Home 2023 October (Page 5)

ಪಡುಬಿದ್ರಿ: ಗೊಂದಲದೊಂದಿಗೆ ಆರಂಭಗೊಂಡ ಸಮಾಜ ಕಲ್ಯಾಣ ಇಲಾಖೆ ಕಾರ್ಯಕ್ರಮ

ನಾಮ್ಕಾವಸ್ಥೆಗೋ ಎಂಬಂತ್ತೆ ಸಮಾಜ ಕಲ್ಯಾಣ ಇಲಾಖೆ ಪಡುಬಿದ್ರಿಯಲ್ಲಿ ನಡೆಸಿದ ಕಾರ್ಯಕ್ರಮದಲ್ಲಿ ದಲಿತ ಮುಖಂಡರು ಕೇಳಲಾದ ಪ್ರಶ್ನೆಗೆ ಸ್ವತಃ ಅಧಿಕಾರಿಗಳೇ ಉತ್ತರಿಸಲಾಗದೆ ತಡವರಿಸಿದ ಘಟನೆ ನಡೆಯಿತು. ಸಮಾಜ ಕಲ್ಯಾಣ ಇಲಾಖೆ ಉಡುಪಿ, ಪಡುಬಿದ್ರಿ ಗ್ರಾಮ ಪಂಚಾಯಿತಿ ಹಾಗೂ ಪಡುಬಿದ್ರಿ ಪೊಲೀಸ್ ಠಾಣೆ ಜಂಟಿಯಾಗಿ ಆಯೋಜಿಸಿದ ಸಭಾ ಕಾರ್ಯಕ್ರಮದ ಸಭಾ ವೇದಿಕೆಗೆ ಹಾಕಲಾದ

ಪುತ್ತೂರು: ಜಿ.ಎಲ್. ಮಹಲ್ ನ ಭಾರತ್ ಸಿನಿಮಾದಲ್ಲಿ ಕಣ್ಣೂರು ಸ್ಕ್ವಾಡ್ ಸಿನಿಮಾ ವೀಕ್ಷಿಸಿದ ಪೊಲೀಸ್ ಅಧಿಕಾರಿಗಳು

ಪುತ್ತೂರು ಜಿಎಲ್ ಮಹಲಿನ ಭಾರತ್ ಸಿನಿಮಾ ಮಂದಿರದಲ್ಲಿ ಪೊಲಿಸ್ ಇಲಾಖೆಯ ವಿನಂತಿ ಮೇರೆಗೆ ಕಣ್ಣೂರ್ ಸ್ಕ್ವಾಡ್ ಸಿನಿಮಾ ವೀಕ್ಷಣೆಗೆ ಜಿಎಲ್ ಸಂಸ್ಥೆ ಅವಕಾಶ ಮಾಡಿಕೊಟ್ಟಿದೆ. ಜಿ ಎಲ್ ಸಂಸ್ಥೆಯ ಮಾಲಕರಾದ ಬಲರಾಮ ಆಚಾರ್ಯ ಅವರ ಕಾರ್ಯವನ್ನು ಮೆಚ್ಚಿ ಪೊಲೀಸ್ ಇಲಾಖೆ ಅಭಿನಂದನಾ ಪತ್ರವನ್ನು ನೀಡಿ ಅಭಿನಂದಿಸಿದರು. ಇದೇ ವೇಳೆ ಜಿಎಲ್ ಸಂಸ್ಥೆಯ ಮಾಲಕರಾದ ಬಲರಾಮ

ದಕ್ಷಿಣ ಕನ್ನಡದ ‘ಮರಳು ಸಮಸ್ಯೆಗೆ ಅಧಿಕಾರಿಗಳೇ ಕಾರಣ …!!

ದಕ್ಷಿಣ ಕನ್ನಡದಲ್ಲಿ ಸೃಷ್ಟಿಯಾದ ಮರಳಿನ ಅಭಾವಕ್ಕೆ ಅಧಿಕಾರಿಗಳೆ ಕಾರಣ ಎಂದು ಸಿವಿಲ್ ಕಾಂಟ್ರಾಕ್ಟರ್ಸ್ ಅಸೋಸಿಯೇಶನ್ ದ.ಕ.ಜಿಲ್ಲಾ ಸಮಿತಿ ಆರೋಪಿಸಿದೆ. ಈ ಸಮಸ್ಯೆಗೆ 10 ದಿನದೊಳಗೆ ಪರಿಹಾರ ಕಲ್ಪಿಸದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಶನ್‍ನ ಅಧ್ಯಕ್ಷ ಮಹಾಬಲ ಕೊಟ್ಟಾರಿ

ಮಂಗಳೂರು: ಸಿಬಿಎಸ್ ಸಿ ದಕ್ಷಿಣ ವಲಯ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ ಕ್ರೀಡಾಕೂಟ : ಗೊನ್ಝಾಗ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ವಿದ್ಯಾರ್ಥಿಗಳು 2023 ರ ಅಕ್ಟೋಬರ್ 19 ರಿಂದ 22 ರವರೆಗೆ ಕರ್ನಾಟಕದ ಕಲಬುರಗಿಯಲ್ನಡೆದ ಸಿಬಿಎಸ್ ಸಿ ದಕ್ಷಿಣ ವಲಯ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿಸಿದರು. 6 ನೇ ತರಗತಿ ವಿದ್ಯಾರ್ಥಿನಿ ತಸ್ಮಯಿ ಶೆಟ್ಟಿ 1000 ಮೀ ಮತ್ತು 500 ಮೀಟರ್‌ಗಳಲ್ಲಿ 2 ಚಿನ್ನದ ಪದಕಗಳನ್ನೂ, 6ನೇ ತರಗತಿ

ಮಂಗಳೂರು: ಆಚಾರ್ಯ ಮಠದ ವಸಂತ ಮಂಟಪದ ಶಾರದೋತ್ಸವ ಸಂಪನ್ನ

ಮಂಗಳೂರು ಶಾರದೆ ಎಂದೇ ಪ್ರಸಿದ್ಧಿ ಪಡೆದಿರುವ ಶ್ರೀ ವೆಂಕಟರಮಣ ದೇವಳದ ಆಚಾರ್ಯ ಮಠದ ವಸಂತ ಮಂಟಪದಲ್ಲಿ ಪೂಜಿಸಲ್ಪಟ್ಟ 101ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವದ ಬೃಹತ್ ವಿಸರ್ಜನಾ ಶೋಭಾಯಾತ್ರೆ ವೈಭವದಿಂದ ನಡೆಯಿತು. ಬುಧವಾರ ಸಂಜೆ ಪೂರ್ಣಾಲಂಕಾರಗೊಂಡ ಶ್ರೀ ಶಾರದಾ ಮಾತೆಯ ದರ್ಶನಕ್ಕೆ ಭಕ್ತಾಧಿಗಳಿಗೆ ಅವಕಾಶ ನೀಡಲಾಗಿದ್ದು, ರಾತ್ರಿ ಮಹಾಮಂಗಳಾರತಿ ಬಳಿಕ

ಮಂಗಳೂರು|| ಬಿಎನ್‍ಐ ಇನ್‍ಸ್ಪೈಯರ್ ಚಾಪ್ಟರ್: ವಿಶೇಷ ಅತಿಥಿಯಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್

ಮಂಗಳೂರಿನ ಬಿಎನ್‍ಐ ಇನ್‍ಸ್ಪೈಯರ್ ಚಾಪ್ಟರ್‍ನ ವಾರದ ವಿಶೇಷ ಮೀಟಿಂಗ್‍ನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ವಿಶೇಷ ಅತಿಥಿಯಾಗಿ ಆಗಮಿಸಿದ್ದು, ಬಿಎನ್‍ಐ ಇನ್‍ಸ್ಪೈಯರ್ ಚಾಪ್ಟರ್‍ನಲ್ಲಿರುವ ಉದ್ಯಮಿಗಳಿಗೆ ಉತ್ಸಾಹ ತುಂಬಿಸಿದರು. ಮಂಗಳೂರಿನಲ್ಲಿ ಉದ್ಯಮ ಕ್ಷೇತ್ರದಲ್ಲಿ

ಮಂಜೇಶ್ವರ: ಸಾರ್ವಜನಿಕ ಸ್ಥಳದಲ್ಲಿ ವಸತಿ ಸಮುಚ್ಚಯದ ಕೊಳಚೆ ನೀರು: ಸ್ಥಳೀಯಾಡಳಿತದ ವಿರುದ್ಧ ಸಾರ್ವಜನಿಕರ ಆಕ್ರೋಶ

ಮಂಜೇಶ್ವರ ಸಮೀಪದ ಕುಂಜತ್ತೂರಿನ ದಾರುಸ್ಸಲಾಂ ಸಲಫಿ ಮಸೀದಿ ತಿರುವಿನಲ್ಲಿರುವ ಖಾಸಗಿ ಅಪಾರ್ಟ್ಮೆಂಟ್‍ನಿಂದ ಶೌಚಾಲಯದ ನೀರು ಸಾರ್ವಜನಿಕ ಸ್ಥಳಕ್ಕೆ ಹಾಗೂ ಸಮೀಪದ ರಸ್ತೆಗೆ ಹರಿದು ಬರುತಿದ್ದು, ಪರಿಸರವೆಲ್ಲ ದುರ್ವಾಸನೆ ಆವರಿಸಿದೆ. ಪರಿಸರವಾಸಿಗಳು ಹಾಗೂ ಈ ದಾರಿಯಿಂದ ಸಾಗುವವರು ಮೂಗು ಮುಚ್ಚಿಕೊಂಡು ಸಾಗುವ ಪರಿಸ್ಥಿತಿ ಎದುರಾಗಿದೆ. ಈ ದಾರಿಯಾಗಿ ದಿನನಿತ್ಯ

ಮಂಗಳೂರು: ದಸರಾದ ಮೆರಗು ಹೆಚ್ಚಿಸಿದ ಕ್ರೈಸ್ತ ಬಾಂಧವರ ಟ್ಯಾಬ್ಲೋ

ಒಂದೇ ಜಾತಿ ಒಂದೇ ಮತ ಒಂದೇ ದೇವರು ಎಂಬ ತತ್ವಚಿಂತನೆಯನ್ನು ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳಿಂದ ಸ್ಥಾಪಿತ ಕುದ್ರೋಳಿ ಶ್ರೀಕ್ಷೇತ್ರದ ದಸರಾ ವಿಶ್ವವಿಖ್ಯಾತ ಮಂಗಳೂರು ದಸರಾವೆಂದೇ ಪ್ರಸಿದ್ಧ. ಈ ದಸರಾ ಶೋಭಾಯಾತ್ರೆಯಲ್ಲಿ ಇದೇ ಮೊದಲ ಬಾರಿಗೆ ಕ್ರೈಸ್ತ ಬಾಂಧವರ ಟ್ಯಾಬ್ಲೊ ಮಂಗಳೂರು ದಸರಾ ಮೆರುಗು ಹೆಚ್ಚಿಸಿದೆ. ಜೊತೆಗೆ ಧರ್ಮಧರ್ಮಗಳ ನಡುವಿನ ಬಾಂಧವ್ಯ

ಮಂಗಳೂರು: ಮಂಗಳೂರು ದಸರಾ ಶೋಭಾಯಾತ್ರೆಯಲ್ಲಿ ಗಮನಸೆಳೆದ ಮಂತ್ರದೇವತೆ ಟ್ಯಾಬ್ಲೋ

ಕುದ್ರೋಳಿ ಕ್ಷೇತ್ರದ ಮಂಗಳೂರು ದಸರಾ ಶೋಭಾಯಾತ್ರೆ ವೈಭವದಿಂದ ನಡೆದಿದ್ದು ಈ ಪೈಕಿ ಅಪ್ಪೆ ಮಂತ್ರದೇವತೆ ಟ್ಯಾಬ್ಲೋ ಜನರ ಗಮನ ಸೆಳೆಯಿತು. ನಗರದ ಪದವು ಫ್ರೆಂಡ್ಸ್ ಕ್ಲಬ್ ವತಿಯಿಂದ ಆಯೋಜಿಸಿದ್ದ 9ನೇ ವರ್ಷದ ಕಾಣಿಕೆಯಾಗಿ ಮಂತ್ರದೇವತೆ ದೈವದ ಸ್ತಬ್ಧಚಿತ್ರ ಮಾಡಲಾಗಿತ್ತು. ಅಪ್ಪೆ ಮಂತ್ರದೇವತೆ ಹೆಸರಿನ ಟ್ಯಾಬ್ಲೋದಲ್ಲಿ ದೈವದ ಅಪಚಾರ ಆಗದಂತೆ, ದೈವಾರಾಧನೆ ಮಹತ್ವ

ಉಡುಪಿ: ಅ.28 ಮತ್ತು 29ರಂದು ವಿಶ್ವ ಬಂಟರ ಸಮ್ಮೇಳನ-2023

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅ.28 ಮತ್ತು 29ರಂದು ವಿಶ್ವ ಬಂಟರ ಸಮ್ಮೇಳನ-2023 ಕ್ರೀಡಾ ಸಂಗಮ ಮತ್ತು ಸಾಂಸ್ಕೃತಿಕ ಸಂಭ್ರಮ ಉಡುಪಿಯಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದು ಐಕಳ ಹರೀಶ್ ಶೆಟ್ಟಿ ಹೇಳಿದರು. ಅವರು ಉಡುಪಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಅಕ್ಟೋಬರ್ 28ರಂದು ಬೃಹತ್ ಮೆರವಣಿಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಬೆಳಿಗ್ಗೆ 9ಗಂಟೆಗೆ