು ಗ್ರಾಮದ ಗೇರ್ತಿಲ ನಿವಾಸಿ ಚೋಮ ಎಂಬವರು ಮರ್ದಾಳದಿಂದ ಕೊಣಾಜೆ ಮಾರ್ಗವಾಗಿ ಮನೆ ಕಡೆಗೆ ಹೋಗುತ್ತಿದ್ದ ವೇಳೆ ಸುಳ್ಯ ಎಂಬಲ್ಲಿ ಕಾಡಾನೆ ದಾಳಿ ನಡೆಸಿದೆ.

ಮಂಗಳೂರು: ತುಳು ರಂಗಭೂಮಿಯಲ್ಲಿ ಸದಭಿರುಚಿಯ ಬದಲಾವಣೆ: ರಂಗಕರ್ಮಿ, ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್‌ಬೈಲ್

ಮಂಗಳೂರು : ತುಳು ನಾಟಕ ಹಾಗೂ ಸಿನಿಮಾ ರಂಗದಲ್ಲಿ ನಿರಂತರ ಕಾಮಿಡಿ ನೋಡಿ ಜನತೆಗೆ ಸಾಕಾಗಿ ಹೋಗಿದೆ. ಹಾಗಾಗಿ ಪ್ರೇಕ್ಷಕರು ಬದಲಾವಣೆ ಬಯಸಿದ್ದಾರೆ. ಗಂಭೀರ, ತಿಳಿ ಹಾಸ್ಯದ ತುಳು ನಾಟಕಗಳನ್ನು ಇಷ್ಟಪಡುತ್ತಾರೆ. ಪ್ರೇಕ್ಷಕರ ಮನೋಧರ್ಮ ಅರಿತು ತುಳು ನಾಟಕ, ಸಿನಿಮಾಗಳಲ್ಲಿ ಸದಭಿರುಚಿಯ ಬದಲಾವಣೆ ತರಬೇಕಾಗಿದೆ ಎಂದು ರಂಗಕರ್ಮಿ, ನಟ, ನಿರ್ದೇಶಕ ವಿಜಯಕುಮಾರ್

ಚೆನ್ನೈ: ಹಸಿರು ಕ್ರಾಂತಿಯ ಹರಿಕಾರ ಎಂ.ಎಸ್. ಸ್ವಾಮಿನಾಥನ್ ವಿಧಿವಶ

ಪ್ರಖ್ಯಾತ ವಿಜ್ಞಾನಿ ಹಾಗೂ ಅಧಿಕ ಇಳುವರಿಯ ಭತ್ತದ ತಳಿ ಅಭಿವೃದ್ಧಿಯಿಂದ ದೇಶದ ಆಹಾರ ಭದ್ರತೆಯಲ್ಲಿ ಪ್ರಮುಖ ಪಾತ್ರ ವಹಿಸುವ ಮೂಲಕ ಹಸಿರು ಕ್ರಾಂತಿಯ ಹರಿಕಾರ ಎಂದೇ ಪ್ರಸಿದ್ಧರಾಗಿದ್ದ ಎಂ.ಎಸ್.ಸ್ವಾಮಿನಾಥನ್ (98) ಚೆನ್ನೈನಲ್ಲಿ ನಿಧನರಾದರು. ಮೊಂಕೊಂಬು ಸಾಂಬಶಿವನ್ ಸ್ವಾಮಿನಾಥನ್ ಅವರು 1925ರ ಆ. 7ರಂದು ತಮಿಳುನಾಡಿನ ತಂಜಾವೂರು ಜಿಲ್ಲೆಯಲ್ಲಿ ಜನಿಸಿದರು.

ನೆಲ್ಯಾಡಿ: ಕೊಕ್ಕಡ-ಮಲ್ಲಿಗೆಮಜಲು ಫಝಲ್ ಜಮಾ ಮಸೀದಿ ಯಲ್ಲಿ ಸಂಭ್ರಮದ ಈದ್ ಮಿಲಾದ್

ನೆಲ್ಯಾಡಿ: ಪ್ರವಾದಿ ಮುಹಮ್ಮದ್‌ ಪೈಗಂಬರರ ಜನ್ಮ ದಿನಾಚರಣೆಯನ್ನು ಮಲ್ಲಿಗೆಮಜಲು ಫಝಲ್ ಜಮಾ ಮಸೀದಿ ಯಲ್ಲಿ ಇಂದು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಮದರಸಾ ಮಕ್ಕಳಿಂದ ಪ್ರವಾದಿ ಕುರಿತ ಗಾನಗೀತೆಗಳು, ಪ್ರಭಾಷಣಗಳು ಮತ್ತಿತರ ಹಲವು ಕಾರ್ಯಕ್ರಮಗಳನ್ನು ಏರ್ಪಡಿಸಲಾಯಿತು. ಕಾಲ್ನಡಿಗೆ ಜಾಥಾ ಮೂಲಕ ಪ್ರವಾದಿ ಜೀವನ ಸಂದೇಶವನ್ನು ಸಾರಲಾಯಿತು. ಮೆರವಣಿಗೆಯಲ್ಲಿ ಮದ್ರಸ

ಲಾರಿ ಮಾಲಕರು – ಟ್ರಾನ್ಸ್‌ಪೋರ್ಟರ್ಸ್ ನಡುವೆ ಸಂಧಾನ ವಿಫಲ : ಸೆ.29 ರಿಂದ ಲಾರಿ ಮುಷ್ಕರ

ಮಂಗಳೂರು : ಇಲ್ಲಿನ ಪಣಂಬೂರು ಪೊಲೀಸ್ ಉಪ ಆಯುಕ್ತರ ಕಚೇರಿಯಲ್ಲಿ ಸೆ.27 ರಂದು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಲಾರಿ ಮಾಲಕರು ಹಾಗೂ ಟ್ರಾನ್ಸ್‌ಪೋರ್ಟರ್ಸ್ ನಡುವೆ ನಡೆದ ಸಂಧಾನ ಸಭೆ ವಿಫಲವಾಗಿದ್ದು, ಸೆ.29 ರ ಶುಕ್ರವಾರದಿಂದ ಲಾರಿ ಮುಷ್ಕರ ನಡೆಯಲಿದೆ. ಸಭೆಯ ಬಳಿಕ ಲಾರಿ ಮಾಲಕರ ಸಂಘದ ಅಧ್ಯಕ್ಷ ಸುಶಾಂತ್ ಶೆಟ್ಟಿ ಮಾತನಾಡಿ ‘ಲಾರಿ ಮಾಲಕರ

ಸುಳ್ಯ: ಕೆವಿಜಿ ಶಿಕ್ಷಣ ಸಂಸ್ಥೆಗಳ ಎ.ಎಸ್. ರಾಮಕೃಷ್ಣ ಕೊಲೆ ಪ್ರಕರಣ: 6 ಮಂದಿ ದೋಷಿಗಳೆಂದು ಹೈಕೋರ್ಟ್ ತೀರ್ಪು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಸುಳ್ಯ ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾಗಿದ್ದ ಎ.ಎಸ್. ರಾಮಕೃಷ್ಣ ಅವರ ಹತ್ಯೆ ಪ್ರಕರಣದ ತೀರ್ಪನ್ನು ರಾಜ್ಯ ಹೈ ಕೊರ್ಟು ಪ್ರಕಟಿಸಿದೆ. ಈ ಪ್ರಕರಣದಲ್ಲಿ ಡಾ.ರೇಣುಕಾ ಪ್ರಸಾದ್ ಸೇರಿದಂತೆ 6 ಮಂದಿಯನ್ನು ದೋಷಿಗಳು ಎಂದು ತೀರ್ಮಾನಿಸಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. 2011ರ ಏಪ್ರಿಲ್

ಉಳ್ಳಾಲ: ಬೆಳ್ಮ ಗ್ರಾಮಕ್ಕೆ ಗಾಂಧಿ ಗ್ರಾಮ ಪುರಸ್ಕಾರ

ಉಳ್ಳಾಲ: ಬೆಳ್ಮ ಗ್ರಾಮ ಪಂಚಾಯಿತಿ ವರ್ಷದಲ್ಲಿ ಸಾಧಿಸಿದ ಜೀವನ ಗುಣಮಟ್ಟ, ಸ್ವಂತ ಸಂಪನ್ಮೂಲ ಕ್ರೋಢೀಕರಣ, ಮೂಲ ಸೌಕರ್ಯಗಳ ಅಭಿವೃದ್ಧಿ, ತ್ಯಾಜ್ಯ ನಿರ್ವಹಣೆ, ಉತ್ತಮ ಆಡಳಿತ, ಸೇವಾ ಪೂರೈಕೆ ಮತ್ತು ನಾವೀನ್ಯತೆ ಯೋಜನೆಗಳ ಸಹಿತ ಸರಕಾರದ 138 ಪ್ರಶ್ನೆಗಳಿಗೆ ಯಶಸ್ವಿಯಾಗಿ ಪ್ರತಿಕ್ರಿಯಿಸಿದ ಫಲವಾಗಿ 2022-23 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಉಳ್ಳಾಲ

ಇರಾ ಯುವಕ ಮಂಡಲ : ಸೌಹಾರ್ದತೆಗೆ ಸಾಕ್ಷಿಯಾದ ಈದ್‍ಮಿಲಾದ್ ಆಚರಣೆ

ಪ್ರವಾದಿ ಮುಹಮ್ಮದ್ ಪೈಗಂಬರರ ಜನ್ಮದಿನವಾದ ಇಂದು ಈದ್ ಮಿಲಾದ್ ಹಬ್ಬವಾಗಿ ಆಚರಿಸುತ್ತಿದ್ದು, ಇರಾದಲ್ಲಿಯೂ ಮುಸ್ಲಿಂ ಬಾಂಧವರು ಸಂಭ್ರಮದಿಂದ ಹಬ್ಬವನ್ನು ಆಚರಿಸಿದರು. ಸೌಹಾರ್ದತೆಗೆ ಸಾಕ್ಷಿಯಾದ ಇರಾದ ಯುವಕ ಮಂಡಲ ಮತ್ತು ಸುವರ್ಣ ಮಹೋತ್ಸವ ಸಮಿತಿಯ ಸದಸ್ಯರು ಮಿಲಾದ್ ರ್ಯಾಲಿಯಲ್ಲಿ ಪಾಲ್ಗೊಂಡ ಮುಸ್ಲಿಂ ಬಾಂಧವರಿಗೆ ಶುಭಾಶಯಕೋರಿದ್ದು, ಎಲ್ಲರಿಗೂ ಸಿಹಿ ತಿಂಡಿಯನ್ನು

ಹಾಸನ: ಕರ್ನಾಟನ ಬಂದ್‍ಗೆ ನಮ್ಮ ಬೆಂಬಲ ಇದೆ: ಶಾಸಕ ಸಿಮೆಂಟ್ ಮಂಜು

ಕಾವೇರಿ ವಿವಾದದ ಹಿನ್ನೆಲೆಯಲ್ಲಿ ಶುಕ್ರವಾರ ನಡೆಯಲಿರುವ ಕರ್ನಾಟಕ ಬಂದ್‍ಗೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಆಲೂರು ಸಕಲೇಶಪುರ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ಹೇಳಿದರು. ಅವರು ಹಾಸನದಲ್ಲಿ ಮಾತನಾಡಿ, ಆಡಳಿತರೂಡ ಸರ್ಕಾರ ವಕೀಲರನ್ನು ಇಟ್ಟು ವಾದ ಮಾಡುವಲ್ಲಿ ವಿಫಲವಾಗಿದೆ. ನಮ್ಮ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿದ್ದಾರೆ. ನಮಗೆ